BREAKING NEWS | ಟೆಲಿಗ್ರಾಮ್ ತಾತ್ಕಾಲಿಕ ನಿಷೇಧ ನಿರ್ಧಾರ ಎತ್ತಿಹಿಡಿದ ದೆಹಲಿ ಹೈಕೋರ್ಟ್

Date:

ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳು ಬೆಳಕಿಗೆ ಬಂದ ಬಳಿಕ ಮೇ 3ರಂದು ನಡೆದಿದ್ದ ನೀಟ್-ಯುಜಿ ಪರೀಕ್ಷೆಯನ್ನು ಮೇ 12ರಂದು ಅಧಿಕೃತವಾಗಿ ರದ್ದುಗೊಳಿಸಲಾಗಿದೆ. ಜೂನ್ 21ರಂದು ಮರುಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ ಮುಂಚಿತವಾಗಿ ಐದು ದಿನಗಳವರೆಗೆ ಟೆಲಿಗ್ರಾಮ್ ತಾತ್ಕಾಲಿಕ ನಿಷೇಧಿಸಲಾಗಿದ್ದು, ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ಎತ್ತಿಹಿಡಿದಿದೆ.

- Advertisement -

ನೀಟ್ ಮರುಪರೀಕ್ಷಾ ಪ್ರಕ್ರಿಯೆಯ ಸಮಯದಲ್ಲಿ ಯಾವುದೇ ಸಂಭಾವ್ಯ ಸೋರಿಕೆ ಅಥವಾ ವೇದಿಕೆಯ ದುರುಪಯೋಗವನ್ನು ತಡೆಯಲು ಈ ಕ್ರಮ ಅಗತ್ಯವಾಗಿದೆ ಎಂಬುದು ಸರ್ಕಾರದ ವಾದವಾಗಿದೆ. ಈ ವಾದವನ್ನು ದೆಹಲಿ ಹೈಕೋರ್ಟ್ ಬೆಂಬಲಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಇದನ್ನು ಓದಿದ್ದೀರಾ? NEET ಮರುಪರೀಕ್ಷೆ | ಭಾರತದಲ್ಲಿ ಟೆಲಿಗ್ರಾಮ್ ಆ್ಯಪ್ ತಾತ್ಕಾಲಿಕ ಬ್ಯಾನ್!

ನೀಟ್ ಪರೀಕ್ಷೆ ಹಿನ್ನೆಲೆ ಟೆಲಿಗ್ರಾಮ್ ತಾತ್ಕಾಲಿಕವಾಗಿ ನಿಷೇಧಿಸಿರುವುದನ್ನು ಪ್ರಶ್ನಿಸಿ ಟೆಲಿಗ್ರಾಮ್ ಸಂಸ್ಥೆ ದೆಹಲಿ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರ ಪೀಠವು ಶುಕ್ರವಾರಕ್ಕೆ ಆದೇಶ ಕಾಯ್ದಿರಿಸಿತ್ತು. “ನಿರ್ಧಾರ ತೆಗೆದುಕೊಂಡ ತುರ್ತು ಸಂದರ್ಭಗಳನ್ನು ಪರಿಗಣಿಸಿ ಟೆಲಿಗ್ರಾಮ್‌ನ ತಾತ್ಕಾಲಿಕ ಅಮಾನತು ಅಸಮಾನ ಎಂದು ಹೇಳಲಾಗದು” ಎಂದು ಹೈಕೋರ್ಟ್ ಹೇಳಿದೆ.

ಪರೀಕ್ಷೆಯ ಪಾರದರ್ಶಕತೆ ಕಾಯ್ದುಕೊಳ್ಳಲು ಕೇಂದ್ರ ಸರ್ಕಾರ ಕೈಗೊಂಡಿರುವ ತುರ್ತು ಕ್ರಮಗಳು ಕಾನೂನುಬದ್ಧವಾಗಿವೆ. ಟೆಲಿಗ್ರಾಮ್‌ನ ಕ್ಲೌಡ್ ಆರ್ಕಿಟೆಕ್ಚರ್ ಮತ್ತು ಮೆಸೇಜ್ ಎಡಿಟಿಂಗ್ ವೈಶಿಷ್ಟ್ಯಗಳನ್ನು ಬಳಸಿ ನಕಲಿ ಪ್ರಶ್ನೆಪತ್ರಿಕೆ ಹರಡುವ ಮತ್ತು ಅಕ್ರಮ ಎಸಗುವ ಸಾಧ್ಯತೆ ಹೆಚ್ಚಿರುವುದರಿಂದ ಐಟಿ ಕಾಯ್ದೆಯ ಸೆಕ್ಷನ್ 69A ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ಸಮರ್ಥಿಸಿಕೊಂಡಿದೆ. ಸರ್ಕಾರದ ಈ ವಾದವನ್ನು ಹೈಕೋರ್ಟ್ ಕೂಡಾ ಸರಿ ಎಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ – ಯುಪಿಯಲ್ಲಿ ಸಿನಿಮಾ ಆಗುವುದೇ?

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ...

ನೋಯ್ಡಾ ಬಳಿ ವಿದ್ಯಾರ್ಥಿಗಳಿಗೆ ಗುದ್ದಿ ಪರಾರಿಯಾದ ಕಾರು ಚಾಲಕ

​ನೋಯ್ಡಾದ ನಾಲೆಡ್ಜ್ ಪಾರ್ಕ್ ಪ್ರದೇಶದಲ್ಲಿರುವ ಪ್ರತಿಷ್ಠಿತ ಜಿಎನ್‌ಐಓಟಿ (GNIOT) ಕಾಲೇಜಿನ ಮುಂಭಾಗದಲ್ಲಿ...

ಮಹಾರಾಷ್ಟ್ರ ಟಿಇಟಿ ಪ್ರಶ್ನೆಪತ್ರಿಕೆ ಸೋರಿಕೆ: ಕೇವಲ 8,000 ರೂ. ಆಸೆಗೆ ಬಿದ್ದು ಶೂಗಳಲ್ಲಿ ಅಡಗಿಸಿ ಪಶ್ನೆಪತ್ರಿಕೆ ಕಳವು!

ಮಹಾರಾಷ್ಟ್ರ ಶಿಕ್ಷಕರ ಅರ್ಹತಾ ಪರೀಕ್ಷೆಯ (ಟಿಇಟಿ) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ...