ನೀರು ಹರಿಸಲು ಹರಿಯಾಣಕ್ಕೆ ನಿರ್ದೇಶಿಸುವಂತೆ ಸುಪ್ರೀಂ ಮೊರೆ ಹೋದ ದೆಹಲಿ ಸರ್ಕಾರ

Date:

ರಾಷ್ಟ್ರ ರಾಜಧಾನಿ ನೀರಿನ ಸಮಸ್ಯೆಯಿಂದ ತತ್ತರಿಸುತ್ತಿರುವ ಕಾರಣ ಹರಿಯಾಣ ಸರ್ಕಾರಕ್ಕೆ ತುರ್ತಾಗಿ ನೀರು ಹರಿಸಲು ನಿರ್ದೇಶಿಸುವಂತೆ ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ.

- Advertisement -

ತೀವ್ರ ಬಿಸಿಲಿನ ಪರಿಣಾಮಗಳಿಂದಾಗಿ ನಗರದಲ್ಲಿ ನೀರಿನ ಬೇಡಿಕೆ ಗಮನಾರ್ಹವಾಗಿ ಹೆಚ್ಚಾಗಿದೆ. ನೆರೆಯ ರಾಜ್ಯ ಹರಿಯಾಣಕ್ಕೆ ಒಂದು ತಿಂಗಳು ಹೆಚ್ಚುವರಿ ನೀರು ಹರಿಸಲು ನಿರ್ದೇಶಿಸುವಂತೆ ಆಪ್‌ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ದೆಹಲಿಯ ನೀರಿನ ಅಗತ್ಯತೆಗಳನ್ನು ಪರಿಪೂರ್ಣಗೊಳಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯು ತೀವ್ರ ಬಿಸಿಲಿನಿಂದಾಗಿ ನೀರಿನ ಕೊರತೆಯನ್ನು ಅನುಭವಿಸುತ್ತಿದೆ ಎಂದು ದೆಹಲಿ ಸರ್ಕಾರ ಕೋರ್ಟ್‌ಗೆ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೋರಾಟಗಳನ್ನು ಹತ್ತಿಕ್ಕಿದ ಗೌಡರ ಹಾಸನದಲ್ಲಿ ಮತ್ತೆ ಮೊಳಗಿದ ಹೋರಾಟದ ಕೂಗು

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರು ಕೇಂದ್ರ ಬಿಜೆಪಿ ಸರ್ಕಾರಕ್ಕೆ ಹರಿಯಾಣ ಹಾಗೂ ಉತ್ತರ ಪ್ರದೇಶದಲ್ಲಿರುವ ತಮ್ಮ ಸರ್ಕಾರಗಳಿಗೆ ಒಂದು ತಿಂಗಳ ಮಟ್ಟಿಗೆ ನೀರು ಹರಿಸುವಂತೆ ನಿರ್ದೇಶಿಸುವಂತೆ ಆಗ್ರಹಿಸಿದ್ದರು.

ದೆಹಲಿಯ ಜಲ ಸಚಿವೆ ಅತೀಶಿ, ಹರಿಯಾಣ ಸರ್ಕಾರ ದೆಹಲಿಗೆ ಬಿಡಬೇಕಾದ ತಮ್ಮ ಪಾಲಿನ ನೀರನ್ನು ಬಿಡದೆ ರಾಷ್ಟ್ರ ರಾಜಧಾನಿಯಲ್ಲಿ ನೀರಿನ ಅಭಾವ ಸೃಷ್ಟಿಸುತ್ತಿದೆ. ದೆಹಲಿಯು ನೀರಿನ ಪೂರೈಕೆಗಾಗಿ ಸಂಪೂರ್ಣವಾಗಿ ಯಮುನಾ ನದಿಯನ್ನು ಅವಲಂಬಿಸಿದ್ದು, ಹರಿಯಾಣ ಸರ್ಕಾರ ಈ ನೀರನ್ನು ಬಿಡಬೇಕಿದೆ ಎಂದು ತಿಳಿಸಿದ್ದಾರೆ.

ವಾಜಿರಾಬಾದ್‌ ಅಣೆಕಟ್ಟಿನಲ್ಲಿ ನೀರಿನ ಮಟ್ಟ 670.3 ಅಡಿಯಿದ್ದು, ಸಾಮಾನ್ಯ ಮಟ್ಟಕ್ಕಿಂತ 3.5 ಕಡಿಮೆಯಿದೆ. ಈ ಹಿನ್ನೆಲೆಯಲ್ಲಿ ನೀರಿನ ಸಮಸ್ಯೆಯುಂಟಾಗಿದೆ ಎಂದು ಅತೀಶಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ‘ಯುವಜನರ ಮೇಲೆ ದಾಳಿ ನಡೆಸಲು BJP-RSS ಪುಂಡರಿಗೆ ದೆಹಲಿ ಪೊಲೀಸರಿಂದಲೇ ಕುಮ್ಮಕ್ಕು’

ದೆಹಲಿಯಲ್ಲಿ ಶನಿವಾರ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರರು, ಯುವಕ-ಯುವತಿಯರ ಮೇಲೆ...

ಖ್ಯಾತ ಯೂಟ್ಯೂಬರ್ ಧೃವ್ ರಾಠಿ ಬಿಡುಗಡೆ!

ಸಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿಯಾಗದಂತೆ ತಡೆಯಲು ಬಂಧಿಸಲಾಗಿದ್ದ ಖ್ಯಾತ ಯೂಟ್ಯೂಬರ್ ಧೃವ್ ರಾಠಿ...

ಗ್ಯಾನು ರಾಜೀನಾಮೆ ಕೊಡುವವರೆಗೂ ಕದಲುವುದಿಲ್ಲ; ಭಾನುವಾರವೂ ಮುಂದುವರೆದ ಸಿಜೆಪಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಬೇಕು, ಎಸ್‌ಐಆರ್...