ಮೆಟಾ ಇಂಡಿಯಾ ವಿರುದ್ಧ ದೆಹಲಿ ಪೊಲೀಸರಿಂದ ಎಫ್‌ಐಆರ್ ದಾಖಲು: NHRC ನಿರ್ದೇಶನದಂತೆ ಕ್ರಮ

Date:

ಸಾಮಾಜಿಕ ಜಾಲತಾಣ ದೈತ್ಯ ಸಂಸ್ಥೆಯಾದ ‘ಮೆಟಾ’ ಒಡೆತನದ ಪ್ಲಾಟ್‌ಫಾರ್ಮ್‌ಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಶೋಷಣೆಗೆ ಸಂಬಂಧಿಸಿದ ಅಪರಾಧಿಕ ವಿಷಯ ವಸ್ತುಗಳು ಲಭ್ಯವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮೆಟಾ ಇಂಡಿಯಾ ಸಂಸ್ಥೆಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (NHRC) ಸ್ಪಷ್ಟ ಮತ್ತು ಕಟ್ಟುನಿಟ್ಟಿನ ನಿರ್ದೇಶನ, ಆದೇಶಗಳ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರ ಸೈಬರ್ ಕ್ರೈಮ್ ವಿಭಾಗವು ಈ ಕಾನೂನು ಕ್ರಮ ಕೈಗೊಂಡಿದೆ.

- Advertisement -

ಮೆಟಾಗೆ ಸೇರಿದ ಇನ್‌ಸ್ಟಾಗ್ರಾಮ್ ಸೇರಿದಂತೆ ಪ್ರಮುಖ ಪ್ಲಾಟ್‌ಫಾರ್ಮ್‌ಗಳಲ್ಲಿ ಹಣ ನೀಡಿ ಪ್ರದರ್ಶಿಸಲಾಗುವ ಜಾಹೀರಾತುಗಳ ಮೂಲಕವೇ ಇಂತಹ ಕಾನೂನುಬಾಹಿರ ಮತ್ತು ಶೋಷಣೆಯ ವಿಷಯ ವಸ್ತುಗಳನ್ನು ಪ್ರಚಾರ ಮಾಡಲಾಗುತ್ತಿತ್ತು. ಬಳಕೆದಾರರನ್ನು ಅಪರಾಧಿಕ ಕಂಟೆಂಟ್ ಹೊಂದಿರುವ ಟೆಲಿಗ್ರಾಮ್ ಲಿಂಕ್‌ಗಳಿಗೆ ಮರುನಿರ್ದೇಶಿಸುವ ಯತ್ನಗಳು ನಡೆದಿರುವುದು ತನಿಖೆಯಲ್ಲಿ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮನುಷ್ಯ ಜಾತಿ ಒಂದೇ; ಮೇಲು–ಕೀಳು ಎಂಬ ಭೇದವೇಕೆ?

ಕೆಲವೊಂದು ಹಳ್ಳಿಗಳೆಂದರೆ ಕೇವಲ ನಾಲ್ಕು ಬೀದಿಗಳ ಸಮೂಹವಲ್ಲ; ಅವು ಸಹಬಾಳ್ವೆ, ಸಹೋದರತೆ ಮತ್ತು ಸೌಹಾರ್ದದ ಜೀವಂತ ನೆಲೆಗಳಾಗಿವೆ. ಇಂದಿಗೂ ಇಂತಹ ಕೆಲವು ಹಳ್ಳಿಗಳಲ್ಲಿ ಹಿಂದೂ–ಮುಸ್ಲಿಂ ಎಂಬ ಧರ್ಮದ ಭೇದವಿಲ್ಲದೆ ಎಲ್ಲರೂ ಒಂದೇ ಊರಿನ...

ʼಸ್ಟಿಂಗ್‌ʼ ಸರ್ಕಸ್‌ | ಬೇಳೆ ಬೇಯಿಸಿಕೊಂಡವರಾರೋ, ಸಂತ್ರಸ್ತರಾರೋ!

ರಾಜ್ಯಾದ್ಯಂತ ಈಗ ಭಾರೀ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ಪ್ರಕರಣವು ಹೊಸ ಪರ-ವಿರೋಧ ಚರ್ಚೆಗಳಿಗೆ ವೇದಿಕೆ ಸೃಷ್ಟಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸನ್ನು ಕುಗ್ಗಿಸಲು ಮತ್ತು ಅವರ ತೇಜೋವಧೆ ಮಾಡಲೆಂದೇ ಈ...

ರಾಹುಲ್ ಗಾಂಧಿಯವರನ್ನು ಕೆಣಕಿದವರೇ, ಅವರು ಸಿಡಿದೇಳಲು ಕಾರಣರಾದರು! ಅದು...

ರಾಹುಲ್ ಗಾಂಧಿಯವರನ್ನು ರಾಜಕೀಯವಾಗಿ ಅಪ್ರಸ್ತುತಗೊಳಿಸಲು ನಿರಂತರವಾಗಿ ಪ್ರಯತ್ನಿಸಿದವರು, ಅವರ ಹೆಸರನ್ನು ದೇಶದ ರಾಜಕೀಯ ಚರ್ಚೆಯಿಂದ ಅಳಿಸಲು ಸಾಧ್ಯವಾಗಲಿಲ್ಲ. ಬದಲಾಗಿ ಅವರ ರಾಜಕೀಯ ಚಟುವಟಿಕೆಗಳು ಮತ್ತು ಅವರು ಎತ್ತುವ ಪ್ರಶ್ನೆಗಳೇ ಸಾರ್ವಜನಿಕ ಚರ್ಚೆಯ ಭಾಗವಾದವು. ರಾಜಕೀಯದಲ್ಲಿ...

ಇದನ್ನೂ ಓದಿ: ಮೋದಿ ಕ್ಷಮೆ ಕೇಳಿದ ಮೆಟಾ; ಬಿಜೆಪಿ ವಿರೋಧಿ ಕಂಟೆಂಟ್‌ಗಳಿಗೆ ಶರವೇಗದ ನಿರ್ಬಂಧ!

ಬಳಕೆದಾರರು ಈ ರೀತಿಯ ಆಕ್ಷೇಪಾರ್ಹ ಜಾಹೀರಾತುಗಳನ್ನು ವರದಿ ಮಾಡಿದರೂ ಮೆಟಾದ ಆಂತರಿಕ ಪರಿಶೀಲನಾ ವ್ಯವಸ್ಥೆಯು ಅವುಗಳನ್ನು ತಕ್ಷಣವೇ ತೆಗೆದುಹಾಕಲು ವಿಫಲವಾಗಿತ್ತು. ಮೆಟಾದ ಸ್ವಯಂಚಾಲಿತ ಆಲ್ಗರಿದಮ್ ಇಂತಹ ಅಪಾಯಕಾರಿ ಕಂಟೆಂಟ್‌ಗಳನ್ನು ಶಿಫಾರಸು ಮಾಡಲು ಅಥವಾ ವ್ಯಾಪಕವಾಗಿ ಹಂಚಿಕೊಳ್ಳಲು ನೆರವಾಗಿದೆಯೇ ಎಂಬ ಬಗ್ಗೆಯೂ ಆಯೋಗ ಪ್ರಶ್ನೆ ಎತ್ತಿದೆ.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (NHRC) ಸದಸ್ಯ ಪ್ರಿಯಾಂಕ್ ಕಾನೂನ್ಗೋ ಅವರು ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, “NHRC ನೀಡಿರುವ ಕಟ್ಟುನಿಟ್ಟಿನ ನಿರ್ದೇಶನದ ಮೇರೆಗೆ ದೆಹಲಿ ಪೊಲೀಸರು ಮೆಟಾ ಇಂಡಿಯಾ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ.

ಮಕ್ಕಳ ಮೇಲಿನ ಲೈಂಗಿಕ ಶೋಷಣೆ ತಡೆ ಕಾಯ್ದೆ (POCSO Act – Section 20) ಪ್ರಕಾರ ಇಂತಹ ಅಪರಾಧಗಳು ಕಂಡುಬಂದಲ್ಲಿ ಅದನ್ನು ತಕ್ಷಣವೇ ಸಂಬಂಧಪಟ್ಟ ಕಾನೂನು ಜಾರಿ ಸಂಸ್ಥೆಗಳಿಗೆ ವರದಿ ಮಾಡುವುದು ಕಡ್ಡಾಯವಾಗಿದೆ. ಈ ನಿಯಮವನ್ನು ಉಲ್ಲಂಘಿಸಿರುವ ಮತ್ತು ಮಾಹಿತಿ ಮರೆಮಾಚಿರುವ ಸಾಧ್ಯತೆಗಳ ಕುರಿತು ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಸಹ ಈ ಪ್ರಕರಣದ ಬಗ್ಗೆ ಮೆಟಾ ಸಂಸ್ಥೆಯಿಂದ ಸ್ಪಷ್ಟೀಕರಣ ಕೋರಿದ್ದು, ಯಾವುದೇ ವಿಳಂಬವಿಲ್ಲದೆ ಅಂತಹ ವಿಷಯ ವಸ್ತುಗಳನ್ನು ಪ್ಲಾಟ್‌ಫಾರ್ಮ್‌ನಿಂದ ತೆಗೆದುಹಾಕುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಇಂತಹ ಪ್ರಕರಣಗಳಲ್ಲಿ ಎಲೆಕ್ಟ್ರಾನಿಕ್ ಸಾಕ್ಷ್ಯಗಳನ್ನು ರಕ್ಷಿಸುವುದು ಮತ್ತು ಸಂತ್ರಸ್ತ ಮಕ್ಕಳ ಗುರುತನ್ನು ಗೌಪ್ಯವಾಗಿಟ್ಟು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂಬ ಸುಪ್ರೀಂ ಕೋರ್ಟ್‌ನ ಮಾರ್ಗದರ್ಶಿ ಸೂತ್ರಗಳನ್ನು NHRC ಈ ಸಂದರ್ಭದಲ್ಲಿ ಉಲ್ಲೇಖಿಸಿದೆ.

ಈ ಗಂಭೀರ ಬೆಳವಣಿಗೆಯ ಬೆನ್ನಲ್ಲೇ ಮೆಟಾ ಸಂಸ್ಥೆಯು ತನ್ನ ಪ್ಲಾಟ್‌ಫಾರ್ಮ್‌ಗಳಲ್ಲಿ ಇಂತಹ ಕಂಟೆಂಟ್ ಪತ್ತೆಹಚ್ಚಲು ಕೃತಕ ಬುದ್ಧಿಮತ್ತೆ (AI) ಆಧಾರಿತ ವ್ಯವಸ್ಥೆಯನ್ನು ಬಲಪಡಿಸುವುದಾಗಿ ತಿಳಿಸಿದೆ. ಅಲ್ಲದೆ, ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯಾಚರಿಸುವ ‘ರಾಷ್ಟ್ರೀಯ ಸೈಬರ್ ಕ್ರೈಮ್ ವರದಿ ಪೋರ್ಟಲ್’ (I4C) ಮತ್ತು ‘ನ್ಯಾಷನಲ್ ಸೆಂಟರ್ ಫಾರ್ ಮಿಸ್ಸಿಂಗ್ ಅಂಡ್ ಎಕ್ಸ್‌ಪ್ಲಾಯ್ಟೆಡ್ ಚಿಕನ್’ (NCMEC) ಜತೆಗೂಡಿ ಇಂತಹ ಅಪರಾಧಗಳ ಕುರಿತು ನೇರವಾಗಿ ಮಾಹಿತಿ ಹಂಚಿಕೊಳ್ಳಲು ಬದ್ಧವಾಗಿರುವುದಾಗಿ ಸಂಸ್ಥೆ ಸ್ಪಷ್ಟನೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ | ಮಧ್ಯಂತರ ಚುನಾವಣಾ ಹಿನ್ನಡೆ; ಟ್ರಂಪ್ ಮತ್ತು ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ನಡುವೆ ಬಿರುಕು?

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ರಿಪಬ್ಲಿಕನ್ ಪಾರ್ಟಿ ಅನುಭವಿಸಿದ ಭಾರಿ ಸೋಲಿನ ಬೆನ್ನಲ್ಲೇ,...

ಅಗ್ನಿವೀರರ ಸೇವಾ ಅವಧಿ 4ರಿಂದ 6 ವರ್ಷಕ್ಕೆ ವಿಸ್ತರಣೆ

ಕೇಂದ್ರ ಸರ್ಕಾರವು ಸೇನಾ ನೇಮಕಾತಿಯ 'ಅಗ್ನಿಪಥ' ಯೋಜನೆಗೆ ಮಹತ್ವದ ತಿದ್ದುಪಡಿ ತಂದಿದ್ದು,...

ಬೆಂಗಳೂರಿನ ಹೋಟೆಲ್‌ಗಳಲ್ಲಿ ಆಹಾರ ಪದಾರ್ಥಗಳ ಬೆಲೆ ಶೇ 10-15ರಷ್ಟು ಏರಿಕೆ: ಗ್ರಾಹಕರಿಗೆ ಬಿಸಿ

ಕಚ್ಚಾ ವಸ್ತುಗಳ ಬೆಲೆ ಏರಿಕೆಯ ಬಿಸಿಯಿಂದಾಗಿ ರಾಜಧಾನಿ ಬೆಂಗಳೂರಿನಾದ್ಯಂತ ಹೋಟೆಲ್ ಮತ್ತು...

ಟೀಂ ಇಂಡಿಯಾ ಹಾಕಿ ಮಾಜಿ ನಾಯಕನ ಬೆಂಗಳೂರಿನ ಮನೆಗೆ ಕನ್ನ: 1980ರ ಒಲಿಂಪಿಕ್ ಚಿನ್ನದ ಪದಕ ಕಳವು

ನಗರದ ನ್ಯೂ ತಿಪ್ಪಸಂದ್ರದಲ್ಲಿರುವ ಭಾರತದ ಮಾಜಿ ಹಾಕಿ ತಾರೆ ಎಂ.ಎಂ. ಸೋಮಯ್ಯ...