2010ರ ಪ್ರಚೋದನಕಾರಿ ಭಾಷಣ: ಖ್ಯಾತ ಲೇಖಕಿ ಅರುಂಧತಿ ರಾಯ್ ವಿರುದ್ಧ ಯುಎಪಿಎ ಅಡಿ ತನಿಖೆ

Date:

Advertisements

2010ರಲ್ಲಿ ನಡೆದಿದ್ದ ಸಮಾರಂಭವೊಂದರಲ್ಲಿ ಪ್ರಚೋದನಕಾರಿ ಭಾಷಣಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಲೇಖಕಿ ಅರುಂಧತಿ ರಾಯ್ ವಿರುದ್ಧ ಭಯೋತ್ಪಾದನಾ-ವಿರೋಧಿ ಕಾನೂನು (ಯುಎಪಿಎ) ಅಡಿಯಲ್ಲಿ ತನಿಖೆ ನಡೆಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ನಿರ್ದೇಶನ ನೀಡಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ದೆಹಲಿ ಲೆಫ್ಟಿನೆಂಟ್ ಗವರ್ನರ್ ಅವರ ಅನುಮತಿ ಮೇರೆಗೆ ಅರುಂಧತಿ ರಾಯ್ ವಿರುದ್ಧ ಭಯೋತ್ಪಾದನಾ-ವಿರೋಧಿ ಕಾನೂನಿನ ಅಡಿ ತನಿಖೆ ನಡೆಸಲು ದೆಹಲಿ ಪೊಲೀಸರು ಮುಂದಾಗಿರುವುದಾಗಿ ವರದಿಯಾಗಿದೆ.

2010ರಲ್ಲಿ ‘ಆಝಾದಿ-ದಿ ಓನ್ಲಿ ವೇ’ ಬ್ಯಾನರ್ ಅಡಿಯಲ್ಲಿ ಆಯೋಜಿಸಲಾಗಿದ್ದ ಸಮ್ಮೇಳನದಲ್ಲಿ ಅರುಂಧತಿ ರಾಯ್ ಪ್ರಚೋದನಕಾರಿ ಭಾಷಣ ಮಾಡಿದ್ದರು ಎಂದು ಆರೋಪಿಸಲಾಗಿತ್ತು.

Advertisements

ರಾಜಧಾನಿ ದೆಹಲಿಯ ಎಲ್‌ಟಿಜಿ ಸಭಾಂಗಣದಲ್ಲಿ ಅಕ್ಟೋಬರ್‌ 21, 2010ರಂದು, “ಕಮಿಟಿ ಫಾರ್‌ ದಿ ರಿಲೀಸ್‌ ಆಫ್‌ ಪೊಲಿಟಿಕಲ್‌ ಪ್ರಿಸನರ್ಸ್‌” ಎಂಬ ಸಂಘಟನೆ ಆಯೋಜಿಸಿದ್ದ ಸಮಾರಂಭದಲ್ಲಿ ಪ್ರಚೋದನಕಾರಿ ಭಾಷಣ ನೀಡಿದ್ದರೆಂದು ಆರೋಪಿಸಲಾಗಿತ್ತು. ಕಾಶ್ಮೀರದ ಸಾಮಾಜಿಕ ಹೋರಾಟಗಾರ ಸುಶೀಲ್‌ ಪಂಡಿತ್‌ ಅವರು ಈ ಸಂಬಂಧ ದೂರು ದಾಖಲಿಸಿದ್ದರು. ಈ ಪ್ರಕರಣದ ಎಫ್‌ಐಆರ್‌ಗಳನ್ನು ಹೊಸದಿಲ್ಲಿಯ ಮೆಟ್ರೋಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ನವೆಂಬರ್‌ 27, 2010ರಂದು ದಾಖಲಾಗಿತ್ತು.

ಪ್ರಕರಣದಲ್ಲಿ ಖ್ಯಾತ ಲೇಖಕಿ ಅರುಂಧತಿ ರಾಯ್‌ ಮತ್ತು ಕಾಶ್ಮೀರದ ಕೇಂದ್ರೀಯ ವಿವಿಯಲ್ಲಿ ಅಂತಾರಾಷ್ಟ್ರೀಯ ಕಾನೂನು ವಿಷಯದ ಮಾಜಿ ಪ್ರೊಫೆಸರ್‌ ಶೇಖ್‌ ಶೌಕತ್‌ ಹುಸೇನ್ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅಂದಿನ ದಿಲ್ಲಿ ಲೆಫ್ಟಿನೆಂಟ್‌ ಗವರ್ನರ್‌ ವಿ ಕೆ ಸಕ್ಸೇನಾ ಅನುಮತಿ ನೀಡಿದ್ದರು. ಐಪಿಸಿಯ ಸೆಕ್ಷನ್‌ 153ಎ, 153ಬಿ ಮತ್ತು 505 ಅನ್ವಯ ಪ್ರಕರಣ ದಾಖಲಾಗಿತ್ತು.

ದೇಶದ್ರೋಹದ ಪ್ರಕರಣ ದಾಖಲಾಗಿದ್ದರೂ ಮೇ 5, 2022ರ ಸುಪ್ರೀಂ ಕೋರ್ಟ್‌ ಆದೇಶಾನುಸಾರ ಸೆಕ್ಷನ್‌ 124ಎ ಅನ್ವಯ ಕಾನೂನು ಕ್ರಮಕೈಗೊಳ್ಳಲು ಅನುಮತಿಸಲಾಗಿಲ್ಲ. ಆದರೆ ಉಳಿದ ಸೆಕ್ಷನ್‌ಗಳನ್ವಯ ಪ್ರಕರಣಗಳನ್ನು ಸಿಜೆಐ ನೇತೃತ್ವದ ತ್ರಿಸದಸ್ಯ ಪೀಠ ಸಂವಿಧಾನಿಕ ಪೀಠದ ಮುಂದೆ ಸೆಪ್ಟೆಂಬರ್‌ 12, 2023ರಂದು ಇರಿಸಿತ್ತು ಎಂದು ಎಲ್‌ಜಿ ಕಚೇರಿ ತಿಳಿಸಿದೆ.

2010ರಲ್ಲಿ ಮಾಡಿದ್ದ ಪ್ರಚೋದನಕಾರಿ ಭಾಷಣದ ಆರೋಪಕ್ಕಾಗಿ ದೆಹಲಿ ಎಲ್‌ಜಿ ಶುಕ್ರವಾರ ಅರುಂಧತಿ ರಾಯ್ ವಿರುದ್ಧ ಯುಎಪಿಎ ಅಡಿಯಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರಿಂದ, ರಾಯ್ ವಿರುದ್ಧ ಭಯೋತ್ಪಾದನಾ ವಿರೋಧಿ ಕಾನೂನಿನಡಿಯಲ್ಲಿ ಕಾನೂನು ಕ್ರಮ ಜರುಗಿಸಲು ದೆಹಲಿ ಪೊಲೀಸರು ಮುಂದಾಗಿದ್ದಾರೆ.

ಇದನ್ನು ಓದಿದ್ದೀರಾ? ವ್ಯಾಪಾರಿಗಳಿಗೆ ಪರವಾನಿಗೆ ನೀಡಲು ಕ್ರಮ ವಹಿಸಿ: ಅಧಿಕಾರಿಗಳಿಗೆ ಸಚಿವ ಮಹದೇವಪ್ಪ ಸೂಚನೆ

ವರದಿಗಳ ಪ್ರಕಾರ, ಸಮಾರಂಭದಲ್ಲಿ ಭಾಷಣ ಮಾಡುವಾಗ ಬೂಕರ್ ಪ್ರಶಸ್ತಿ ವಿಜೇತ ಲೇಖಕರು ಕೂಡ ಆಗಿರುವ ಅರುಂಧತಿ ರಾಯ್, “ಕಾಶ್ಮೀರವು ಎಂದಿಗೂ ಭಾರತದ ಒಕ್ಕೂಟದ ಭಾಗವಾಗಿಲ್ಲ ಮತ್ತು ಸಶಸ್ತ್ರ ಪಡೆಗಳಿಂದ ಬಲವಂತವಾಗಿ ಆಕ್ರಮಿಸಿಕೊಳ್ಳಲ್ಪಟ್ಟಿದೆ” ಎಂದು ಹೇಳಿದ್ದರು ಎನ್ನಲಾಗಿದೆ.

ಕಾರ್ಯಕ್ರಮದ ನಂತರ, ಸಮ್ಮೇಳನದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಲೇಖಕ ಮತ್ತು ಇತರ ಭಾಷಣಕಾರರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X