ದೆಹಲಿ ಗಲಭೆ ಪ್ರಕರಣ | ನನ್ನನ್ನು ಆರೋಪಿ ಎನ್ನಲು ಆಧಾರ ಏನಿದೆ: ಉಮರ್ ಖಾಲಿದ್ ಪ್ರಶ್ನೆ

Date:

2020ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪಿತೂರಿ ಆರೋಪದ ಮೇಲೆ ನನ್ನ ವಿರುದ್ಧ ದೆಹಲಿ ಪೊಲೀಸರು ಯುಎಪಿಎ ಪ್ರಕರಣ ದಾಖಲಿಸಿದ್ದಾರೆ. ಆದರೆ, ಅವರು ಯಾವ ಆಧಾರದಲ್ಲಿ ನನ್ನನ್ನು ಆರೋಪಿಯನ್ನಾಗಿ ಮಾಡಿದ್ದಾರೆ ಎಂದು ದೆಹಲಿ ಹೈಕೋರ್ಟ್‌ನಲ್ಲಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಪ್ರಶ್ನಿಸಿದ್ದಾರೆ.

- Advertisement -

ದೆಹಲಿ ಹಿಂಸಾಚಾರ ಪ್ರಕರಣದಲ್ಲಿ ಖಾಲಿದ್‌ರನ್ನು ಬಂಧಿಸಲಾಗಿದ್ದು, ನಾಲ್ಕು ವರ್ಷಗಳಿಂದ ಜೈಲಿನಲ್ಲಿದ್ದಾರೆ. ಅವರು ಈ ಹಿಂದೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ಜಾಮೀನು ನಿರಾಕರಿಸಲಾಗಿತ್ತು. ಇತ್ತೀಚೆಗೆ ಅವರು ಮತ್ತೊಮ್ಮೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಶನಿವಾರ ವಿಚಾರಣೆ ನಡೆಸಿದೆ. ಹೈಕೋರ್ಟ್‌ ನ್ಯಾಯಮೂರ್ತಿಗಳಾದ ನವೀನ್ ಚಾವ್ಲಾ ಮತ್ತು ಶಾಲಿಂದರ್ ಕೌರ್ ಅವದಿದ್ದ ಪೀಠದ ಎದುರು ಖಾಲಿದ್ ಪರ ವಕೀಲ ತ್ರಿದೀಪ್ ಪೈಸ್ ವಾದ ಮಂಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“2020ರ ದೆಹಲಿ ಗಲಭೆಗೆ ಸಂಬಂಧಿಸಿದ ಹಿಂಸಾಚಾರ ಅಥವಾ ನಿಧಿಸಂಗ್ರಹ ಚಟುವಟಿಕೆಗಳಲ್ಲಿ ಉಮರ್ ಖಾಲಿದ್ ಭಾಗಿಯಾಗಿದ್ದಾರೆ ಎಂಬುದಕ್ಕೆ ಯಾವುದೇ ನೇರವಾದ ಸಾಕ್ಷ್ಯಗಳಿಲ್ಲ. ಆದರೂ, ವಿಚಾರಣಾಧೀನ ಖೈದಿಯಾಗಿ ಸುದೀರ್ಘ ಕಾಲ ಸೆರೆವಾಸ ಅನುಭವಿಸುತ್ತಿದ್ದಾರೆ. ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು” ಎಂದು ತ್ರಿದೀಪ್ ವಾದಿಸಿದ್ದಾರೆ.

“ಇದೇ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ಈಗಾಗಲೇ ಜಾಮೀನು ನೀಡಲಾಗಿದೆ. ಖಾಲಿದ್ ಕೂಡ ಸಮಾನತೆಯನ್ನು ಬಯಸಿದ್ದಾರೆ” ಎಂದು ತ್ರಿದೀಪ್ ಗಮನ ಸೆಳೆದಿದ್ದಾರೆ.

ಆದರೆ, ಪ್ರತಿವಾದ ಮಂಡಿಸಿದ ದೆಹಲಿ ಪೊಲೀಸರು, ಪ್ರತಿಕ್ರಿಯೆ ನೀಡಲು ಹೆಚ್ಚುವರಿ ಸಮಯವನ್ನು ಕೋರಿದ್ದು, ಪ್ರಕರಣದ ವಿಚಾರಣೆಯನ್ನು ಡಿಸೆಂಬರ್ 12ಕ್ಕೆ ಹೈಕೋರ್ಟ್‌ ಮುಂದೂಡಿದೆ.

ಈ ವರದಿ ಓದಿದ್ದೀರಾ?: ವಿಚಾರಣೆಯೂ ಇಲ್ಲ – ಜಾಮೀನೂ ಇಲ್ಲ: ನಾಲ್ಕು ವರ್ಷಗಳಿಂದ ಜೈಲಿನಲ್ಲಿದ್ದಾರೆ ಉಮರ್ ಖಾಲಿದ್

ಸಿಎಎ, ಎನ್‌ಆರ್‌ಸಿ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯ ವೇಳೆ, 2020ರಲ್ಲಿ ದೆಹಲಿಯಲ್ಲಿ ಹಿಂಸಾಚಾರ ನಡೆದಿತ್ತು. ಹಿಂಸಾಚಾರದಲ್ಲಿ 53 ಜನರು ಸಾವನ್ನಪ್ಪಿ, 700ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಆ ಗಲಭೆಯಲ್ಲಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತು ಇತರರ ಪಿತೂರಿ ಇದೆ ಎಂದು ಆರೋಪಿಸಿ ಐವರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (ಯುಎಪಿಎ) ಮತ್ತು ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಖಾಲಿದ್‌ ಅವರನ್ನು 2020ರ ಸೆಪ್ಟಂಬರ್‌ನಲ್ಲಿ ಬಂಧಿಸಲಾಗಿತ್ತು. 2022ರ ಅಕ್ಟೋಬರ್‌ನಲ್ಲಿ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಆದಾದ ಬಳಿಕ, ಖಾಲಿದ್ ಎರಡನೇ ಬಾರಿಗೆ ಪ್ರಕರಣದಲ್ಲಿ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...