ಮಾಲಿನ್ಯ ನಿಯಂತ್ರಣಕ್ಕೆ ಮೋಡ ಬಿತ್ತನೆಯ ಮೊರೆ ಹೋದ ದೆಹಲಿ ಸರ್ಕಾರ; ಆದರೂ ಬರಲಿಲ್ಲ ಮಳೆ

Date:

ಮಂಗಳವಾರ ದೆಹಲಿಯ ಕೆಲವು ಭಾಗಗಳಲ್ಲಿ ಮೋಡ ಬಿತ್ತನೆ ಮಾಡಲಾಗಿತ್ತು. ಆದರೂ, ಮಳೆ ಬರಿಸುವ ಪ್ರಯತ್ನಗಳು ‘ಸಂಪೂರ್ಣವಾಗಿ ಯಶಸ್ವಿಯಾಗಲಿಲ್ಲ’. ಏಕೆಂದರೆ ಮೋಡಗಳಲ್ಲಿನ ತೇವಾಂಶ ಕಡಿಮೆಯಾಗಿತ್ತು. ಈ ಪ್ರಕ್ರಿಯೆಯು ಮಾಲಿನ್ಯದ ಸಮಸ್ಯೆಗೆ ‘ಅಲ್ಟಿಮೇಟ್’ ಪರಿಹಾರವಲ್ಲ. ಆದರೆ, SOS (Save Our Souls) ಪರಿಹಾರವಾಗಿದೆ ಎಂದು ಐಐಟಿ ಕಾನ್ಪುರ ನಿರ್ದೇಶಕ ಮಣೀಂದ್ರ ಅಗರ್ವಾಲ್ ಹೇಳಿದ್ದಾರೆ.

- Advertisement -

ದೆಹಲಿಯಲ್ಲಿ ಮಾಲಿನ್ಯದ ಪ್ರಮಾಣವನ್ನು ತಗ್ಗಿಸುವ ಉದ್ದೇಶದಿಂದ ದೆಹಲಿ ಸರ್ಕಾರವು ಮೋಡ ಬಿತ್ತನೆಯ ಮೊರೆ ಹೋಗಿತ್ತು. ಈ ಪ್ರಯೋಗದಲ್ಲಿ ದೆಹಲಿ ಸರ್ಕಾರದೊಂದಿಗೆ ಐಐಟಿ ಕಾನ್ಪುರ ಕೈಜೋಡಿಸಿದೆ. ಮೋಡ ಬಿತ್ತನೆಯಿಂದ ಮಳೆ ಬರಿಸುವುದು ಮಂಗಳವಾರ ಕೈಗೂಡದಿದ್ದರೂ, ಬುಧವಾರ ಮತ್ತೆ ಪ್ರಯತ್ನಗಳನ್ನು ಮುಂದುವರೆಸಲು ಸರ್ಕಾರ ಮತ್ತು ಐಐಟಿ ಕಾನ್ಪುರ ನಿರ್ಧರಿಸಿವೆ. ಬುಧವಾರದ ಪ್ರಯತ್ನವು ಉತ್ತಮ ಫಲಿತಾಂಶ ನೀಡುವ ನಿರೀಕ್ಷೆ ಇದೆ ಎಂದು ಮಣೀಂದ್ರ ಅಗರ್ವಾಲ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಮಂಗಳವಾರ, ಮೋಡ ಬಿತ್ತಲೆ ಪ್ರಕ್ರಿಯೆಯಲ್ಲಿ ಬಳಸಲಾದ ಮಿಶ್ರಣದಲ್ಲಿ ಕೇವಲ 20% ಸಿಲ್ವರ್ ಅಯೋಡೈಡ್ ಇತ್ತು. ಉಳಿದಂತೆ, ಕಲ್ಲು ಉಪ್ಪು ಮತ್ತು ಇತರ ಉಪ್ಪಿನ ಅಂಶದ ಉತ್ಪನ್ನಗಳು ಇದ್ದವು. 14 ಭಾಗಗಳಲ್ಲಿ ಮೋಡ ಬಿತ್ತನೆ ಪ್ರಕ್ರಿಯೆ ನಡೆದಿದೆ ಎಂದು ಅವರು ವಿವರಿಸಿದ್ದಾರೆ.

“ಮೋಡ ಬಿತ್ತನೆಯಾದ ಬಳಿಕ ಇಲ್ಲಿಯವರೆಗೆ ಮಳೆಯಾಗಿಲ್ಲ. ದುರದೃಷ್ಟವಶಾತ್, ಈ ಮೋಡಗಳು ಇಂದು ಹೆಚ್ಚಿನ ತೇವಾಂಶವನ್ನು ಹೊಂದಿರುವುದಿಲ್ಲ. ಕಡಿಮೆ ತೇವಾಂಶವಿದ್ದರೆ, ಮಳೆಯಾಗುವ ಸಾಧ್ಯತೆ ತುಂಬಾ ಕಡಿಮೆ.ಆದರೆ ಈ ಪ್ರಯೋಗವು ನಮ್ಮ ತಂಡಕ್ಕೆ ಈ ಪ್ರಯೋಗವನ್ನು ನಾವು ಮುಂದುವರಿಸಬಹುದು ಎಂಬ ವಿಶ್ವಾಸವನ್ನು ನೀಡಿದೆ” ಎಂದು ಅವರು ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಈ ಲೇಖನ ಓದಿದ್ದೀರಾ?: ಬಿಹಾರ ಚುನಾವಣೆ | ನಿತೀಶ್ ಕುಮಾರ್ ಮತ್ತು ಬಿಜೆಪಿಯ ಸ್ವಯಂ ಸೋಲು

“ಬುಧವಾರ ಮಳೆಯಾಗುವ ಬಗ್ಗೆ ದ್ವಂದ್ವವಿದೆ. ಕೆಲವರು ಮಳೆಯಾಗುತ್ತದೆ ಎನ್ನುತ್ತಿದ್ದಾರೆ. ಕೆಲವರು ಮಳೆಯಾಗುವ ಬಗ್ಗೆ ಸಂದೇಹ ವ್ಯಕ್ತಪಡಿಸಿದ್ದಾರೆ. ಆದರೆ, ನಮ್ಮ ತಂಡವು ‘ಮೋಡದ ಹೊದಿಕೆಯು ತುಂಬಾ ಕಡಿಮೆ ತೇವಾಂಶ ಹೊಂದಿತ್ತು’ ಎಂಬುದನ್ನು ಕಂಡುಕೊಂಡಿದೆ. ಆದ್ದರಿಂದ ಬುಧವಾರ ಮಳೆಯಾಗುವ ಬಗ್ಗೆ ನಮಗೆ ಯಾವುದೇ ನಿರೀಕ್ಷೆಯಿಲ್ಲ” ಎಂದು ಅಗರ್ವಾಲ್ ಹೇಳಿದ್ದಾರೆ.

ದೆಹಲಿಯಲ್ಲಿ ನಿರಂತರ ಮಾಲಿನ್ಯದ ಸಮಸ್ಯೆಗೆ ಮೋಡ ಬಿತ್ತನೆ ದೀರ್ಘಾವಧಿಯ ಪರಿಹಾರವಾಗಬಹುದೇ ಎಂಬ ‘ಎನ್‌ಡಿಟಿವಿ’ ಪ್ರಶ್ನೆಗೆ ಉತ್ತರಿಸಿರುವ ಅವರು, ‘ಸಾಧ್ಯವಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

“ಇದು ಒಂದು SOS ಪರಿಹಾರ. ನಿಮಗೆ ಬಿಕ್ಕಟ್ಟಿನ ಪರಿಸ್ಥಿತಿ ಇದ್ದಾಗ, ಅಂದರೆ ಅತಿ ಹೆಚ್ಚು ಮಾಲಿನ್ಯ ಉಂಟಾದಾಗ, ಮಾಲಿನ್ಯವನ್ನು ಕಡಿಮೆ ಮಾಡಲು ಪ್ರಯತ್ನಿಸಬಹುದಾದ ವಿಧಾನಗಳಲ್ಲಿ ಇದೂ ಒಂದು. ಇದು ಶಾಶ್ವತ ಪರಿಹಾರವಲ್ಲ. ಮಾಲಿನ್ಯದ ಮೂಲಗಳನ್ನು ನಿಯಂತ್ರಿಸುವುದೇ ಶಾಶ್ವತ ಪರಿಹಾರವಾಗಿದೆ. ಆದರ್ಶಪ್ರಾಯವಾಗಿ, ಮೋಡ ಬಿತ್ತನೆಯ ಅಗತ್ಯವಿಲ್ಲದ ಹಂತವನ್ನು ನಾವು ತಲುಪಬೇಕು. ಆದರೆ, ಅಂತಹ ಪರಿಸ್ಥಿತಿ ಸಾಧ್ಯವಾಗುವವರೆಗೆ ಮಾಲಿನ್ಯವನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಲು ಮೋಡ ಬಿತ್ತನೆ ನೆರವಾಗುತ್ತದೆ” ಎಂದು ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...

ಬಂಗಾಳ SIR | ನೋಟಿಸ್ ನೀಡಲು, ಹೆಸರು ಮರು ಸೇರಿಸಲು ಸಾಧ್ಯವಿಲ್ಲ: EC ಪೋರ್ಟಲ್ ವಿರುದ್ಧ ನ್ಯಾಯಾಧೀಶರ ದೂರು

ಪಶ್ಚಿಮ ಬಂಗಾಳದಲ್ಲಿ SIR ವೇಳೆ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಮೇಲ್ಮನವಿಗಳ ವಿಚಾರಣೆ...