ಕಾಕ್ರೋಚ್ ಪಾರ್ಟಿಯ ‘ಎಕ್ಸ್’ ಖಾತೆ ಮರುಸ್ಥಾಪನೆಗೆ ದೆಹಲಿ ಹೈಕೋರ್ಟ್ ಆದೇಶ

Date:

‘ನೀಟ್’ ಮರು ಪರೀಕ್ಷೆಯ ಸಂದರ್ಭದಲ್ಲಿ ಗೊಂದಲ ಸೃಷ್ಟಿಯಾಗಬಹುದು ಎಂಬ ಆತಂಕದಿಂದ ನಿರ್ಬಂಧಿಸಲಾಗಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಯ ಸಾಮಾಜಿಕ ಜಾಲತಾಣ ‘ಎಕ್ಸ್’ ಖಾತೆಯನ್ನು ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶಿಸಿದೆ. ನೀಟ್ ಪರೀಕ್ಷೆಯು ಈಗಾಗಲೇ ಮುಗಿದಿರುವುದರಿಂದ ಖಾತೆಯನ್ನು ನಿರ್ಬಂಧಿಸಲು ಕಾರಣವಾಗಿದ್ದ ಆತಂಕಗಳು ಈಗ ಅಪ್ರಸ್ತುತವಾಗಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

- Advertisement -

ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ಅವರಿದ್ದ ಏಕಸದಸ್ಯ ಪೀಠವು ಈ ಆದೇಶವನ್ನು ಹೊರಡಿಸಿದೆ. ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರವಾಗಿ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, “ನೀಟ್-ಯುಜಿ ಮರು ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಗೊಂದಲ ಅಥವಾ ಅರಾಜಕತೆ ಸೃಷ್ಟಿಯಾಗಬಾರದು ಎಂಬ ಮುನ್ನೆಚ್ಚರಿಕಾ ಕ್ರಮವಾಗಿ ಈ ಖಾತೆಯನ್ನು ರ್ಬಂಧಿಸಲಾಗಿತ್ತು. ಜೂನ್ 21 ರಂದು ಪರೀಕ್ಷೆ ಯಶಸ್ವಿಯಾಗಿ ಮುಗಿದಿದ್ದು, ಖಾತೆಯ ಮೇಲಿನ ನಿರ್ಬಂಧವನ್ನು ತೆರವುಗೊಳಿಸಲು ಸರ್ಕಾರಕ್ಕೆ ಯಾವುದೇ ಅಭ್ಯಂತರವಿಲ್ಲ” ಎಂದು ನ್ಯಾಯಾಲಯಕ್ಕೆ ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಕೇಂದ್ರ ಸರ್ಕಾರದ ಈ ಹೇಳಿಕೆಯನ್ನು ಪರಿಗಣಿಸಿದ ನ್ಯಾಯಾಲಯ, “ಖಾತೆಯನ್ನು ನಿರ್ಬಂಧಿಸಲು ಇದ್ದ ಪ್ರಾಥಮಿಕ ಕಾರಣವು ಈಗ ಉಳಿದಿಲ್ಲ” ಎಂದು ತಿಳಿಸಿ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿತು. ಜೊತೆಗೆ ತಕ್ಷಣವೇ ಖಾತೆಯನ್ನು ಅನ್‌ಬ್ಲಾಕ್ ಮಾಡಲು ಸೂಚನೆ ನೀಡಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆಫ್ರಿಕನ್ ಕಪ್ಪುವಜ್ರಗಳಿಂದ ಭಾರತ ಕಲಿಯಬೇಕಾದ ಪಾಠವೇನು?

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಪ್ರಕರಣವೊಂದರ ವಿಚಾರಣೆ ವೇಳೆ ನಿರುದ್ಯೋಗಿ ಯುವಕರು ಮತ್ತು ಸಾಮಾಜಿಕ ಕಾರ್ಯಕರ್ತರನ್ನು ‘ಕಾಕ್ರೋಚ್’ (ಜಿರಳೆ) ಎಂದು ಕರೆದಿದ್ದರು ಎನ್ನಲಾದ ಹೇಳಿಕೆ ಭಾರಿ ವಿವಾದ ಸೃಷ್ಟಿಸಿತ್ತು. ಈ ಹೇಳಿಕೆಯನ್ನು ವಿಡಂಬನಾತ್ಮಕ ಅಸ್ತ್ರವಾಗಿ ಬಳಸಿಕೊಂಡ ಡಿಜಿಟಲ್ ಸಂವಹನ ತಂತ್ರಜ್ಞ ಅಭಿಜೀತ್ ದೀಪ್ಕೆ ಅವರು ಮೇ 16 ರಂದು ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಎಂಬ ಡಿಜಿಟಲ್ ಚಳವಳಿಯನ್ನು ಹುಟ್ಟುಹಾಕಿದ್ದರು.

ಆರಂಭವಾದ ಕೆಲವೇ ದಿನಗಳಲ್ಲಿ ಈ ಅಭಿಯಾನವು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಕೇವಲ ಐದೇ ದಿನಗಳಲ್ಲಿ ಇದರ ಇನ್‌ಸ್ಟಾಗ್ರಾಮ್ ಖಾತೆಯು 1 ಕೋಟಿಗೂ ಅಧಿಕ ಫಾಲೋವರ್ಸ್‌ಗಳನ್ನು ಪಡೆದುಕೊಂಡಿತ್ತು. ಯುವಜನರಲ್ಲಿ ಸಿಜೆಪಿ ಪಡೆಯುತ್ತಿದ್ದ ಅಪಾರ ಬೆಂಬಲದ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಹಾಗೂ ನೀಟ್ ಪರೀಕ್ಷೆಯ ಸೂಕ್ಷ್ಮತೆಯ ಕಾರಣ ನೀಡಿ ಮೇ 21 ರಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯದ ಸೂಚನೆಯ ಮೇರೆಗೆ ‘ಎಕ್ಸ್’ ಸಂಸ್ಥೆಯು ಸಿಜೆಪಿಯ ಮೂಲ ಖಾತೆಯನ್ನು ಭಾರತದಲ್ಲಿ ನಿರ್ಬಂಧಿಸಿತ್ತು. ಇದನ್ನು ಪ್ರಶ್ನಿಸಿ ದೀಪ್ಕೆ ಹೈಕೋರ್ಟ್ ಮೆಟ್ಟಿಲೇರಿದ್ದರು.

ಪ್ರಸ್ತುತ, ನೀಟ್ (NEET-UG) ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ತೀವ್ರವಾಗಿ ಖಂಡಿಸುತ್ತಿರುವ ಕಾಕ್ರೋಚ್ ಜನತಾ ಪಾರ್ಟಿಯು, ಯುವಜನರ ಧ್ವನಿಯಾಗಿ ಮಾರ್ಪಟ್ಟಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಸರಣಿ ಪ್ರತಿಭಟನೆಗಳನ್ನೂ ನಡೆಸುತ್ತಿದೆ. ಈ ಚಳವಳಿಗೆ ಪರಿಸರವಾದಿ ಹಾಗೂ ಶಿಕ್ಷಣ ಸುಧಾರಕ ಸೋನಂ ವಾಂಗ್‌ಚುಕ್, ಸಂಸದ ಶಶಿ ತರೂರ್ ಸೇರಿದಂತೆ ಅನೇಕ ಗಣ್ಯರು ಬೆಂಬಲ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು ಸಾಧ್ಯವಲ್ಲವೇ?

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ...

ಕ್ಯಾನ್ಸರ್ ರೋಗಿಗಳಿಗೆ ಗುಡ್‌ನ್ಯೂಸ್‌; ದುಬಾರಿ ಔಷಧಗಳ ಬೆಲೆ ಶೇ.70ರವರೆಗೆ ಇಳಿಕೆ?

ದೇಶದಲ್ಲಿ ದುಬಾರಿಯಾಗಿರುವ ಕೆಲವು ಕ್ಯಾನ್ಸರ್ ಔಷಧಗಳ ಬೆಲೆ ಶೀಘ್ರದಲ್ಲೇ ಭಾರಿ ಪ್ರಮಾಣದಲ್ಲಿ...