ಸಲ್ಮಾನ್ ರಶ್ದಿ ಕೃತಿ ʼದಿ ಸಟಾನಿಕ್ ವರ್ಸಸ್ʼ ಆಮದು ನಿಷೇಧ ತೆರವುಗೊಳಿಸಿದ ದೆಹಲಿ ಹೈಕೋರ್ಟ್

Date:

ಲೇಖಕ ಸಲ್ಮಾನ್ ರಶ್ದಿ ಅವರ ಕೃತಿ ʼದಿ ಸಟಾನಿಕ್‌ ವರ್ಸಸ್‌ʼ ಆಮದನ್ನು ನಿಷೇಧಿಸುವ ಕಸ್ಟಮ್ಸ್‌ ಅಧಿಸೂಚನೆ ಈಗ ಅಸ್ತಿತ್ವದಲ್ಲಿಲ್ಲ ಎಂದು ಭಾವಿಸಬೇಕು ಎಂಬುದಾಗಿ ದೆಹಲಿ ಹೈಕೋರ್ಟ್‌ ಈಚೆಗೆ ತಿಳಿಸಿದೆ. ಪುಸ್ತಕದ ಆಮದನ್ನು ನಿಷೇಧಿಸುವ 1988 ರ ಅಧಿಸೂಚನೆಯನ್ನು ಪತ್ತೆ ಹಚ್ಚಲು ಸಾಧ್ಯವಿಲ್ಲ ಎಂದು ಕೇಂದ್ರೀಯ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ ನ್ಯಾಯಾಲಯಕ್ಕೆ ತಿಳಿಸಿದ ನಂತರ ನ್ಯಾಯಾಲಯ ಈ ವಿಚಾರ ತಿಳಿಸಿದೆ.

- Advertisement -

ಪುಸ್ತಕ ಇಸ್ಲಾಮ್‌ ಧರ್ಮವನ್ನು ದೂಷಿಸುತ್ತದೆ ಎಂದು ಮುಸ್ಲಿಂ ಸಮುದಾಯದ ಸದಸ್ಯರು ನೀಡಿದ್ದ ದೂರಿನ ಆಧಾರದ ಮೇಲೆ ರಾಜೀವ್ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರ 1988ರಲ್ಲಿ ಕೃತಿ ಆಮದು ಮಾಡಿಕೊಳ್ಳುವುದನ್ನು ನಿಷೇಧಿಸಿತ್ತು. ಕಾನೂನು ಮತ್ತು ಸುವ್ಯವಸ್ಥೆಯ ಕಾರಣಗಳಿಗಾಗಿ ತೆಗೆದುಕೊಂಡ ನಿರ್ಧಾರವನ್ನು ವರ್ಷಗಳ ನಂತರ, ಕೇಂದ್ರದ ಮಾಜಿ ಸಚಿವ ಕೆ ನಟವರ್‌ ಸಿಂಗ್ ಸಮರ್ಥಿಸಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಅಧಿಕಾರಿಗಳು ಅಧಿಸೂಚನೆಯ ಪ್ರತಿ ಸಲ್ಲಿಸಲು ವಿಫಲವಾದ ಕಾರಣ, ನ್ಯಾಯಮೂರ್ತಿಗಳಾದ ರೇಖಾ ಪಲ್ಲಿ ಮತ್ತು ಸೌರಭ್ ಬ್ಯಾನರ್ಜಿ ಅವರಿದ್ದ ಪೀಠ ನವೆಂಬರ್ 5ರಂದು ನಿಷೇಧಕ್ಕಿರುವ ಮಾನ್ಯತೆ ತಿರಸ್ಕರಿಸಿತ್ತು.

“ಮೇಲಿನ ಸನ್ನಿವೇಶಗಳ ಆಧಾರದಲ್ಲಿ, ಅಂತಹ ಯಾವುದೇ ಅಧಿಸೂಚನೆ ಅಸ್ತಿತ್ವದಲ್ಲಿಲ್ಲ ಎಂದು ಭಾವಿಸುವುದನ್ನು ಹೊರತುಪಡಿಸಿ ನಮಗೆ ಬೇರೆ ಆಯ್ಕೆಗಳಿಲ್ಲ, ಆದ್ದರಿಂದ, ನಾವು ನಿಷೇಧದ ಸಿಂಧುತ್ವ ಪರೀಕ್ಷಿಸಲು ಮತ್ತು ರಿಟ್ ಅರ್ಜಿ ನಿರುಪಯುಕ್ತವೆಂದು ಪರಿಗಣಿಸಲು ಸಾಧ್ಯವಿಲ್ಲ” ಎಂಬುದಾಗಿ ನ್ಯಾಯಾಲಯ ಹೇಳಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೋವಿಡ್‌ ದುರಂತದಲ್ಲೂ ʼಹೆಣದ ಮೇಲೆ ಹಣʼ ಎತ್ತಿದವರ ಅಮಾನವೀಯತೆ

ಪುಸ್ತಕ ನಿಷೇಧಿಸಿರುವ ಹಿನ್ನೆಲೆಯಲ್ಲಿ ಆಮದು ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬ ಕಾರಣಕ್ಕೆ 2019 ರಲ್ಲಿ ಶಾಂದಿಪಾನ್ ಖಾನ್ ಎಂಬುವವರು ಅರ್ಜಿ ಸಲ್ಲಿಸಿದ್ದರು. ಅಧಿಸೂಚನೆಯ ಪ್ರತಿ ಯಾವುದೇ ಅಧಿಕೃತ ಜಾಲತಾಣದಲ್ಲಾಗಲೀ ಅಥವಾ ಯಾವುದೇ ಅಧಿಕಾರಿಗಳ ಬಳಿಯಾಗಲೀ ಲಭ್ಯವಿಲ್ಲ ಎಂದು ಅವರು ಹೇಳಿದ್ದರು. ಖಾನ್‌ ಅವರು ಮಾಹಿತಿ ಹಕ್ಕು ಕಾಯಿದೆಯಡಿ ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ಗೃಹ ವ್ಯವಹಾರಗಳ ಸಚಿವಾಲಯ ಪುಸ್ತಕ ನಿಷೇಧಗೊಂಡಿರುವುದನ್ನು ದೃಢಪಡಿಸಿತ್ತು.

ಅಧಿಸೂಚನೆ ಅಸ್ತಿತ್ವದಲ್ಲಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡುವುದರೊಂದಿಗೆ, ಖಾನ್ ಭಾರತಕ್ಕೆ ಪುಸ್ತಕ ಆಮದು ಮಾಡಿಕೊಳ್ಳಲು ಅನುಮತಿ ದೊರೆತಿದೆ. ಅರ್ಜಿದಾರರು ಕಾನೂನು ಪ್ರಕಾರ ಪುಸ್ತಕಕ್ಕೆ ಸಂಬಂಧಿಸಿದಂತೆ ಎಲ್ಲ ಕ್ರಮ ಕೈಗೊಳ್ಳಲು ಅರ್ಹರು ಎಂದು ಪೀಠ ನುಡಿದಿದೆ.

ಹೈಕೋರ್ಟ್‌ನ ಈ ನಿರ್ಧಾರ ಪುಸ್ತಕದ ಆಮದಿನ ಮೇಲಿನ 36 ವರ್ಷಗಳ ಸುದೀರ್ಘ ನಿಷೇಧವನ್ನು ತೆಗೆದುಹಾಕುತ್ತದೆ. ಅರ್ಜಿದಾರರ ಪರ ವಕೀಲರಾದ ಉದ್ದಂ ಮುಖರ್ಜಿ ಮತ್ತು ಸ್ವಪ್ನಿಲ್ ಪಟ್ಟನಾಯಕ್ ವಾದ ಮಂಡಿಸಿದರು. ಸರ್ಕಾರದ ಪರವಾಗಿ ಅನುರಾಗ್ ಓಜಾ, ಸುಭಮ್ ಕುಮಾರ್, ರವಿ ಪ್ರಕಾಶ್, ತಹಾ ಯಾಸಿನ್ ಮತ್ತು ಯಶಾರ್ಥ್ ಪ್ರತಿನಿಧಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...