ಅಬಕಾರಿ ನೀತಿ ಹಗರಣದಲ್ಲಿ ಸಿಬಿಐ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರು ಕೇಜ್ರಿವಾಲ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದು, ಬಂಧನ ಪ್ರಶ್ನಿಸಿ ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವ ಸ್ವಾತಂತ್ರ್ಯವಿದೆ ಎಂದು ತಿಳಿಸಿದರು.
ಇದನ್ನು ಓದಿದ್ದೀರಾ? ಅಬಕಾರಿ ನೀತಿ ಹಗರಣ | ಅರವಿಂದ್ ಕೇಜ್ರಿವಾಲ್ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ ಸಿಬಿಐ
ಯಾವುದೇ ನ್ಯಾಯಸಮ್ಮತ ಕಾರಣವಿಲ್ಲದೆ ಬಂಧನವಾಗಿದೆ ಅಥವಾ ಅಕ್ರಮವಾಗಿದೆ ಎಂದು ಹೇಳಲಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.
ಅರವಿಂದ್ ಕೇಜ್ರಿವಾಲ್ ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ, ಎನ್ ಹರಿಹರನ್ ಮತ್ತು ರಮೇಶ್ ಗುಪ್ತಾ ವಾದ ಮಂಡಿಸಿದ್ದರು. ಸಿಬಿಐನ ಎಸ್‌ಎಸ್‌ಪಿ ಡಿಪಿ ಸಿಂಗ್ ತನಿಖಾ ಸಂಸ್ಥೆಯನ್ನು ಪ್ರತಿನಿಧಿಸಿದ್ದರು.
#BREAKING Delhi High Court dismisses Chief Minister Arvind Kejriwal’s plea challenging his arrest by CBI in alleged liquor policy scam. #ArvindKejriwal #CBI pic.twitter.com/NJ56wlsV70
— Live Law (@LiveLawIndia) August 5, 2024