ಮನೆಯಲ್ಲಿ ಹಣ ಪತ್ತೆ: ನ್ಯಾ. ವರ್ಮಾ ವಿಚಾರಣೆ ನಡೆಸಿದ್ದ 52 ಪ್ರಕರಣಗಳ ಮರುವಿಚಾರಣೆಗೆ ದೆಹಲಿ ಹೈಕೋರ್ಟ್‌ ನಿರ್ಧಾರ

Date:

ಇತ್ತೀಚೆಗೆ, ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ದೆಹಲಿ ನಿವಾಸದಲ್ಲಿ ಕೋಟಿ-ಕೋಟಿ ರೂ. ಹಣ ಪತ್ತೆಯಾದ ಬಳಿಕ, ವರ್ಮಾ ಅವರನ್ನು ಅಲಹಾಬಾದ್‌ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿದೆ. ಅವರು ದೆಹಲಿ ಹೈಕೋರ್ಟ್‌ನಲ್ಲಿದ್ದಾಗ ವಿಚಾರಣೆ ನಡೆಸಿದ್ದ, ಅಂತಿಮ ತೀರ್ಪು ಬಂದಿರದ 52 ಪ್ರಕರಣಗಳನ್ನು ಹೊಸದಾಗಿ ಮರುವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್‌ ನಿರ್ಧರಿಸಿದೆ.

- Advertisement -

ಈ ಬಗ್ಗೆ ಸಾರ್ವಜನಿಕ ಸೂಚನೆ ನೀಡಿರುವ ದೆಹಲಿ ಹೈಕೋರ್ಟ್‌, “ನ್ಯಾಯಮೂರ್ತಿ ಯಶವಂತ್ ವರ್ಮಾ ಮತ್ತು ನ್ಯಾಯಮೂರ್ತಿ ಹರೀಶ್ ವೈದ್ಯನಾಥನ್ ಶಂಕರ್ ಅವರ ವಿಭಾಗೀಯ ಪೀಠದ ಮುಂದೆ ಈ ಹಿಂದೆ ಪಟ್ಟಿ ಮಾಡಲಾಗಿದ್ದ ಮತ್ತು ಮುಂದಿನ ವಿಚಾರಣೆಯ ದಿನಾಂಕವನ್ನು ನಿಗದಿಪಡಿಸಲಾಗಿದ್ದ ಪ್ರಕರಣಗಳು ಇವು. ಯಾವುದೇ ಆದೇಶಗಳನ್ನು ಹೊರಡಿಸಿದ ಈ 52 ಪ್ರಕರಣಗಳನ್ನು ಮರು ಪಟ್ಟಿ ಮಾಡಿ, ಹೊಸದಾಗಿ ಆರಂಭದಿಂದ ವಿಚಾರಣೆ ನಡೆಸಲಾಗುವುದು. ಸಂಬಂಧಪಟ್ಟ ಎಲ್ಲರಿಗೂ ಮಾಹಿತಿ ನೀಡಲಾಗಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಮರು ವಿಚಾರಣೆಗೆ ಪಟ್ಟಿ ಮಾಡಲಾಗಿರುವ 52 ಪ್ರಕರಣಗಳಲ್ಲಿ ಹೆಚ್ಚಿನವು ಜಿಎಸ್‌ಟಿ ಮತ್ತು ತೆರಿಗೆಗೆ ಸಂಬಂಧಿತ ವಿವಾದಗಳಿಗೆ ಸಂಬಂಧಿಸಿವೆ ಎಂದು ವರದಿಯಾಗಿದೆ.

ಈ ವರದಿ ಓದಿದ್ದೀರಾ?: ದೇಶದ್ರೋಹಿ’ಯೊಬ್ಬನ ಅಪೂರ್ಣ ಆಂದೋಲನ

ಮಾರ್ಚ್ 14ರಂದು ದೆಹಲಿಯಲ್ಲಿನ ವರ್ಮಾ ಅವರ ನಿವಾಸದಲ್ಲಿ ಬೆಂಕಿ ಅವಗಢ ಸಂಭವಿಸಿತ್ತು. ಈ ವೇಳೆ, ಕಳೆದ ತಿಂಗಳು ಅರೆ-ಬರೆ ಸುಟ್ಟುಹೋಗಿದ್ದ ಹಣದ ರಾಶಿ ಪತ್ತೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ವರ್ಮಾ ಅವರ ವಿರುದ್ಧ ಆಂತರಿಕ ತನಿಖೆ ನಡೆದು, ಅವರನ್ನು ದೆಹಲಿ ಹೈಕೋರ್ಟ್‌ನಿಂದ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲಾಗಿದೆ.

ಅವರನ್ನು ಅಲಹಾಬಾದ್‌ಗೆ ವರ್ಗಾವಣೆ ಮಾಡಿದ್ದನ್ನು ಅಲಹಾಬಾದ್‌ನ ಬಾರ್ ಕೌನ್ಸಿಲ್‌ಗಳು ವಿರೋಧಿಸಿದ್ದವು. ವಿರೋಧದ ಪರಿಣಾಮವಾಗಿ ಅವರ ಪ್ರಮಾಣವಚನವನ್ನು ಸಾರ್ವಜನಿಕ ಸಮಾರಂಭದಲ್ಲಿ ನಡೆಸುವ ಬದಲು ಖಾಸಗಿಯಾಗಿ ನಡೆಸಲಾಯಿತು. ಅಲ್ಲದೆ, ಸದ್ಯಕ್ಕೆ ವರ್ಮಾ ಅವರು ಯಾವುದೇ ಪ್ರಕರಣಗಳ ವಿಚರಣೆ ನಡೆಸದಂತೆ ಸುಪ್ರೀಂ ಕೋರ್ಟ್‌ ನಿರ್ಬಂಧಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...