ದೆಹಲಿ ಗಲಭೆ | ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿ 9 ಮಂದಿಯ ಜಾಮೀನು ಅರ್ಜಿ ವಜಾ

Date:

Advertisements

ದೆಹಲಿ ಗಲಭೆ ಪ್ರಕರಣದಲ್ಲಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಖಾಲಿದ್ ಸೈಫಿ, ಗುಲ್ಫಿಶಾ ಫಾತಿಮಾ, ಮೀರನ್ ಹೈದರ್ ಹಾಗೂ ಇತರ ನಾಲ್ವರಿಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.

ನ್ಯಾಯಮೂರ್ತಿ ನವೀನ್ ಚಾಪ್ಲಾ ಮತ್ತು ನ್ಯಾಯಮೂರ್ತಿ ಶಾಲಿಂದರ್ ಕೌರ್ ಅವರ ವಿಭಾಗೀಯ ಪೀಠವು ಯುಎಪಿಎ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಎಲ್ಲ ಮೇಲ್ಮನವಿಗಳನ್ನು ವಜಾಗೊಳಿಸಿ ಆದೇಶಿಸಿದೆ.

ಜಾಮೀನು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಉಮ‌ರ್ ಖಾಲಿದ್‌, ಶಾರ್ಜೀಲ್‌ ಇಮಾಮ್, ಅಥ‌ರ್ ಖಾನ್, ಖಾಲಿದ್ ಸೈಫಿ, ಮುಹಮ್ಮದ್ ಸಲೀಂ ಖಾನ್, ಶಿಫಾ ಉರ್ ರೆಹಮಾನ್, ಮೀರನ್‌ ಹೈದರ್, ಗುಲ್ಪಿಶಾ ಫಾತಿಮಾ ಮತ್ತು ಶಾದಾಬ್ ಅಹ್ಮದ್ ಅವರು ದಿಲ್ಲಿ ಹೈಕೋರ್ಟ್ ಮೊರೆ ಹೋಗಿದ್ದರು.

2020ರ ಫೆಬ್ರವರಿ 24ರಂದು ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಸಮಯದಲ್ಲಿ, ಚಾಂದ್ ಬಾಗ್‌ನ ವಜೀರಾಬಾದ್ ರಸ್ತೆಯಲ್ಲಿರುವ ಹೀರೋ ಶೋರೂಂಗೆ ಬೆಂಕಿ ಹಚ್ಚಲಾಗಿದೆ ಎಂದು ಆರೋಪಿಸಲಾಗಿತ್ತು. ಅಲ್ಲದೆ, ಅದೇ ಶೋರೂಂನಲ್ಲಿ ಸೇವೆಗಾಗಿ ಇರಿಸಲಾಗಿದ್ದ ಆಲ್ಟೋ ಕಾರನ್ನು ನಾಶಪಡಿಸಲಾಗಿದೆ ಮತ್ತು ಶೋರೂಂನ ಬೀಗಗಳನ್ನು ಒಡೆದು ಅನೇಕ ವಸ್ತುಗಳನ್ನು ಹಾನಿಗೊಳಿಸಲಾಗಿದೆ ಎಂದು ಎರಡು ಪ್ರತ್ಯೇಕ ದೂರುಗಳು ದಾಖಲಾಗಿದ್ದವು.

2021ರ ಸೆಪ್ಟೆಂಬರ್‌ನಲ್ಲಿ, ಈ ಮೂವರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಹೊರಿಸಲಾಗಿತ್ತು. ಆದರೆ, ಆರೋಪಿಗಳು ತಾವು ಯಾವುದೇ ಅಪರಾಧ ಮಾಡಿಲ್ಲ ಎಂದು ವಾದಿಸಿದ್ದರು. ಈ ಆರೋಪಗಳನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ಪರವಾಗಿ 21 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನನ್ನ ಗಂಡನನ್ನು ಭೇಟಿಯಾಗುವ ಅರ್ಹತೆ ನನಗಿಲ್ಲವೇ?’: ರಾಷ್ಟ್ರಪತಿ, ಮೋದಿಗೆ ಪತ್ರ ಬರೆದ ವಾಂಗ್ಚುಕ್ ಪತ್ನಿ

ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಇಟ್ಟುಕೊಂಡು...

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ದೆಹಲಿ ಶಾಲೆಗಳಲ್ಲಿ RSS ಬೋಧನೆ: ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ...

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

Download Eedina App Android / iOS

X