ಗುರುದ್ವಾರ ಆವರಣದಲ್ಲಿ ದೆಹಲಿ ಪೊಲೀಸರು ಶೂ ಧರಿಸಿದ ಆರೋಪ: ‘ತಾಲಿಬಾನ್ ಮಾದರಿಯ ವರ್ತನೆ’ ಎಂದ ಪಂಜಾಬ್ ಸಿಎಂ

Date:

ದೆಹಲಿಯ ಐತಿಹಾಸಿಕ ಗುರುದ್ವಾರ ಶ್ರೀ ಬಾಂಗ್ಲಾ ಸಾಹಿಬ್‌ಗೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ ನೆಪದಲ್ಲಿ ದೆಹಲಿ ಪೊಲೀಸರು ಶೂ ಮತ್ತು ಲಾಠಿಗಳೊಂದಿಗೆ ಪ್ರವೇಶಿಸಿ ಪವಿತ್ರತೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರ ಈ ನಡವಳಿಕೆಯನ್ನು ಅವರು “ತಾಲಿಬಾನ್ ಮಾದರಿಯ ಧೋರಣೆ” ಎಂದು ಕರೆದಿದ್ದಾರೆ.

- Advertisement -

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಿನ್ನೆ ದೇಶದ ಹಲವೆಡೆ ಪ್ರತಿಭಟನೆ ನಡೆಸಿದೆ. ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲು ಯತ್ನಿಸಿದಾಗ ಪೊಲೀಸರು ಗುರುದ್ವಾರ ಆವರಣಕ್ಕೆ ಶೂ ಧರಿಸಿ ಬಂದಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ (ಎಎಪಿ) ಮತ್ತು ಪಂಜಾಬ್ ಸಿಎಂ ಕಿಡಿಕಾರಿದ್ದಾರೆ. ಸಿಕ್ ಧಾರ್ಮಿಕ ಭಾವನೆಗಳಿಗೆ ಮತ್ತು ಗುರುದ್ವಾರದ ಪವಿತ್ರತೆಗೆ ದೆಹಲಿ ಪೊಲೀಸರು ಅಪಮಾನ ಮಾಡಿದ್ದಾರೆ ಎಂದು ಮಾನ್ ಕಟುವಾಗಿ ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಇದನ್ನೂ ಓದಿ: ತಾಲಿಬಾನ್ ಬೆಳೆಸಿದ ಪಾಕಿಸ್ತಾನಕ್ಕೀಗ ಅದೇ ನುಂಗಲಾರದ ತುತ್ತಾಗಿದ್ದೇಕೆ?

ಆದರೆ ಈ ಆರೋಪಗಳನ್ನು ದೆಹಲಿ ಪೊಲೀಸರು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ದುರುದ್ದೇಶಪೂರ್ವಕವಾಗಿ ಹರಡಲಾಗುತ್ತಿದ್ದು, ಧಾರ್ಮಿಕ ಸೌಹಾರ್ದತೆಯನ್ನು ಹಾಳು ಮಾಡುವ ಯತ್ನ ನಡೆದಿದೆ ಎಂದು ನವದೆಹಲಿ ಡಿಸಿಪಿ ತಿಳಿಸಿದ್ದಾರೆ. ತಪ್ಪಾಗಿ ಬಿಂಬಿಸಿ ವಿಡಿಯೋ ವೈರಲ್ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ‘ಯುವಜನರ ಮೇಲೆ ದಾಳಿ ನಡೆಸಲು BJP-RSS ಪುಂಡರಿಗೆ ದೆಹಲಿ ಪೊಲೀಸರಿಂದಲೇ ಕುಮ್ಮಕ್ಕು’

ದೆಹಲಿಯಲ್ಲಿ ಶನಿವಾರ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರರು, ಯುವಕ-ಯುವತಿಯರ ಮೇಲೆ...

ಖ್ಯಾತ ಯೂಟ್ಯೂಬರ್ ಧೃವ್ ರಾಠಿ ಬಿಡುಗಡೆ!

ಸಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿಯಾಗದಂತೆ ತಡೆಯಲು ಬಂಧಿಸಲಾಗಿದ್ದ ಖ್ಯಾತ ಯೂಟ್ಯೂಬರ್ ಧೃವ್ ರಾಠಿ...

ಗ್ಯಾನು ರಾಜೀನಾಮೆ ಕೊಡುವವರೆಗೂ ಕದಲುವುದಿಲ್ಲ; ಭಾನುವಾರವೂ ಮುಂದುವರೆದ ಸಿಜೆಪಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಬೇಕು, ಎಸ್‌ಐಆರ್...

ಬೀದರ್‌ | ಭಾರತ ಸ್ವಾಭಿಮಾನ ಟ್ರಸ್ಟ್ ಜಿಲ್ಲಾಧ್ಯಕ್ಷರಾಗಿ ಗೋರಖನಾಥ್ ಕುಂಬಾರ್ ಆಯ್ಕೆ

ಭಾರತ ಸ್ವಾಭಿಮಾನ ಟ್ರಸ್ಟ್ (ಪತಂಜಲಿ ಯೋಗ ಸಮಿತಿ) ಬೀದರ್ ಜಿಲ್ಲಾಧ್ಯಕ್ಷರಾಗಿ ಯೋಗ...