ದೆಹಲಿ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ: ‘ನಿರ್ಭಯಾ ಪ್ರಕರಣವನ್ನು ನೆನಪಿಸುವ ಭೀಕರತೆ’ ಎಂದ ಸುಪ್ರೀಂ ಕೋರ್ಟ್

Date:

ದೆಹಲಿ-ಎನ್‌ಸಿಆರ್ ವ್ಯಾಪ್ತಿಯಲ್ಲಿ ಚಲಿಸುವ ಬಸ್‌ನಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಭೀಕರ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದ್ದು, ಸ್ವಯಂಪ್ರೇರಿತ (Suo Motu) ಪ್ರಕರಣವನ್ನು ದಾಖಲಿಸಿಕೊಂಡಿದೆ. ದೆಹಲಿಯಲ್ಲಿನ ಸಾರ್ವಜನಿಕ ಭದ್ರತಾ ವೈಫಲ್ಯವನ್ನು ಉಲ್ಲೇಖಿಸಿರುವ ನ್ಯಾಯಾಲಯ, “ಇದು 2012ರ ಭೀಕರ ‘ನಿರ್ಭಯಾ’ ಪ್ರಕರಣವನ್ನು ನೆನಪಿಸುವಂತಿದೆ” ಎಂದು ಕಳವಳ ವ್ಯಕ್ತಪಡಿಸಿದೆ.

- Advertisement -

ಆಗಸ್ಟ್ 4ರಂದು 16 ವರ್ಷದ ಬಾಲಕಿಯೊಬ್ಬಳು ಗ್ರೇಟರ್ ನೋಯ್ಡಾದಲ್ಲಿ ಸ್ಲೀಪರ್ ಬಸ್‌ ಹತ್ತಿದ್ದಳು. ಈ ವೇಳೆ, ಬಸ್‌ನ ಚಾಲಕ ಮತ್ತು ಕಂಡಕ್ಟರ್ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಬಳಿಕ ಸುಮಾರು 40 ಕಿಲೋಮೀಟರ್‌ಗೂ ಹೆಚ್ಚು ದೂರ ಕ್ರಮಿಸಿ, ‘ಹಳೆ ದೆಹಲಿ’ಯ ಕಾಶ್ಮೀರಿ ಗೇಟ್ ಬಳಿ ಆಕೆಯನ್ನು ರಸ್ತೆಯಲ್ಲಿ ಎಸೆದು ಪರಾರಿಯಾಗಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಈ ಲೇಖನ ಓದಿದ್ದೀರಾ?: ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ ಅಸ್ತ್ರ!

ಈ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪೀಠವು, “ದೆಹಲಿ-ಎನ್‌ಸಿಆರ್‌ ಪ್ರದೇಶದಲ್ಲಿ ನಿರಂತರವಾಗಿ ವರದಿಯಾಗುತ್ತಿರುವ ಅತ್ಯಾಚಾರ ಪ್ರಕರಣಗಳು ಕಾನೂನು ಜಾರಿ ಸಂಸ್ಥೆಗಳು ಮತ್ತು ಸಾರ್ವಜನಿಕ ಆಡಳಿತದ ಸಂಪೂರ್ಣ ವೈಫಲ್ಯವನ್ನು ಎತ್ತಿಹಿಡಿಯುತ್ತವೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

“ಸಾಕಷ್ಟು ಬೀದಿದೀಪಗಳ ವ್ಯವಸ್ಥೆ ಇಲ್ಲದಿರುವುದು, ಕಳಪೆ ಸಿಸಿಟಿವಿ ಕಾವಲು ಹಾಗೂ ಆಡಳಿತಾತ್ಮಕ ಲೋಪದೋಷಗಳಿಂದಾಗಿ ಉದ್ಯಾನವನಗಳು ಮತ್ತು ಸಾರ್ವಜನಿಕ ಬಸ್‌ಗಳಂತಹ ಸ್ಥಳಗಳು ಸಾರ್ವಜನಿಕರಿಗೆ, ಅದರಲ್ಲೂ ಮಹಿಳೆಯರಿಗೆ ಅತ್ಯಂತ ಅಪಾಯಕಾರಿ ವಲಯಗಳಾಗಿ ಬದಲಾಗಿವೆ. ಇಂತಹ ಪರಿಸ್ಥಿತಿ ನಿರ್ಮಾಣವಾಗಲು ಬಿಡಬಾರದು” ಎಂದು ಕೋರ್ಟ್‌ ಹೇಳಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮೂಲಭೂತ ಭದ್ರತೆಯನ್ನು ಖಾತ್ರಿಪಡಿಸುವಲ್ಲಿ ಆಡಳಿತ ವ್ಯವಸ್ಥೆಯ ವಿಫಲತೆಗೆ ಪೀಠವು ಆತಂಕ ವ್ಯಕ್ತಪಡಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2017ರಲ್ಲಿ ಚುನಾವಣಾ ಆಯೋಗವನ್ನು ನಂಬಿದ್ದೆವು, ಆದರೆ 2022ರಲ್ಲಿ ಎಸ್‌ಪಿ ಮತಗಳನ್ನು ಇಸಿ ಅಳಿಸಿದೆ: ಅಖಿಲೇಶ್ ಆರೋಪ

2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಬೆಂಬಲಿಗರ...

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...