ದೆಹಲಿಯಲ್ಲಿ 52.3 ಡಿಗ್ರಿ ಸೆಲ್ಸಿಯಸ್ ತಾಪಮಾನ; ಭಾರತದ ಸಾರ್ವಕಾಲಿಕ ದಾಖಲೆ

Date:

ದೆಹಲಿಯಲ್ಲಿ 52.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ದೇಶದಲ್ಲಿ ದಾಖಲಾದ ಸಾರ್ವಕಾಲಿಕ ದಾಖಲೆ ತಾಪಮಾನವಾಗಿದೆ. ತಾಪಮಾನ ಏರಿಕೆಯಾದಂತೆ ದೆಹಲಿಯಲ್ಲಿ ವಿದ್ಯುತ್ ಬಳಕೆಯೂ ಕೂಡಾ ಏರಿಕೆಯಾಗಿದೆ. ಅಧಿಕ ತಾಪಮಾನವಿದ್ದ ದೆಹಲಿಯಲ್ಲಿ ದಿಡೀರ್ ಹವಾಮಾನ ಬದಲಾಗಿದ್ದು, ಸದ್ಯ ಮೋಡ ಕವಿದ ವಾತಾವರಣವಿದೆ.

ತಾಪಮಾನ ಹೆಚ್ಚಾಗುತ್ತಿದ್ದಂತೆ ಜನರು ಅಧಿಕವಾಗಿ ಹವಾನಿಯಂತ್ರಣ (ಎಸಿ) ಬಳಕೆ ಮಾಡಲು ಆರಂಭಿಸಿದ್ದರು. ಪರಿಣಾಮ, ದೆಹಲಿಯಲ್ಲಿ ಸಾರ್ವಕಾಲಿಕ ವಿದ್ಯುತ್ ಬೇಡಿಕೆ 8,302 ಮೆಗಾವ್ಯಾಟ್‌ (MW) ದಾಖಲಾಗಿದೆ ಎಂದು ವಿದ್ಯುತ್ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ರಾಜಸ್ಥಾನ| ಬಿಸಿಲಿನ ತಾಪಕ್ಕೆ ಮತ್ತೆ ಮೂವರು ಬಲಿ; ರೋಗಿಗಳ ಸಂಖ್ಯೆ 3,965ಕ್ಕೆ ಏರಿಕೆ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮರುಭೂಮಿಗಳ ರಾಜ್ಯವೆಂದೇ ಕರೆಯಲಾಗುವ ರಾಜಸ್ಥಾನದ ಫಲೋಡಿಯಲ್ಲಿ 50.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಹರಿಯಾಣದ ಸಿರ್ಸಾದಲ್ಲಿ 50.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ದಕ್ಷಿಣ ರಾಜಸ್ಥಾನದ ಬಾರ್ಮರ್, ಜೋಧ್‌ಪುರ್, ಉದಯಪುರ, ಸಿರೋಹಿ ಮತ್ತು ಜಲೋರ್ ಜಿಲ್ಲೆಗಳಲ್ಲಿ ಇಂದು 4 ಡಿಗ್ರಿ ಸೆಲ್ಸಿಯಸ್‌ನಷ್ಟು ತಾಪಮಾನ ಕುಸಿತ ಕಂಡು ಬಂದಿದೆ.

ಇದನ್ನು ಓದಿದ್ದೀರಾ? ಭಾರತದ ಪ್ರಮುಖ 10 ನಗರಗಳಲ್ಲಿ ಬಿಸಿಗಾಳಿ ಹೆಚ್ಚಳ; ರೆಡ್‌ ಅಲರ್ಟ್ ಘೋಷಣೆ

ಇನ್ನು ಈಗಾಗಲೇ ರಾಜಸ್ಥಾನ, ದೆಹಲಿ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ಮಧ್ಯಪ್ರದೇಶಗಳಲ್ಲಿ ಭಾರತೀಯ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ.

ಗುಜರಾತ್‌ನ ವಡೋದರಾದಲ್ಲಿ ಮೇ 22ರಿಂದ ಮೇ 27ರವರೆಗಿನ ಅವಧಿಯಲ್ಲಿ ಸುಮಾರು ಆರು ಮಂದಿ ಬಿಸಿಲಿನ ದಗೆಯಿಂದಾಗಿಯೇ ಸಾವನ್ನಪ್ಪಿದ್ದಾರೆ. 108 ತುರ್ತು ವೈದ್ಯಕೀಯ ಸೇವೆ ಸಹಾಯವಾಣಿಗೆ ಮೇ 21ರಿಂದ 100ಕ್ಕೂ ಅಧಿಕ ತಾಪಮಾನ ಸಂಬಂಧಿತ ಆರೋಗ್ಯ ಸಮಸ್ಯೆಯ ಕರೆಗಳು ಬಂದಿದೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಯನಾಡ್‌ನಲ್ಲಿ ಪ್ರಿಯಾಂಕಾ ಸ್ಪರ್ಧೆ; ಕಾಂಗ್ರೆಸ್‌ ವಿರುದ್ಧ ಬಿಜೆಪಿ ಗೇಲಿ

ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾದ ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸುವ...

ಬಿಹಾರ | ಉದ್ಘಾಟನೆಗೂ ಮುನ್ನ ನದಿಯಲ್ಲಿ ಕೊಚ್ಚಿ ಹೋದ 12 ಕೋಟಿ ರೂ. ವೆಚ್ಚದ ಸೇತುವೆ

ಬಿಹಾರ ದ ಅರಾರಿಯಾ ಜಿಲ್ಲೆಯಲ್ಲಿ ಬಾಕ್ರಾ ನದಿಗೆ ಅಡ್ಡಲಾಗಿ 12 ಕೋಟಿ...

ವಿನೀತ ಮೋದಿಗೆ ಜಾಗತಿಕ ಒತ್ತಡ; ದುರ್ಬಲಗೊಳ್ಳುತ್ತಿದೆ ವಿದೇಶಾಂಗ ಸಂಬಂಧ

ಭಾರತದಲ್ಲಿ ದುರ್ಬಲರಾಗಿ, ವಿನೀತರಾಗಬೇಕಾದ ಒತ್ತಡ ಹೊಂದಿರುವ ಮೋದಿ, ತಮ್ಮ ಮೂರನೇ ಅವಧಿಯಲ್ಲಿ...