ಉಪವಾಸ ಸತ್ಯಾಗ್ರಹ ವೇಳೆ ಹದಗೆಟ್ಟ ದೆಹಲಿ ಸಚಿವೆ ಅತಿಶಿ ಆರೋಗ್ಯ; ಆಸ್ಪತ್ರೆಗೆ ದಾಖಲು

Date:

ರಾಷ್ಟ್ರ ರಾಜಧಾನಿಗೆ ದಿನಕ್ಕೆ 100 ಮಿಲಿಯನ್ ಗ್ಯಾಲನ್ ನೀರು (ಎಂಜಿಡಿ) ಬಿಡುಗಡೆ ಮಾಡದೆ ನೀರಿನ ಬಿಕ್ಕಟ್ಟಿಗೆ ಕಾರಣವಾದ ಹರಿಯಾಣ ಸರ್ಕಾರದ ವಿರುದ್ಧ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ದೆಹಲಿ ಜಲ ಸಚಿವ ಅತಿಶಿ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

- Advertisement -

ಮಂಗಳವಾರ ಮುಂಜಾನೆ ಅತಿಶಿ ಅವರ ಆರೋಗ್ಯ ಹದಗೆಟ್ಟ ಕಾರಣ ಅವರನ್ನು ಲೋಕನಾಯಕ ಜೈ ಪ್ರಕಾಶ್ (ಎಲ್‌ಎನ್‌ಜೆಪಿ) ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಹರಿಯಾಣ ದೆಹಲಿಯ ಪಾಲಿನ ನೀರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಅತಿಶಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಮಂಗಳವಾರ ಐದನೇ ದಿನದ ಉಪವಾಸವಾಗಿದೆ.

ಎಲ್‌ಎನ್‌ಜೆಪಿ ಆಸ್ಪತ್ರೆಯ ವೈದ್ಯರು ಸೋಮವಾರ ಅತಿಶಿಯನ್ನು ಪರೀಕ್ಷೆ ಮಾಡಿದ್ದು, ಉಪವಾಸ ಸತ್ಯಾಗ್ರಹದಿಂದ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಕಾರಣ ಆಸ್ಪತ್ರೆಗೆ ದಾಖಲಾಗುವಂತೆ ಸಲಹೆ ನೀಡಿದ್ದರು. ಆದರೆ ಅತಿಶಿ ದೆಹಲಿಯ ಜನರಿಗೆ ನೀರು ಸಿಗುವವರೆಗೂ ಉಪವಾಸ ಮಾಡುವುದಾಗಿ ಪ್ರತಿಜ್ಞೆ ಮಾಡಿ ತನ್ನ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸಿದರು.

ಇದನ್ನು ಓದಿದ್ದೀರಾ?  ರಕ್ತದೊತ್ತಡ, ಸಕ್ಕರೆ ಪ್ರಮಾಣ ಇಳಿಕೆ; ಆದರೆ ಅನಿರ್ದಿಷ್ಟಾವಧಿ ಉಪವಾಸ ಮುಂದುವರಿಸುತ್ತೇನೆ: ಅತಿಶಿ

ಈ ಬಗ್ಗೆ ಸೋಮವಾರ ವಿಡಿಯೋ ಮೂಲಕ ಮಾಹಿತಿ ನೀಡಿದಿ ಅತಿಶಿ, ” ನಿನ್ನೆ ವೈದ್ಯರು ಬಂದು ನನ್ನನ್ನು ಪರೀಕ್ಷಿಸಿದರು. ನನ್ನ ಬಿಪಿ ಕಡಿಮೆಯಾಗಿದೆ, ನನ್ನ ಶುಗರ್ ಕಡಿಮೆಯಾಗಿದೆ ಎಂದು ಹೇಳಿದರು. ನಾನು ತೂಕವನ್ನು ಕಳೆದುಕೊಳ್ಳುತ್ತಿದ್ದೇನೆ, ಕೀಟೋನ್ ಮಟ್ಟವು ತುಂಬಾ ಹೆಚ್ಚಾಗಿದೆ. ಇದು ದೇಹಕ್ಕೆ ಹಾನಿಯನ್ನುಂಟುಮಾಡುತ್ತದೆ ಎಂದು ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ನನ್ನ ದೇಹ ಎಷ್ಟೇ ನೋವಿನಲ್ಲಿದ್ದರೂ ಈ ಉಪವಾಸ ಮಾಡುವ ನನ್ನ ಸಂಕಲ್ಪ ಬಲವಾಗಿದೆ. ದೆಹಲಿಯ 28 ಲಕ್ಷ ಜನರಿಗೆ ನೀರು ಸಿಗುವವರೆಗೂ ನನ್ನ ಅನಿರ್ದಿಷ್ಟಾವಧಿ ಉಪವಾಸ ಮುಂದುವರಿಯಲಿದೆ” ಎಂದು ಹೇಳಿದ್ದರು.

ಇನ್ನು ಅತಿಶಿಯವರ ರಕ್ತದಲ್ಲಿನ ಸಕ್ಕರೆ ಮಟ್ಟವು ಮಧ್ಯರಾತ್ರಿ 43ಕ್ಕೆ ಕುಸಿದಿದೆ ಮತ್ತು 3 ಗಂಟೆಗೆ 36ಕ್ಕೆ ಇಳಿಯಿತು ಎಂದು ಎಎಪಿ ಹೇಳಿದೆ. ಎಎಪಿ ನಾಯಕರನ್ನು ತಡರಾತ್ರಿ ಆಸ್ಪತ್ರೆಗೆ ಕರೆದೊಯ್ಯುತ್ತಿರುವ ಚಿತ್ರಗಳು ಮತ್ತು ದೃಶ್ಯಗಳನ್ನು ಎಎಪಿ ಹಂಚಿಕೊಂಡಿದೆ.

“ಅತಿಶಿ ಅವರ ರಕ್ತದಲ್ಲಿನ ಸಕ್ಕರೆ ಮಟ್ಟವು 36ಕ್ಕೆ ಕುಸಿದಿದೆ, ಆದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಎಎಪಿ ನಾಯಕ ಮತ್ತು ದೆಹಲಿ ಸಚಿವ ಸೌರಭ್ ಭಾರದ್ವಾಜ್ ಎಕ್ಸ್ ಪೋಸ್ಟ್ ಮಾಡಿದ್ದಾರೆ. ಮಾಧ್ಯಮಗಳಿಗೂ ಇದೇ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫಕೀರನಂತೆ ‘ಜೋಳಿಗೆ’ ಎತ್ತಿಕೊಂಡು ಹೋಗುವ ಸಮಯ ಬಂತು, ಹೊರಡಿ ಮೋದಿಜಿ: ಕಾಂಗ್ರೆಸ್ ಲೇವಡಿ

ದೇಶಾದ್ಯಂತ ಔಷಧಿಗಳ ಬೆಲೆ ತೀವ್ರವಾಗಿ ಏರಿಕೆಯಾಗುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್ ಪ್ರಶಸ್ತಿ ವಿಜೇತ ಸಂಶೋಧನೆ‌

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ...

CEC ಗ್ಯಾನೇಶ್‌ ಕುಮಾರ್‌ ವಿರುದ್ಧ ಭುಗಿಲೆದ್ದ ಆಕ್ರೋಶ; ತೀವ್ರಗೊಂಡ ಮೋಶಾ ದಮನ ಕ್ರಮಗಳು

ಚುನಾವಣಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌...

ಸಿಇಸಿ ಗ್ಯಾನೇಶ್ ವಿರುದ್ಧ ಅರ್ಜಿ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ಇತರ ಚುನಾವಣಾ...