ದೆಹಲಿ | ಜಿಮ್ ಮಾಲೀಕನಿಗೆ ಇರಿದು ಕೊಲೆ, ಮುಖದ ಮೇಲೆ 21 ಬಾರಿ ಹಲ್ಲೆ

Date:

ಈಶಾನ್ಯ ದೆಹಲಿಯ ಭಜನ್‌ಪುರ ಪ್ರದೇಶದಲ್ಲಿ 28 ವರ್ಷದ ಜಿಮ್ ಮಾಲೀಕನನ್ನು ಗುಂಪೊಂದು ಇರಿದು ಕೊಂದಿದೆ, ಮುಖದ ಮೇಲೆ 21 ಬಾರಿ ಹಲ್ಲೆ ನಡೆಸಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

- Advertisement -

ಮೃತ ವ್ಯಕ್ತಿಯನ್ನು ಸುಮಿತ್ ಚೌಧರಿ ಅಲಿಯಾಸ್ ಪ್ರೇಮ್ ಎಂದು ಗುರುತಿಸಲಾಗಿದೆ. ಪ್ರೇಮ್ ಟೂರಿಸಂ ವ್ಯವಹಾರವನ್ನು ಕೂಡಾ ನಡೆಸುತ್ತಿದ್ದರು ಎಂದು ವರದಿಯಾಗಿದೆ. ಪತ್ನಿ ಮತ್ತು ಮೂರು ವರ್ಷದ ಮಗನನ್ನು ಅಗಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಬುಧವಾರ ತಡರಾತ್ರಿ ಗಮ್ರಿ ಎಕ್ಸ್‌ಟೆನ್ಶನ್‌ನಲ್ಲಿರುವ ಪ್ರೇಮ್ ಮನೆಯ ಹೊರಗೆ ಗುಂಪೊಂದು ಪ್ರೇಮ್ ಮೇಲೆ ದಾಳಿ ನಡೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಪ್ರೇಮ್ ಮನೆಯ ಹೊರಗಡೆ ಕುಳಿತಿದಾಗ ಮೂರು-ನಾಲ್ಕು ಯುವಕರ ಗುಂಪಿನ ಜೊತೆ ವಾಗ್ವಾದ ನಡೆದಿದೆ. ಈ ವೇಳೆ ಈ ಗುಂಪು ಪ್ರೇಮ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದೆ. ಮುಖ, ಕುತ್ತಿಗೆ, ಎದೆ ಮತ್ತು ಹೊಟ್ಟೆಗೆ ಹಲವು ಬಾರಿ ಇರಿದಿದ್ದಾರೆ. ಮುಖದ ಮೇಲೆ 21ಕ್ಕೂ ಹೆಚ್ಚು ಬಾರಿ ಇರಿದ ಗಾಯಗಳಿದೆ” ಎಂದು ಉಪ ಪೊಲೀಸ್ ಆಯುಕ್ತ (ಈಶಾನ್ಯ) ಜಾಯ್ ಟಿರ್ಕಿ ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಬೆಂ. ಗ್ರಾಮಾಂತರ | ಹಳೆ ವೈಷಮ್ಯ : ಗ್ರಾ.ಪಂ. ಸದಸ್ಯನ ಕೊಲೆ  

ಪ್ರೇಮ್‌ ಅವರನ್ನು ಜೆಪಿಸಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಪ್ರೇಮ್ ಕೊಲೆ ಯತ್ನ ಪ್ರಕರಣದಲ್ಲಿ ಆರೋಪಿಯಾಗಿದ್ದು, ಜಾಮೀನಿನ ಮೇಲೆ ಹೊರಗಿದ್ದಾನೆ ಎಂದು ಡಿಸಿಪಿ ತಿಳಿಸಿದ್ದಾರೆ.

ಆರೋಪಿಗಳನ್ನು ಪತ್ತೆ ಮಾಡಲು ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...