ನಮಾಝ್‌ ಮಾಡುತ್ತಿದ್ದವರಿಗೆ ಕಾಲಿನಿಂದ ಒದ್ದ ಪೊಲೀಸ್ ಅಧಿಕಾರಿ ಅಮಾನತು: ಬಿಗಿ ಪೊಲೀಸ್ ಬಂದೋಬಸ್ತ್

Date:

ದೆಹಲಿಯ ಇಂದರ್ಲೋಕ್ ಪ್ರದೇಶದ ಬಳಿಯಲ್ಲಿರುವ ಮಸೀದಿ ಸಮೀಪ ರಸ್ತೆಯಲ್ಲಿ ‌ನಮಾಝ್‌ ಮಾಡುತ್ತಿದ್ದವರಿಗೆ ಕಾಲಿನಿಂದ ಒದ್ದ, ತಪ್ಪಿತಸ್ಥ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅವರನ್ನು ಕೂಡಲೇ ಸೇವೆಯಿಂದ ಅಮಾನತು ಮಾಡಿರುವುದಾಗಿ ದೆಹಲಿಯ ಉತ್ತರ ವಿಭಾಗದ ಡಿಸಿಪಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.

ಘಟನೆಯ ವಿಡಿಯೋ ವೈರಲಾದ ಬೆನ್ನಲ್ಲೇ ಆಕ್ರೋಶಿತ ಗುಂಪು, ಇಂದರ್ಲೋಕ್ ಪ್ರದೇಶದಲ್ಲಿರುವ ಮೆಟ್ರೋ ನಿಲ್ದಾಣದ ಸಮೀಪ ಜನರು ಸೇರಿ ಪ್ರತಿಭಟಿಸಿದರು. ಘಟನೆಯ ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಸ್ಥಳಕ್ಕೆ ಬಂದ ಹಿರಿಯ ಪೊಲೀಸ್ ಅಧಿಕಾರಿಗಳು, ಆಕ್ರೋಶಿತ ಗುಂಪಿನೊಂದಿಗೆ ಮಾತುಕತೆ ನಡೆಸಿ, ಸ್ಥಳದಿಂದ ತೆರಳುವಂತೆ ವಿನಂತಿಸಿದ ಬಳಿಕ ಎಲ್ಲರೂ ಸ್ಥಳದಿಂದ ತೆರಳಿದ್ದಾರೆ. ಪರಿಸ್ಥಿತಿ ಶಾಂತಗೊಂಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿಯ ಉತ್ತರ ವಿಭಾಗದ ಡಿಸಿಪಿ ಮನೋಜ್ ಕುಮಾರ್ ಮೀನಾ, “ಘಟನೆಯ ವಿಡಿಯೋ ದೊರಕಿದೆ. ಈ ಮಾಹಿತಿಯ ಆಧಾರದ ಮೇಲೆ ತಪ್ಪಿತಸ್ಥ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮನೋಜ್ ಕುಮಾರ್ ತೋಮರ್ ಅವರನ್ನು ಕೂಡಲೇ ಅಮಾನತು ಮಾಡಿದ್ದೇವೆ. ಈ ಕುರಿತು ತನಿಖೆ ಆರಂಭಿಸಲಾಗಿದ್ದು,ಶಿಸ್ತು ಕ್ರಮಕ್ಕೂ ಸೂಚಿಸಲಾಗಿದೆ” ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಏನಿದು ಘಟನೆ?
ಶುಕ್ರವಾರದ ಪ್ರಾರ್ಥನೆಯ ಹಿನ್ನೆಲೆಯಲ್ಲಿ ಇಂದು ದೆಹಲಿಯ ಮಸೀದಿಯೊಂದರ ಬಳಿಯಲ್ಲಿರುವ ರಸ್ತೆಯಲ್ಲಿ ನಮಾಝ್ ಮಾಡುತ್ತಿದ್ದವರಿಗೆ ಪೊಲೀಸ್ ಅಧಿಕಾರಿಯೋರ್ವ ಬೂಟು ಕಾಲಿನಿಂದ ಒದ್ದ ಘಟನೆ ನಡೆದಿದೆ.

ಘಟನೆಯ ದೃಶ್ಯವನ್ನು ಸ್ಥಳದಲ್ಲಿದ್ದವರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

ಪೊಲೀಸ್ ಅಧಿಕಾರಿ ಸ್ಥಳಕ್ಕೆ ಬಂದಾಗ ಜನರ ಗುಂಪು ರಸ್ತೆಯಲ್ಲಿ ಬಟ್ಟೆ ಹಾಕಿ, ನಮಾಝ್ ಮಾಡುತ್ತಿದ್ದರು. ಈ ವೇಳೆ ಅವರನ್ನು ಎದ್ದೇಳಿಸಲು ಯತ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ದೆಹಲಿ | ರಸ್ತೆಯಲ್ಲಿ ನಮಾಝ್ ಮಾಡುತ್ತಿದ್ದವರಿಗೆ ಬೂಟು ಕಾಲಿನಿಂದ ಒದ್ದ ಪೊಲೀಸ್; ವಿಡಿಯೋ ವೈರಲ್

ಈ ವೇಳೆ ಪೊಲೀಸ್ ಅಧಿಕಾರಿ ಬೂಟು ಕಾಲಿನಿಂದ ಒದ್ದಿದ್ದಾರೆ. ಇದಾದ ಕೂಡಲೇ ಅಲ್ಲಿದ್ದ ಮಂದಿ ಆಕ್ಷೇಪ ಎತ್ತಿದ್ದು, ಕಾನ್‌ಸ್ಟೆಬಲ್ ಮತ್ತು ಗುಂಪಿನ ನಡುವೆ ತೀವ್ರ ಮಾತಿನ ಚಕಮಕಿ ಕೂಡ ನಡೆದಿದೆ.

ಘಟನೆಗೆ ಸೋಷಿಯಲ್ ಮೀಡಿಯಾಗಳಲ್ಲಿ ವ್ಯಾಪಕ ಆಕ್ರೋಶ

ಈ ಘಟನೆಯ ಬಗ್ಗೆ ವಿಡಿಯೋ ಹಂಚಿಕೊಂಡು ಟ್ವೀಟ್ ಮಾಡಿರುವ ಹಿರಿಯ ಪತ್ರಕರ್ತ ರವೀಶ್ ಕುಮಾರ್, “ಇದು ಸಂಪೂರ್ಣ ನಾಚಿಕೆಗೇಡಿನ ಸಂಗತಿ. ದ್ವೇಷದ ರಾಜಕಾರಣದ ವಿಷ ಪೊಲೀಸರನ್ನೂ ತಲುಪಿದೆ. ಕೇವಲ ಕ್ರಮವಷ್ಟೇ ಸಾಲದು. ಪೊಲೀಸರೊಳಗಿರುವ ಯಾವುದೇ ರೀತಿಯ ಕೋಮುವಾದವನ್ನು ಹೋಗಲಾಡಿಸುವ ಪ್ರಯತ್ನಗಳಾಗಬೇಕು. ನಾವು ಎಲ್ಲಿಗೆ ಬಂದು ಮುಟ್ಟಿದ್ದೇವೆ. ಈ ದ್ವೇಷಕ್ಕೆ ರಾಜ್ಯ ಮತ್ತು ಮಾಧ್ಯಮಗಳ ರಕ್ಷಣೆ ಸಿಕ್ಕಿದೆ. ಆದ್ದರಿಂದ ಈ ದ್ವೇಷದ ವಿರುದ್ಧ ಹೋರಾಡುವುದು ಅಸಾಧ್ಯವಾಗುತ್ತಿದೆ. ದೆಹಲಿ ಪೊಲೀಸರು ಈ ಹಿಂದೆ ಈ ರೀತಿಯಲ್ಲಿ ಇರಲಿಲ್ಲ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಮರ್ ಖಲೀದ್ ಜಾಮೀನು ಅರ್ಜಿ: ವಿಚಾರಣೆಯಿಂದ ಹಿಂದೆ ಸರಿದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ

ದೆಹಲಿ ಗಲಭೆಗಳ ಪಿತೂರಿ ಪ್ರಕರಣಗಳ ಆರೋಪಿಯಾಗಿರುವ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್‌...

ಕನ್ನಡಿಗರ ಕ್ಷಮೆ ಕೋರಿದ ಫೋನ್‌ಪೇ ಸಿಇಒ ಸಮೀರ್ ನಿಗಮ್

ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ರೂಪಿಸಿದ್ದ...

ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ; ಸರ್ಕಾರವನ್ನು ಇಕ್ಕಟ್ಟಿಗೆ ಸಲುಕಿಸಲು ವಿಪಕ್ಷಗಳು ಸಜ್ಜು

ಇಂದಿನಿಂದ ಆಗಸ್ಟ್‌ 12ರವರೆಗೆ ಸಂಸತ್ತಿನ ಬಜೆಟ್‌ ಅಧಿವೇಶನ ನಡೆಯಲಿದೆ. ನೀಟ್‌–ಯುಜಿ ಸೇರಿದಂತೆ...