ಸಿಜೆಐ ಮೇಲೆ ಶೂ ಎಸೆತ ಪ್ರಕರಣ | ಸೂಕ್ತ ಕ್ರಮದ ಅಗತ್ಯವಿದೆ‌: ದೆಹಲಿ ಹೈಕೋರ್ಟ್‌

Date:

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ಪ್ರಕರಣವನ್ನು ಉಲ್ಲೇಖಿಸಿದ ದೆಹಲಿ ಹೈಕೋರ್ಟ್ ಗಂಭೀರ ಕಳವಳ ವ್ಯಕ್ತಪಡಿಸಿದೆ. ‘ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಿರಲು ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ’ ಎಂದು ನ್ಯಾಯಾಲಯ ಒತ್ತಿ ಹೇಳಿದೆ.

- Advertisement -

ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತುಷಾರ್ ರಾವ್ ಗೆಡೆಲಾ ಅವರ ನೇತೃತ್ವದ ದ್ವಿಸದಸ್ಯ ಪೀಠವು, ‘ಈ ಘಟನೆಯಿಂದ ವಕೀಲರ ಸಂಘದ ಸದಸ್ಯರಿಗೆ ಮಾತ್ರವಲ್ಲ, ಸಮಾಜದ ಪ್ರತಿಯೊಬ್ಬರಿಗೂ ನೋವು ಉಂಟಾಗಿದೆ’ ಎಂದು ತಿಳಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿಯಡಿ ದೇಶ ಸುರಕ್ಷಿತವೆಂಬ ಸುಳ್ಳುಗುಳ್ಳೆಯ ಒಡೆದ ಸ್ಫೋಟ

ಶೂ ಎಸೆದ ಪ್ರಕರಣದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಅವುಗಳನ್ನು ತೆಗೆದುಹಾಕಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜಿಕ ಹಿಸಾಸಕ್ತಿ ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸಿತು.

ಅಕ್ಟೋಬರ್ 6ರಂದು ವಕೀಲ ರಾಕೇಶ್ ಕಿಶೋರ್ ಸಿಜೆಐ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ. ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿ ಹರಡಿತ್ತು. ಇದನ್ನು ತಡೆಯಲು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಘಟನೆ ಬೆನ್ನಲ್ಲೇ ಆರೋಪಿ ವಕೀಲರ ಪರವಾನಗಿಯನ್ನು ತಕ್ಷಣ ಅಮಾನತುಗೊಳಿಸಲಾಗಿದೆ.

ಈ ಪ್ರಕರಣವು ನ್ಯಾಯಾಂಗ ವ್ಯವಸ್ಥೆಯ ಗೌರವ ಮತ್ತು ಭದ್ರತೆಯ ಮೇಲೆ ಪ್ರಶ್ನೆ ಎಬ್ಬಿಸಿದೆ. ನ್ಯಾಯಾಧೀಶರ ಸುರಕ್ಷತೆಗೆ ಹೆಚ್ಚಿನ ಗಮನ ಹರಿಸಬೇಕು ಎಂಬ ಒತ್ತಡವನ್ನು ಸೃಷ್ಟಿಸಿದೆ. ಸುಪ್ರೀಂ ಕೋರ್ಟ್ ಮತ್ತು ಬಾರ್ ಕೌನ್ಸಿಲ್ ಸಹ ಈ ವಿಷಯದಲ್ಲಿ ಸಕ್ರಿಯವಾಗಿ ಕ್ರಮ ಕೈಗೊಳ್ಳಬೇಕಿದೆ. ಇಂತಹ ಘಟನೆಗಳು ನ್ಯಾಯಾಲಯದ ಪವಿತ್ರತೆಗೆ ಧಕ್ಕೆ ತರುತ್ತವೆ ಎಂದು ನ್ಯಾಯಪೀಠ ಆತಂಕ ವ್ಯಕ್ತಪಡಿಸಿದೆ. ಭವಿಷ್ಯದಲ್ಲಿ ಇಂತಹ ದುರ್ಘಟನೆಗಳನ್ನು ತಡೆಯಲು ತಾಂತ್ರಿಕ ಮತ್ತು ಭೌತಿಕ ಭದ್ರತಾ ವ್ಯವಸ್ಥೆಯನ್ನು ಬಲಪಡಿಸುವ ಅಗತ್ಯವಿದೆ ಎಂದು ತೀರ್ಪಿನಲ್ಲಿ ಸೂಚಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...