‘I.N.D.I.A’ ಹೆಸರು ಬಳಕೆ: ಕೇಂದ್ರ, ಚುನಾವಣಾ ಆಯೋಗಕ್ಕೆ ದೆಹಲಿ ಹೈಕೋರ್ಟ್ ನೋಟಿಸ್

Date:

ಪ್ರತಿಪಕ್ಷಗಳ ಒಕ್ಕೂಟಕ್ಕೆ ‘ಇಂಡಿಯಾ’ ಹೆಸರು ಬಳಕೆ ಮಾಡಿರುವುದನ್ನು ನಿಷೇಧಿಸುವಂತೆ ವಿರೋಧ ಪಕ್ಷದ ರಾಜಕೀಯ ಪಕ್ಷಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕೈಗೆತ್ತಿಕೊಂಡ ದೆಹಲಿ ಹೈಕೋರ್ಟ್ ಶುಕ್ರವಾರ(ಆಗಸ್ಟ್ 4) ಕೇಂದ್ರ, ಚುನಾವಣಾ ಆಯೋಗ ಮತ್ತು ಹಲವು ವಿರೋಧ ಪಕ್ಷಗಳಿಗೆ ನೋಟಿಸ್ ಜಾರಿ ಮಾಡಿದೆ.

ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಂಜೀವ್ ನರುಲಾ ಅವರ ವಿಭಾಗೀಯ ಪೀಠವು ವಕೀಲ ವೈಭವ್ ಸಿಂಗ್ ಮೂಲಕ ಕಾರ್ಯಕರ್ತ ಗಿರೀಶ್ ಭಾರದ್ವಾಜ್ ಸಲ್ಲಿಸಿದ ಅರ್ಜಿಗೆ ರಾಜಕೀಯ ಪಕ್ಷಗಳು ಮತ್ತು ಚುನಾವಣಾ ಆಯೋಗದ ಪ್ರತಿಕ್ರಿಯೆಯನ್ನು ಕೋರಿತು.

ಅರ್ಜಿದಾರರ ಪರ ಹಿರಿಯ ವಕೀಲ ಅರುಣಾ ಶ್ಯಾಮ್ ವಾದ ಮಂಡಿಸಿದರು. ನಂತರ ನ್ಯಾಯಾಲಯವು ಅಕ್ಟೋಬರ್ 31 ರಂದು ಪ್ರಕರಣವನ್ನು ಹೆಚ್ಚಿನ ಪರಿಗಣನೆಗೆ ಪಟ್ಟಿ ಮಾಡಲು ತಿಳಿಸಿತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹೆಚ್ಚುವರಿ ಸಾಲಿಸಿಟರ್ ಜನರಲ್ ಚೇತನ್ ಶರ್ಮಾ ಅವರು ಕೇಂದ್ರ ಸರ್ಕಾರದ ಪರವಾಗಿ ಹಾಜರಾಗಿ ಹೆಚ್ಚಿನ ಪರಿಗಣನೆಗೆ ಪಟ್ಟಿಗೆ ದಿನಾಂಕದ ಅವಧಿಯನ್ನು ಕಡಿಮೆ ಮಾಡಲು ನ್ಯಾಯಾಲಯಕ್ಕೆ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಲೋಕಸಭೆಯಲ್ಲಿ ದೆಹಲಿ ಸೇವಾ ಮಸೂದೆ ಅಂಗೀಕಾರ; ವಿಪಕ್ಷಗಳ ಸಭಾತ್ಯಾಗ

ಆದಾಗ್ಯೂ, ಈ ವಿಷಯಗಳನ್ನು ಪರಿಗಣಿಸುವ ಅಗತ್ಯವಿದೆ ಮತ್ತು ಅದು ಚುನಾವಣಾ ಆಯೋಗ ಮತ್ತು ಇತರ ಪ್ರತಿವಾದಿಗಳ ವಾದ ಆಲಿಸುವ ಕಾರಣ ಸಮಯ ಬೇಕಾಗುತ್ತದೆ ಎಂದು ಪೀಠ ಹೇಳಿದೆ.

1950ರ ಲಾಂಛನಗಳು ಮತ್ತು ಹೆಸರುಗಳು (ಅನುಚಿತ ಬಳಕೆ ತಡೆಗಟ್ಟುವಿಕೆ) ಕಾಯ್ದೆಯ ಸೆಕ್ಷನ್ 2 ಮತ್ತು 3 ರ ಅಡಿಯಲ್ಲಿ ಇಂಡಿಯಾ ಎಂಬ ಹೆಸರನ್ನು ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಅವರು ಹೇಳಿದ್ದಾರೆ.

“ಭಾರತೀಯ ಚುನಾವಣಾ ಆಯೋಗವು ಇಲ್ಲಿಯವರೆಗೆ ಪ್ರತಿವಾದಿ ರಾಜಕೀಯ ಪಕ್ಷಗಳು ತಮ್ಮ ರಾಜಕೀಯ ಮೈತ್ರಿಗಾಗಿ ಇಂಡಿಯಾ ಎಂಬ ಸಂಕ್ಷಿಪ್ತ ರೂಪವನ್ನು ಬಳಸುವುದನ್ನು ತಡೆಯಲು ಯಾವುದೇ ಕ್ರಮ ಗೊಂಡಿಲ್ಲ, ಆದ್ದರಿಂದ ಅರ್ಜಿದಾರರು ಈ ರಿಟ್ ಅರ್ಜಿಯನ್ನು ಸಲ್ಲಿಸುವುದನ್ನು ಹೊರತುಪಡಿಸಿ ಬೇರೆ ಆಯ್ಕೆಯನ್ನು ಹೊಂದಿಲ್ಲ” ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿಮಾಚಲ ಪ್ರದೇಶ ಸರ್ಕಾರ ಉಳಿಸುವ ಜವಾಬ್ದಾರಿ ಡಿಕೆಶಿ ಹೆಗಲಿಗೆ

ಭಿನ್ನಮತ ಸ್ಫೋಟ ಹಾಗೂ ಬಿಜೆಪಿಯ ಆಪರೇಷನ್ ಕಮಲದ ತಂತ್ರದಿಂದಾಗಿ ತೂಗುಯ್ಯಾಲೆಯಲ್ಲಿ ಇರುವ...

ಲೋಕಸಭಾ ಚುನಾವಣೆ | ತಮಿಳುನಾಡಿನಲ್ಲಿ ಬಿಜೆಪಿಗೆ ನೆಲೆಯಾಗುವರೇ ಅಣ್ಣಾಮಲೈ?

ಲೋಕಸಭಾ ಚುನಾವಣೆಗೆ ಕೆಲವು ವಾರಗಳು ಬಾಕಿ ಇವೆ. ತನ್ನ ನೆಲೆಯೇ ಇಲ್ಲದ...

ಗುಜರಾತ್ | ನೌಕಾದಳದಿಂದ 2 ಸಾವಿರ ಕೋಟಿ ರೂ. ಮೊತ್ತದ 3300 ಕೆಜಿ ಮಾದಕ ವಸ್ತು ವಶ

ಭಾರತೀಯ ನೌಕಾದಳ ಹಾಗೂ ಗುಜರಾತ್ ಭಯೋತ್ಪಾದಕ ವಿರೋಧಿ ದಳದ ನೆರವಿನೊಂದಿಗೆ ನಾರ್ಕೋಟಿಕ್ಸ್‌...

‌ಪಾಕಿಸ್ತಾನ ಜಿಂದಾಬಾದ್‌ | ಮಾಧ್ಯಮಗಳ ವಿಡಿಯೋ ಎಫ್‌ಎಸ್‌ಎಲ್‌ನವರು ಪಡೆಯಲಿದ್ದಾರೆ: ಡಾ. ಜಿ.ಪರಮೇಶ್ವರ್

‌ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿದ್ದಾರೆ ಎನ್ನಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ವಯಂ...