BREAKING NEWS | ನ್ಯಾಯಾಂಗ ನಿಂದನೆ ಪ್ರಕರಣ: ಕೇಜ್ರಿವಾಲ್, ಸಿಸೋಡಿಯಾಗೆ ದೆಹಲಿ ಹೈ ನೋಟಿಸ್

Date:

ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಹಾಗೂ ನ್ಯಾಯಾಲಯದ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ ದಾಖಲಿಸಿರುವ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕರಾದ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ದುರ್ಗೇಶ್ ಪಾಠಕ್, ಸಂಜಯ್ ಸಿಂಗ್, ಸೌರಭ್ ಭಾರದ್ವಾಜ್ ಮತ್ತು ಇತರರ ವಿರುದ್ಧ ದೆಹಲಿ ಹೈಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ.

- Advertisement -

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಪೋಸ್ಟ್‌ಗಳನ್ನು ಮಾಡಿದ ಆರೋಪದಲ್ಲಿ ಕೇಜ್ರಿವಾಲ್, ಸಿಸೋಡಿಯಾ ಮತ್ತು ಇತರ ಎಎಪಿ ನಾಯಕರ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣವನ್ನು ಪ್ರಾರಂಭಿಸಿದ್ದರು. ನ್ಯಾಯಾಂಗ ನಿಂದನೆ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ನವೀನ್ ಚಾವ್ಲಾ ಮತ್ತು ರವೀಂದರ್ ದುಡೇಜಾ ಅವರ ವಿಭಾಗೀಯ ಪೀಠವು ಪ್ರತಿಕ್ರಿಯೆ ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶ ನೀಡಿದೆ. ಆಗಸ್ಟ್ 4ರಂದು ಮುಂದಿನ ವಿಚಾರಣೆಗೆ ಪ್ರಕರಣವನ್ನು ನಿಗದಿಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಇದನ್ನು ಓದಿದ್ದೀರಾ? ಕೇಜ್ರಿವಾಲ್ ವಿರುದ್ಧದ ಅಬಕಾರಿ ನೀತಿ ಪ್ರಕರಣ ವಿಚಾರಣೆ ನಡೆಸಲಿರುವ ನ್ಯಾಯಮೂರ್ತಿ ಮನೋಜ್ ಜೈನ್ ಯಾರು?

ಈ ಹಿಂದೆ ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಇತರ ಆರೋಪಿಗಳನ್ನು ಪ್ರಕರಣದಿಂದ ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಈ ಹಿಂದೆ ನಡೆಸುತ್ತಿದ್ದರು. ಆದರೆ “ನೀವು ಆರ್‌ಎಸ್‌ಎಸ್ ಮತ್ತು ಬಿಜೆಪಿಯೊಂದಿಗೆ ನೇರ ಸಂಬಂಧ ಹೊಂದಿರುವ ‘ಅಧಿವಕ್ತ ಪರಿಷದ್’ ಕಾರ್ಯಕ್ರಮಗಳಲ್ಲಿ ನಾಲ್ಕು ಬಾರಿ ಭಾಗವಹಿಸಿದ್ದೀರಿ. ಹೀಗಾಗಿ ಈ ನ್ಯಾಯಾಲಯದಲ್ಲಿ ನನಗೆ ಸರಿಯಾದ ನ್ಯಾಯ ಸಿಗುವ ನಂಬಿಕೆ ಇಲ್ಲ” ಎಂದು ನೇರವಾಗಿ ಅರವಿಂದ್ ಕೇಜ್ರಿವಾಲ್ ತಮ್ಮ ವಾದ ಮಂಡಿಸುತ್ತಾ ಹೇಳಿದ್ದರು.

ಹಾಗಿದ್ದರೂ ವಿಚಾರಣೆಯಿಂದ ಸ್ವರ್ಣ ಕಾಂತ ಹಿಂದೆ ಸರಿದಿರಲಿಲ್ಲ. ಆದರೆ ತಮ್ಮ ವಿರುದ್ಧ ನಿಂದನೆ ಪ್ರಕ್ರಿಯೆಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿಗಳು ಅದೇ ಮುಖ್ಯ ಪ್ರಕರಣದ (ಅಬಕಾರಿ ಪ್ರಕರಣ( ವಿಚಾರಣೆ ನಡೆಸಲು ಕಾನೂನಿನಲ್ಲಿ ಅವಕಾಶವಿಲ್ಲದ ಕಾರಣ, ಅಬಕಾರಿ ನೀತಿ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...

‘8 ಯುದ್ಧಗಳನ್ನು ನಿಲ್ಲಿಸಿದ್ದೇನೆ, ನನಗೇ ನೊಬೆಲ್ ಕೊಡಿ’: ಟ್ರಂಪ್ ಮತ್ತೆ ಪಟ್ಟು

ನಾರ್ವೇಜಿಯನ್ ನೊಬೆಲ್ ಸಮಿತಿಯು ಈ ಸಾಲಿನ ಪ್ರತಿಷ್ಠಿತ ‘ನೊಬೆಲ್ ಶಾಂತಿ ಪ್ರಶಸ್ತಿ’ಯನ್ನು...

ಆಲಗೂರ ಪುನರ್ವಸತಿ ಕೇಂದ್ರವನ್ನು ಮರಳಿ ಗ್ರಾಮ ಪಂಚಾಯತಿಗೆ ಸೇರಿಸಲು ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರಸಭೆ ವ್ಯಾಪ್ತಿಗೆ ಸೇರಿಸಲಾಗಿರುವ ಆಲಗೂರ ಪುನರ್ವಸತಿ ಕೇಂದ್ರವನ್ನು...

ಬೀದರ್‌ | ಜಿಲ್ಲಾ ಪಂಚಾಯತಿ 34, ತಾಲೂಕು ಪಂಚಾಯತಿ 123 ಸ್ಥಾನಗಳಿಗೆ ಮೀಸಲಾತಿ ಪ್ರಕಟ

ರಾಜ್ಯ ಸರ್ಕಾರವು ಬೀದರ್ ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲೆಯ ಎಂಟು ತಾಲ್ಲೂಕು...