ಬ್ರಿಜ್ ಭೂಷಣ್ ಸಿಂಗ್ ವಿರುದ್ಧ 1,500 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ: ಪೋಕ್ಸೊ ಕೈಬಿಟ್ಟ ದೆಹಲಿ ಪೊಲೀಸ್‌

Date:

ಭಾರತೀಯ ಕುಸ್ತಿ ಫೆಡರೇಶನ್ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್‌ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ದಾಖಲಿಸಿದ್ದ ಲೈಂಗಿಕ ಕಿರುಕುಳ ಆರೋಪದ ದೂರಿನಲ್ಲಿ, ದೆಹಲಿ ಪೊಲೀಸರು 1,500 ಪುಟಗಳ ಆರೋಪಪಟ್ಟಿಯನ್ನು (ಚಾರ್ಜ್‌ಶೀಟ್) ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್‌ಗೆ ಗುರುವಾರ ಸಲ್ಲಿಸಿದ್ದಾರೆ.

- Advertisement -

ಬ್ರಿಜ್ ಭೂಷಣ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ನಲ್ಲಿ, 180ಕ್ಕೂ ಅಧಿಕ ಮಂದಿಯನ್ನು ವಿಚಾರಣೆ ನಡೆಸಿದ್ದ ಪೊಲೀಸರು ತನಿಖೆಯನ್ನು ಪೂರ್ಣಗೊಳಿಸಿದ್ದಾರೆ. ಸಿಂಗ್‌ ವಿರುದ್ಧ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಆಕ್ರೋಶವನ್ನು ಉಂಟುಮಾಡುವ ಉದ್ದೇಶದಿಂದ ಮಹಿಳೆಯ ಮೇಲೆ ದೌರ್ಜನ್ಯ ಅಥವಾ ಕ್ರಿಮಿನಲ್ ಬಲ ಪ್ರಯೋಗ) 354 ಎ (ಲೈಂಗಿಕ ಕಿರುಕುಳ), 354 ಡಿ (ಹಿಂಬಾಲಿಸುವುದು) ಅಪರಾಧಗಳಿಗಾಗಿ ಆರೋಪಪಟ್ಟಿ ಸಲ್ಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಪೋಕ್ಸೊ ಕೈಬಿಟ್ಟ ಪೊಲೀಸ್‌

ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಬ್ರಿಜ್ ಭೂಷಣ್ ವಿರುದ್ಧದ ಪೋಕ್ಸೊ ಪ್ರಕರಣವನ್ನು ದೆಹಲಿ ಪೊಲೀಸರು ರದ್ದುಮಾಡಿದ್ದಾರೆ. ಈ ಕುರಿತು 550 ಪುಟಗಳ ವರದಿಯನ್ನು ಸಲ್ಲಿಸಲಾಗಿದೆ. ದೂರು ದಾಖಲಿಸಿದ್ದ ಅಪ್ರಾಪ್ತೆ, ಆ ಬಳಿಕ ತನ್ನ ಹೇಳಿಕೆಯನ್ನು ವಾಪಸ್‌ ಪಡೆದಿದ್ದಳು. ಇದಲ್ಲದೆ ಬ್ರಿಜ್ ಭೂಷಣ್ ವಿರುದ್ಧ ಸುಳ್ಳು ದೂರು ಸಲ್ಲಿಸಿದ್ದೆ ಎಂದು ಬಾಲಕಿಯ ತಂದೆ ಹೇಳಿಕೆ ನೀಡಿದ್ದರು. ಈ ದೂರಿಗೆ ಪೂರಕವಾಗಿ ಯಾವುದೇ ಪುರಾವೆ ಲಭ್ಯವಾಗಿಲ್ಲ ಎಂದು ಹೇಳಿರುವ ದಿಲ್ಲಿ ಪೊಲೀಸರು, ಬ್ರಿಜ್ ಭೂಷಣ್ ವಿರುದ್ಧದ ಪೋಕ್ಸೋ ಪ್ರಕರಣ ಕಾಯ್ದೆಯಡಿ ದಾಖಲಾಗಿದ್ದ ದೂರಿನ ರದ್ದತಿ ವರದಿಯನ್ನು ಸಲ್ಲಿಸಿದ್ದಾರೆ. ಈ ಕುರಿತ ವಿಚಾರಣೆ ಜುಲೈ 4 ರಂದು ನಡೆಯಲಿದೆ.

ಪ್ರತಿಭಟನಾ ನಿರತ ಕುಸ್ತಿಪಟುಗಳೊಂದಿಗೆ ಮಾತುಕತೆ ನಡೆಸಿದ್ದ ಕೇಂದ್ರ ಕ್ರೀಡಾ ಸಚಿವ ಅನುರಾಗ್‌ ಠಾಕೂರ್‌, ಜೂನ್‌ 15ರ ಒಳಗಾಗಿ ಚಾರ್ಜ್‌ಶೀಟ್ ಸಲ್ಲಿಸುವುದಾಗಿ ಭರವಸೆ ನೀಡಿದ್ದರು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆರೋಪಿಯ IQ ಕಡಿಮೆ ಇದ್ದ ಮಾತ್ರಕ್ಕೆ ವಿಚಾರಣೆಯಿಂದ ಹೊರಗಿಡಲು ಸಾಧ್ಯವಿಲ್ಲ: ಕೇರಳ ಹೈಕೋರ್ಟ್

ಕಡಿಮೆ ಬುದ್ಧಿಮತ್ತೆ (IQ) ಅಥವಾ ಬೌದ್ಧಿಕ ಅಸಮರ್ಥತೆ ಇದೆ ಎಂಬ ಕಾರಣವೊಂದರಿಂದಲೇ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ; NSUIನಿಂದ ವಿನೂತನ ‘ಜೀವಂತ ಶವ’ ಪ್ರತಿಭಟನೆ

ಮತದಾರರ ಹಕ್ಕುಗಳು ಮತ್ತು ಚುನಾವಣಾ ಪ್ರಕ್ರಿಯೆಯ ಮೇಲಿನ ಬೆದರಿಕೆಗಳನ್ನು ಖಂಡಿಸಿ, ಮುಖ್ಯ...

ಗ್ರೇಟ್ ನಿಕೋಬಾರ್ ಯೋಜನೆ: ಕಲ್ಕತ್ತಾ ಹೈಕೋರ್ಟ್ ವಿಚಾರಣೆಗೆ ತಡೆ ನೀಡಲು ಸುಪ್ರೀಂ ನಕಾರ

"ಸಂಸ್ಕೃತಿಯ ರಕ್ಷಣೆಯು ಸಂವಿಧಾನದಿಂದ ರಕ್ಷಿಸಲ್ಪಟ್ಟ ಮೂಲಭೂತ ಹಕ್ಕಾಗಿದೆ" ಎಂದು ಸುಪ್ರೀಂ ಕೋರ್ಟ್...

ನೀವು ಮತ್ತು ನಿಮ್ಮ ಪೊಲೀಸರು ಮಹಿಳೆಯರಿಗೆ ಹೆದರುವುದೇಕೆ: ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ವೇಳೆ ಮಹಿಳಾ ಪತ್ರಕರ್ತರು ಹಾಗೂ ಮಹಿಳಾ...