ದೆಹಲಿ ಅಬಕಾರಿ ಹಗರಣ: ಬಿಆರ್‌ಎಸ್ ನಾಯಕಿ ಕವಿತಾ 14 ದಿನ ನ್ಯಾಯಾಂಗ ಬಂಧನ

Date:

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ದೆಹಲಿಯ ರೋಸ್‌ ಅವಿನ್ಯೂ ನ್ಯಾಯಾಲಯ ಆದೇಶಿಸಿದೆ.

- Advertisement -

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಸ್ಟಡಿ ವಿಚಾರಣೆ ವಿಸ್ತರಣೆಗೆ ಅನುಮತಿ ಕೇಳದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಧೀಶರಾದ ಕಾವೇರಿ ಬೇವೆಜಾ ಅವರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ಅಶೋಕ್ ಸಿಂಘಾಲ್ ಜನ್ಮಶತಮಾನೋತ್ಸವ: ಕೋಮುವಾದದ ರೂವಾರಿಯ ವೈಭವೀಕರಣ –...

ಬೆಂಗಳೂರಿನಿಂದ ದೆಹಲಿಯವರೆಗೆ ನಡೆಯುತ್ತಿರುವ ಅಶೋಕ್ ಸಿಂಘಾಲ್ ಅವರ ಜನ್ಮಶತಮಾನೋತ್ಸವದ ಆಚರಣೆಗಳು ಭಾರತದ ಪ್ರಜಾಸತ್ತಾತ್ಮಕ ಭವಿಷ್ಯಕ್ಕೆ ಒಡ್ಡಿರುವ ಅಪಾಯದ ಮುನ್ಸೂಚನೆಯಾಗಿವೆ. ಕೋಮು ಸೌಹಾರ್ದತೆಗೆ ಕೊಳ್ಳಿ ಇಟ್ಟ, ಹಿಂಸಾಚಾರಗಳನ್ನು ಪ್ರೇರೇಪಿಸಿದ ಮತ್ತು ದೇಶದ ಬಹುತ್ವವನ್ನು ಸದಾ...

ಈ ಮೊದಲು ಬಿಆರ್‌ಎಸ್‌ ನಾಯಕಿಯನ್ನು ಮಾ.16ರವರೆಗೆ ಇ.ಡಿ ಕಸ್ಟಡಿಗೆ ನೀಡಲಾಗಿತ್ತು. ನಂತರದಲ್ಲಿ ಕಳೆದ ಶನಿವಾರ ಕಸ್ಟಡಿಯನ್ನು ಮೂರು ದಿನ ವಿಸ್ತರಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಡಿಕೆ ಕದ್ದ ಕಳ್ಳ ಜೈಲಿಗೆ, ಆನೆ ಕದ್ದ ಕಳ್ಳ ಎಲ್ಲಿಗೆ?

ವಿಚಾರಣೆಯ ಸಂದರ್ಭದಲ್ಲಿ ಕವಿತ ಅವರ ವಕೀಲರಾದ ನಿತೀಶ್ ರಾಣ ಅವರು, ಆಕೆಯ ಅಪ್ರಾಪ್ತ ಪುತ್ರನ ಪರೀಕ್ಷೆಯ ಕಾರಣದಿಂದ ಮಧ್ಯಂತರ ಜಾಮೀನು ನೀಡಬೇಕೆಂದು ಮನವಿ ಮಾಡಿದರು.

ಜಾಮೀನು ಅರ್ಜಿಯ ಮನವಿಗೆ ವಾದ ಮಂಡಿಸಿದ ಇ.ಡಿ ಪರ ವಕೀಲರು, ಒಂದು ವೇಳೆ ಮಧ್ಯಂತರ ಜಾಮೀನು ಅರ್ಜಿಯನ್ನು ಪರಿಗಣಿಸಿದರೆ ಮರು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಬೇಕು ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಮಧ್ಯಂತರ ಹಾಗೂ ನಿಯಮಿತ ಜಾಮೀನಿಗೆ ಕಠಿಣ ನಿಯಮಗಳಿವೆ ಎಂದು ಎಂದು ಇದೇ ಸಂದರ್ಭದಲ್ಲಿ ಇ.ಡಿ ಪುನರ್ರಚ್ಚರಿಸಿತು.

ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್‌ ರಾವ್‌ ಅವರ ಪುತ್ರಿಯಾಗಿರುವ 46 ವರ್ಷದ ಕವಿತಾ ಅವರು ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ಪರವಾನಗಿಯಲ್ಲಿ ದೊಡ್ಡ ಪಾಲು ಪಡೆಯಲು ಎಎಪಿಗೆ 100 ಕೋಟಿ ರೂ. ಲಂಚ ನೀಡಿದ ಆರೋಪದಲ್ಲಿ ದಕ್ಷಿಣ ಗುಂಪಿನ ಪ್ರಮುಖ ಪಾಲುದಾರರಾಗಿದ್ದಾರೆ ಎಂದು ಇ.ಡಿ ಆರೋಪಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಯು ಮಾ.15ರಂದು ಕವಿತಾ ಅವರನ್ನು ಬಂಧಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...

UPI ವಹಿವಾಟಿನ ಮೇಲಿನ ಶುಲ್ಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ 2,000 ರೂ.ಗಿಂತ ಹೆಚ್ಚಿನ ಯುಪಿಐ ವಹಿವಾಟುಗಳ...

‘ದೇಶದ ನೌಕರಶಾಹಿ ಆತ್ಮಸಾಕ್ಷಿಯ ಕರೆಯನ್ನು ಆಲಿಸಬೇಕು.’ ಮಾಜಿ ಚುನಾವಣಾ ಆಯುಕ್ತ ಅಶೋಕ್‌ ಲವಾಸ ಹೇಳಿದ ಆತ್ಮಸಾಕ್ಷಿಯ ಕತೆ

ಸಾರ್ವಜನಿಕ ಸೇವೆಯಲ್ಲಿರುವ ಪ್ರತಿಯೊಬ್ಬರೂ ತಮ್ಮ ಕರ್ತವ್ಯದ ಹಾದಿಯಲ್ಲಿ ನೈತಿಕ ಸಂದಿಗ್ಧತೆಯನ್ನು ಎದುರಿಸಿದಾಗ,...

ವರ್ಷಗಳಿಂದ ನೀರಿಲ್ಲದೆ ಸೊರಗಿದ ಗ್ರಾಮ; ಹತಾಶೆಯಿಂದ ಊರನ್ನೇ ಬಿಕರಿಗಿಟ್ಟ ನಿವಾಸಿಗಳು

ಒಂದೆಡೆ ನೀರಾವರಿ ಯೋಜನೆ, ಇನ್ನೊಂದೆಡೆ ನೀರಿಗಾಗಿ ಪರದಾಡುವ ರೈತರು. ಯೋಜನೆ ಆರಂಭವಾಗಿ...