ಪ್ರಯಾಣಿಕರಿಗೆ ಮದ್ಯ ಕೊಂಡೊಯ್ಯಲು ಅವಕಾಶ ನೀಡಿದ ದೆಹಲಿ ಮೆಟ್ರೋ

Date:

ದೆಹಲಿ ಮೆಟ್ರೋ ರೈಲು ಕಾರ್ಪೊರೇಷನ್ (ಡಿಎಂಆರ್‌ಸಿ) ಶುಕ್ರವಾರ(ಜೂನ್ 30) ಹೊಸ ನಿಯಮಾವಳಿಗಳನ್ನು ಜಾರಿಗೊಳಿಸಿದ್ದು, ಇದರನ್ವಯ ದೆಹಲಿ ಮೆಟ್ರೋ ಒಳಗೆ ಒಬ್ಬ ವ್ಯಕ್ತಿ ಎರಡು ಸೀಲ್ ಮಾಡಿದ ಮದ್ಯದ ಬಾಟಲಿಗಳನ್ನು ಕೊಂಡೊಯ್ಯಲು ಅನುಮತಿ ನೀಡಲಾಗಿದೆ. ಆದರೆ ಮೆಟ್ರೋ ಆವರಣದಲ್ಲಿ ಮದ್ಯಪಾನ ಸೇವಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

- Advertisement -

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಮತ್ತು ಡಿಎಂಆರ್‌ಸಿಯ ಅಧಿಕಾರಿಗಳನ್ನು ಒಳಗೊಂಡ ಸಮಿತಿಯು ಏರ್‌ಪೋರ್ಟ್ ಎಕ್ಸ್‌ಪ್ರೆಸ್ ಲೈನ್ ಹೊರತುಪಡಿಸಿ ಮೆಟ್ರೋದಲ್ಲಿ ಮದ್ಯ ಸಾಗಿಸುವುದನ್ನು ನಿಷೇಧಿಸಲಾಗಿತ್ತು. ಈಗ ಹಳೆಯ ಆದೇಶವನ್ನು ಪರಿಶೀಲಿಸಿದ ನಂತರ ಈ ನಿರ್ಧಾರವನ್ನು ಜಾರಿಗೊಳಿಸಲಾಗಿದೆ. ನವೀಕರಿಸಿದ ನಿಯಮಾವಳಿಗಳ ಪ್ರಕಾರ ದೆಹಲಿ ಮೆಟ್ರೋದ ಯಾವುದೇ ಭಾಗದಲ್ಲಿ ಬೇಕಾದರೂ ಓರ್ವ ವ್ಯಕ್ತಿಗೆ ಎರಡು ಸೀಲ್‌ ಮಾಡಿದ ಬಾಟಲಿ ಮದ್ಯ ಸಾಗಿಸುವ ಅವಕಾಶ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಈ ಸುದ್ದಿ ಓದಿದ್ದೀರಾ? ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜ್ಯಪಾಲರ ಭೇಟಿ: ರಾಜೀನಾಮೆ ಸಾಧ್ಯತೆ

ಡಿಎಂಆರ್‌ಸಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, “ಪ್ರತಿ ವ್ಯಕ್ತಿಗೆ ಎರಡು ಸೀಲ್ ಮಾಡಿದ ಮದ್ಯದ ಬಾಟಲಿಗಳನ್ನು ದೆಹಲಿ ಮೆಟ್ರೋದಲ್ಲಿ ಏರ್‌ಪೋರ್ಟ್ ಎಕ್ಸ್‌ಪ್ರೆಸ್ ಲೈನ್‌ನಲ್ಲಿನ ನಿಬಂಧನೆಗಳಿಗೆ ಸಮನಾಗಿ ಸಾಗಿಸಲು ಅನುಮತಿಸಲಾಗಿದೆ. ಸಿಐಎಸ್‌ಎಫ್ ಮತ್ತು ಡಿಎಂಆರ್‌ಸಿಯ ಅಧಿಕಾರಿಗಳನ್ನು ಒಳಗೊಂಡ ಸಮಿತಿಯು ಹಿಂದಿನ ಆದೇಶವನ್ನು ಪರಿಶೀಲಿಸಿದೆ. ಹಳೆಯ ನಿಯಮದ ಪ್ರಕಾರ, ಏರ್‌ಪೋರ್ಟ್ ಎಕ್ಸ್‌ಪ್ರೆಸ್ ಲೈನ್ ಹೊರತುಪಡಿಸಿ ದೆಹಲಿ ಮೆಟ್ರೋದಲ್ಲಿ ಮದ್ಯ ಸಾಗಿಸುವುದನ್ನು ನಿಷೇಧಿಸಲಾಗಿತ್ತು. ಆದಾಗ್ಯೂ, ಮೆಟ್ರೋ ಆವರಣದಲ್ಲಿ ಮದ್ಯಪಾನ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ತಿಳಿಸಲಾಗಿದೆ.

ಪ್ರಯಾಣಿಕರು ಮೆಟ್ರೋದಲ್ಲಿ ಪ್ರಯಾಣಿಸುವಾಗ ಸರಿಯಾದ ವರ್ತನೆಯನ್ನು ಕಾಪಾಡಿಕೊಳ್ಳಲು ವಿನಂತಿಸಲಾಗಿದೆ. ಪ್ರಯಾಣಿಕರು ಅಸಭ್ಯವಾಗಿ ವರ್ತಿಸುವುದು ಕಂಡುಬಂದಲ್ಲಿ, ಕಾನೂನಿನ ಅನ್ವಯ ಸೂಕ್ತ ಕ್ರಮವನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಪ್ರದೇಶದಲ್ಲಿ ಜಲಪ್ರಳಯ: ಪ್ರವಾಹಕ್ಕೆ 56 ಮಂದಿ ಬಲಿ, ಸಾವಿರಕ್ಕೂ ಹೆಚ್ಚು ಮನೆಗಳು ಧ್ವಂಸ

ಉತ್ತರ ಪ್ರದೇಶದಲ್ಲಿ ಕಳೆದ 60 ಗಂಟೆಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಪ್ರವಾಹ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...