ಕೇಜ್ರಿವಾಲ್‌ ಕೋರ್ಟ್‌ನಲ್ಲಿ ವಾದಿಸುತ್ತಿರುವ ವಿಡಿಯೋಗಳನ್ನು ತೆಗೆದುಹಾಕಲು ಪೊಲೀಸರಿಗೆ ದೆಹಲಿ ಹೈಕೋರ್ಟ್ ಆದೇಶ

Date:

ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ಮುಂದೆ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ವಾದಿಸುತ್ತಿರುವ ಅನಧಿಕೃತ ವಿಡಿಯೋ ರೆಕಾರ್ಡಿಂಗ್‌ಗಳನ್ನು ಸಾಮಾಜಿಕ ಜಾಲತಾಣದಿಂದ ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್‌ ಪೊಲೀಸರಿಗೆ ಆದೇಶಿಸಿದೆ.

- Advertisement -

ದೆಹಲಿ ಹೈಕೋರ್ಟ್‌ನ ನಿಯಮ ಪ್ರಕಾರ ಆನ್‌ಲೈನ್ ವಿಚಾರಣೆ ವೇಳೆ ನ್ಯಾಯಾಲಯದ ಪ್ರಕ್ರಿಯೆಗಳ ವಿಡಿಯೋಗಳನ್ನು ರೆಕಾರ್ಡ್ ಮಾಡುವುದನ್ನು ಮತ್ತು ಪ್ರಕಟಿಸುವುದನ್ನು ನಿಷೇಧಿಸಲಾಗಿದೆ. ಆದರೆ ಕೇಜ್ರಿವಾಲ್ ತಮ್ಮ ಪ್ರಕರಣವನ್ನು ತಾವೇ ವಾದಿಸುತ್ತಿರುವುದನ್ನು ರೆಕಾರ್ಡ್ ಮಾಡಿ ಆನ್‌ಲೈನ್‌ನಲ್ಲಿ ಹಾಕಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನು ಓದಿದ್ದೀರಾ? ದೆಹಲಿ ಅಬಕಾರಿ ನೀತಿ: ಮಮತಾ ನಂತರ ತಮ್ಮ ಪ್ರಕರಣ ತಾವೇ ವಾದಿಸಲು ಸಜ್ಜಾದ ಕೇಜ್ರಿವಾಲ್

ಈ ರೀತಿ ವಿಡಿಯೋ ಹಾಕಿದ ಪ್ರತಿಯೊಬ್ಬರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ಎಂದು ವರದಿಯಾಗಿದೆ.

ಅರವಿಂದ್ ಕೇಜ್ರಿವಾಲ್ ಒಂದು ಗಂಟೆಗೂ ಹೆಚ್ಚು ಕಾಲ ವಾದಿಸಿದ್ದರು. ವಿಚಾರಣೆಯ ನಂತರ, ನ್ಯಾಯಾಲಯದಲ್ಲಿ ಕೇಜ್ರಿವಾಲ್ ವಾದಿಸುತ್ತಿರುವ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದವು. ಇನ್ನು ಕೇಜ್ರಿವಾಲ್ ನಂತರ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದಿಸಿ ಕೇಜ್ರಿವಾಲ್ ಅರ್ಜಿಯನ್ನು ವಿರೋಧಿಸಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಇತ್ತೀಚೆಗೆ ವಕೀಲರ ಉಡುಪು ಧರಿಸಿ ಖುದ್ದಾಗಿ ವಾದ ಮಂಡಿಸುವ ಮೂಲಕ ಇತಿಹಾಸ ನಿರ್ಮಿಸಿದ್ದರು. ಕೇಂದ್ರ ಚುನಾವಣಾ ಆಯೋಗವು ಪಶ್ಚಿಮ ಬಂಗಾಳದಲ್ಲಿ ನಡೆಸುತ್ತಿರುವ ‘ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯನ್ನು ಮಮತಾ ಬ್ಯಾನರ್ಜಿ ಅವರು ಪ್ರಶ್ನಿಸಿದ್ದರು. ಅದಾದ ಬಳಿಕ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡಾ ತಮ್ಮ ಪ್ರಕರಣವನ್ನು ತಾವೇ ವಾದಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...