1997ರಲ್ಲಿ ಸಹೋದ್ಯೋಗಿಯ ಕೊಲೆ: 29 ವರ್ಷಗಳ ನಂತರ ಆರೋಪಿಯ ಬಂಧನ

Date:

ಪಶ್ಚಿಮ ದೆಹಲಿಯಲ್ಲಿ 1997ರಲ್ಲಿ ಸಹೋದ್ಯೋಗಿಯೊಬ್ಬರನ್ನು ಕೊಲೆ ಮಾಡಿ ಸುಮಾರು 29 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದೆಹಲಿ ಪೊಲೀಸರ ಅಪರಾಧ ವಿಭಾಗ ಬಂಧಿಸಿದೆ.

- Advertisement -

58 ವರ್ಷದ ಷರೀಫ್ ಹಸನ್ ಖಾನ್ ಹತ್ಯೆಗೆ ಸಂಬಂಧಿಸಿದಂತೆ ಮೊಹಮ್ಮದ್ ಫಾಹೀಮ್ ಅಲಿಯಾಸ್ ಅಲಿ ಭಾಯ್ ಎಂಬಾತನನ್ನು 1997ರ ನಂತರ ನ್ಯಾಯಾಲಯವು ಅಪರಾಧಿ ಎಂದು ಘೋಷಿಸಿತ್ತು. ಆದರೆ 29 ವರ್ಷಗಳ ಕಾಲ ಈತ ತಲೆಮರೆಸಿಕೊಂಡಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನೂ ಓದಿ: 12 ವರ್ಷ ತಲೆಮರೆಸಿ ಬಾಲಿವುಡ್‌ ಸಿನಿಮಾಗಳಲ್ಲಿ ನಟಿಸಿದ್ದ ಕೊಲೆ ಅಪರಾಧಿ ಬಂಧನ!

1997ರ ಮಾರ್ಚ್ 14ರಂದು ರಘುಬೀರ್ ನಗರದ ಟಿಸಿ ಕ್ಯಾಂಪ್‌ನ ಕೋಣೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿತ್ತು. ತನಿಖೆಯ ಸಮಯದಲ್ಲಿ, ಮೃತನನ್ನು ಉತ್ತರ ಪ್ರದೇಶದ ಫೈಜಾಬಾದ್ ಜಿಲ್ಲೆಯ (ಈಗ ಅಯೋಧ್ಯೆ) ನಿವಾಸಿ ಷರೀಫ್ ಹಸನ್ ಖಾನ್ ಎಂದು ಗುರುತಿಸಲಾಗಿತ್ತು. ಈತ ರಾಜೌರಿ ಗಾರ್ಡನ್‌ನಲ್ಲಿರುವ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ.

ಫಾಹೀಮ್ ಕೆಲಸ ಹುಡುಕಿಕೊಂಡು ದೆಹಲಿಗೆ ಬಂದಿದ್ದ. ಅಲ್ಲಿ ಖಾನ್‌ಗೂ ಫಾಹೀಮ್‌ಗೂ ಪರಿಚಯವಾಗಿತ್ತು. 1997ರ ಮಾರ್ಚ್ 13ರಂದು ಫಾಹೀಮ್ ಮತ್ತು ಖಾನ್ ನಡುವೆ ಹಣದ ವಿಚಾರದಲ್ಲಿ ಜಗಳವಾಗಿತ್ತು. ಈ ಗಲಾಟೆಯ ಸಮಯದಲ್ಲಿ, ಖಾನ್‌ಗೆ ಕಬ್ಬಿಣದ ರಾಡ್‌ನಿಂದ ಪದೇ ಪದೇ ಹಲ್ಲೆ ಮಾಡಿ ಫಾಹೀಮ್ ಕೊಂದಿದ್ದ. ಬಳಿಕ ಮೃತದೇಹವನ್ನು ಮರದ ಮಂಚದೊಳಗೆ ಬಚ್ಚಿಟ್ಟು ನಗರ ತೊರೆದು ಹೋಗಿದ್ದ.

ಅಪರಾಧ ವಿಭಾಗವು ಇತ್ತೀಚೆಗೆ ಪ್ರಕರಣದ ಮರು ತನಿಖೆ ಕೈಗೆತ್ತಿಕೊಂಡಿದ್ದು, ಇತ್ತೀಚಿನ ಛಾಯಾಚಿತ್ರಗಳು, ವಿಶ್ವಾಸಾರ್ಹ ಗುರುತಿನ ದಾಖಲೆಗಳು ಮತ್ತು ಆಧುನಿಕ ಡಿಜಿಟಲ್ ಪುರಾವೆಗಳನ್ನು ಕ್ರೋಢೀಕರಿಸಿ ಆರೋಪಿಯನ್ನು ಪತ್ತೆಹಚ್ಚಿದ್ದಾರೆ.

ಇನ್ನು ವಿಚಾರಣೆಯ ಸಮಯದಲ್ಲಿ, ಫಾಹೀಮ್ ಹಣಕಾಸಿನ ವಿವಾದದ ಹಿನ್ನೆಲೆಯಲ್ಲಿ ಖಾನ್‌ನನ್ನು ಕೊಂದಿದ್ದಾಗಿ ಒಪ್ಪಿಕೊಂಡಿದ್ದಾನೆ. ಕೊಲೆಯ ನಂತರ ತಾನು ನಾಗಪುರಕ್ಕೆ ಓಡಿಹೋಗಿ 29 ವರ್ಷಗಳ ಕಾಲ ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶ ರಾಜ್ಯಗಳ ಮುಂಬೈ, ಲಕ್ನೋ ಮತ್ತು ನಾಗ್ಪುರ ನಡುವೆ ಓಡಾಡುತ್ತಾ, ಭಾಯ್ ಎಂಬ ಸುಳ್ಳು ಹೆಸರಿನಲ್ಲಿ ತನ್ನ ಗುರುತನ್ನು ಮರೆಮಾಚಿದ್ದಾಗಿ ತಿಳಿಸಿದ್ದಾನೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಕಮಲನಗರ | ಅರ್ಹ ವೈದ್ಯಕೀಯ ಪದವಿ ಇಲ್ಲದೆ ವೈದ್ಯ ವೃತ್ತಿ: ಕ್ಲಿನಿಕ್ ಸೀಜ್

ಕಮಲನಗರ ತಾಲ್ಲೂಕಿನ ಚಾಂದೋರಿ ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಇಲ್ಲದೆ ಅಕ್ರಮವಾಗಿ...