ದೆಹಲಿ ಈಗ ‘ಡಿಟೆನ್ಷನ್ ಸ್ಟೇಟ್’ – ಪ್ರತಿಭಟನಾಕಾರರ ಬಂಧನಕ್ಕೆ ಸಂಸದ ಸಂಜಯ್ ರಾವತ್ ಆಕ್ರೋಶ

Date:

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಪಕ್ಷಗಳು, ವಿವಿಧ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಯನ್ನು ತಡೆಯಲು ದೆಹಲಿ ಪೊಲೀಸರು ಕೈಗೊಂಡಿರುವ ಕಠಿಣ ಕ್ರಮಗಳನ್ನು ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ತೀವ್ರವಾಗಿ ಖಂಡಿಸಿದ್ದಾರೆ. ದೆಹಲಿ ಪ್ರಸ್ತುತ ‘ಡಿಟೆನ್ಷನ್ ಸ್ಟೇಟ್’ (ಬಂಧನ ರಾಜ್ಯ) ಆಗಿ ಪರಿವರ್ತನೆಯಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

- Advertisement -

ಮುಂಬೈನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಂಜಯ್ ರಾವತ್, “ರಾಜಧಾನಿಯಲ್ಲಿ ‘ಪೊಲೀಸ್ ರಾಜ್’ ಸ್ಥಾಪನೆಯಾಗಿದ್ದು, ದೇಶದಲ್ಲಿ ತುರ್ತುಪರಿಸ್ಥಿತಿ (ಎಮರ್ಜೆನ್ಸಿ) ಜಾರಿಯಲ್ಲಿದೆ ಎಂಬ ವಾತಾವರಣ ಸೃಷ್ಟಿಯಾಗಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ನಂಬಿಕೆ ಇರುವ ಜನರು ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದರೆ, ಅವರ ಧ್ವನಿಯನ್ನು ಅಡಗಿಸಲು ಗಡಿಗಳನ್ನು ಸೀಲ್ ಮಾಡಿ, ರೈಲುಗಳನ್ನು ತಡೆದು ಪ್ರತಿಭಟನಾಕಾರರನ್ನು ಸಾಲಾಗಿ ವಶಕ್ಕೆ ಪಡೆಯಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಇದನ್ನೂ ಓದಿ: ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳು, ಮಹಿಳೆಯರ ಮೇಲೆ ಹಲ್ಲೆ ಮಾಡಿದ ಹಿಂದೂ ರಕ್ಷಾ ದಳದ ನಾಲ್ವರ ಬಂಧನ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಆಗಮಿಸುತ್ತಿದ್ದ ನಾಯಕರನ್ನು ಹಾಗೂ ಯುವಕರನ್ನು ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ ಮತ್ತು ಗಡಿ ಪ್ರದೇಶಗಳಲ್ಲೇ ಪೊಲೀಸರು ವಶಕ್ಕೆ ಪಡೆಯುತ್ತಿದ್ದಾರೆ. ಪ್ರತಿಭಟನೆಯನ್ನು ಹತೋಟಿಯಲ್ಲಿಡಲು ಬೃಹತ್ ಪ್ರಮಾಣದಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು, ಸಾರ್ವಜನಿಕರ ಹಕ್ಕನ್ನು ಹಸಿಹಸಿಯಾಗಿ ಕಸಿಯಲಾಗುತ್ತಿದೆ ಎಂದು ರಾವತ್ ದೂರಿದರು.

ಇದರೊಂದಿಗೆ, ಮಹಾರಾಷ್ಟ್ರದಲ್ಲೂ ಪ್ರತಿಭಟನಾಕಾರರ ವಿರುದ್ಧ ಮುಂಬೈ ಪೊಲೀಸರು ಕೈಗೊಂಡಿರುವ ಕ್ರಮಗಳನ್ನು ಖಂಡಿಸಿದ ಅವರು, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಜನತೆಯಲ್ಲಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದರು.

ಇನ್ನು ದೆಹಲಿ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆಗೂ ಮುನ್ನವೇ ಹಲವು ನಾಯಕರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ, ವಿಮಾನದಲ್ಲೇ ಹಲವು ನಾಯಕರ ಬಂಧನ ಮಾಡಲಾಗಿದೆ. ಇಂದು ಬಿಡುಗಡೆ ಮಾಡಲಾಗಿದೆ.

ಬಂಧನಕ್ಕೆ ಹೆದರದ ಯುವಜನರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಆದರೆ ಇಂದೂ ಹಲವು ಮಂದಿಯನ್ನು ಬಂಧಿಸಲಾಗುತ್ತಿದೆ. ಇದು ಈ ಸರ್ವಾಧಿಕಾರದ ಅಂತ್ಯದ ಆರಂಭವಾಗಿದೆ ಎಂದು ಸಿಜೆಪಿ ಹೇಳಿದೆ. ಇನ್ನು ಎಸ್‌ಎಫ್‌ಐ ನಾಯಕರನ್ನೂ ಬಂಧನ ಮಾಡಲಾಗುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ ಹಿಂಸಾಚಾರ | 12 ಗಂಟೆಗಳಲ್ಲಿ 9 ಸಾವು; ಶಾಂತಿ ಕಾಪಾಡಲು ಸಿಎಂ ಮನವಿ

ಈಶಾನ್ಯ ರಾಜ್ಯ ಮಣಿಪುರದ ಮಲೆನಾಡು ಭಾಗಗಳಲ್ಲಿ ಕಳೆದ ಕೆಲ ಗಂಟೆಗಳಲ್ಲಿ ಮರುಕಳಿಸಿದ...

SIR | ಬೀದರ್‌ ಜಿಲ್ಲಾದ್ಯಂತ ಮತದಾರರ ಹೆಸರು ತೆಗೆಸಲು 6,101 ಫಾರಂ-7 ಅರ್ಜಿ ಸಲ್ಲಿಕೆ!

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮುಂದುವರಿದಿದ್ದು,...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ನನ್ನನ್ನು ಬಂಧಿಸಿರಲಿಲ್ಲ, ಕಿಡ್ನಾಪ್ ಮಾಡಲಾಗಿತ್ತು: ಧೃವ್ ರಾಠಿ ಆರೋಪ

ಸಿಜೆಪಿ ಪ್ರತಿಭಟನೆಗೂ ಮುನ್ನ ಶನಿವಾರ ಮುಂಜಾನೆ ಖ್ಯಾತ ಯೂಟ್ಯೂಬರ್‌ ಧೃವ್ ರಾಠಿ...

ರಾಜ್ಯದ 11 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುತ್ತಿದೆ. ಹಿಂಗಾರು ಮಳೆಯೂ ಆರಂಭವಾಗುತ್ತಿದೆ. ಪರಿಣಾಮ, ಮುಂದಿನ 4...