ದೆಹಲಿ | ಭಾರೀ ಮಳೆಯಿಂದಾಗಿ ರಸ್ತೆಗಳು ಜಲಾವೃತ; ಸಂಚಾರ ಅಸ್ತವ್ಯಸ್ತ

Date:

ತಾಪಮಾನ ಹೆಚ್ಚಳ ಮತ್ತು ಬಿಸಿಗಾಳಿಯಿಂದ ತತ್ತರಿಸಿದ್ದ ರಾಷ್ಟ್ರ ರಾಜಧಾನಿ ದೆಹಲಿಯ ನಾನಾ ಭಾಗಗಳಲ್ಲಿ ಶುಕ್ರವಾರ ಭಾರೀ ಮಳೆಯಾಗುತ್ತಿದೆ. ಮಳೆಗೆ ನಗರದ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.

- Advertisement -

“ಅಧಿಕ ತಾಪಮಾನದ ಪರಿಣಾಮ ಈ ಮಳೆಯಾಗಿದೆ. ನಗರ ವಾಸಿಗಳು ಮನೆಯೊಳಗೆ ಇರಬೇಕು. ಅನಗತ್ಯವಾಗಿ ಹೊರಗೆ ಪ್ರಯಾಣ ಮಾಡಬಾರದು. ಮಳೆಯಾಗುವ ಸಮಯದಲ್ಲಿ ಮರಗಳ ಕೆಳಗೆ ನಿಲ್ಲಬಾರದು” ಎಂದು ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ದೆಹಲಿ ಪಕ್ಕದ ನೋಯ್ಡಾದಲ್ಲೂ ಧಾರಾಕಾರ ಮಳೆಯಾಗುತ್ತಿದೆ. ಪ್ರಸ್ತುತ ದೆಹಲಿ ಸೇರಿದಂತೆ ಎನ್‌ಸಿಆರ್‌ನ ಅನೇಕ ಪ್ರದೇಶಗಳಲ್ಲಿ ಮೋಡ ಆವರಿಸಿದೆ.

ಶುಕ್ರವಾರ ಬೆಳ್ಳಂಬೆಳಿಗ್ಗೆ ಸುರಿದ ಭಾರೀ ಮಳೆಗೆ ರಸ್ತೆಗಳು ಹಾಗೂ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದೆ. ದೆಹಲಿಯ ರಸ್ತೆಗಳಲ್ಲಿ ನೀರು ನಿಂತಿದ್ದು, ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ನೀರು ನಿಂತ ಕಾರಣ ರಸ್ತೆಯಲ್ಲಿಯೇ ವಾಹನಗಳು ಸಿಕ್ಕಿಹಾಕಿಕೊಂಡ ಘಟನೆಗಳು ನಡೆದಿವೆ. ಇದರಿಂದ ಪ್ರಯಾಣಿಕರು ಸಂಚಾರ ಮಾರ್ಗ ಬದಲಾವಣೆ ಮಾಡಲು ದೆಹಲಿ ಟ್ರಾಫಿಕ್ ಪೊಲೀಸರು ಸೂಚನೆ ನೀಡಿದ್ದಾರೆ.

ನಗರದ ಹಲವಾರು ಪ್ರದೇಶಗಳು ನೀರಿನಿಂದ ಮುಳುಗಿವೆ. ದೀರ್ಘ ಟ್ರಾಫಿಕ್ ಜಾಮ್‌ಗೆ ಕಾರಣವಾಗಿದೆ. ಪ್ರಯಾಣಿಕರಿಗೆ, ವಿಶೇಷವಾಗಿ ಕಚೇರಿಗೆ ತೆರಳುವವರ ಮೇಲೆ ಪರಿಣಾಮ ಬೀರಿದೆ. ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಮೊಣಕಾಲು ಉದ್ದ ನೀರು ನಿಂತಿದೆ. ಪ್ರಯಾಣಿಕರು ಈ ನೀರಿನಲ್ಲಿಯೇ ತಮ್ಮ ಮಕ್ಕಳನ್ನು ಹೊತ್ತು ನಡೆಯುವ ದೃಶ್ಯ ಕಂಡುಬಂದಿದೆ. ಕೆಲವೆಡೆ ಮೆಟ್ರೊ ನಿಲ್ದಾಣಗಳಲ್ಲಿ ನೀರು ತುಂಬಿಕೊಂಡಿದ್ದು, ಜನರಿಗೆ ತೊಂದರೆಯಾಗಿದೆ.

ದೆಹಲಿ

ಪೊಲೀಸರ ಪ್ರಕಾರ, ಮಳೆ ನೀರು ಪೋಲಾಗದೇ, ರಸ್ತೆಗಳಲ್ಲಿ ನೀರು ನಿಲ್ಲುವುದರಿಂದ ಅನುವ್ರತ್ ಮಾರ್ಗದಲ್ಲಿ 100 ಅಡಿ ರೆಡ್ ಲೈಟ್ ಮತ್ತು ಲಾಡೋ ಸರಾಯ್ ರೆಡ್ ಲೈಟ್‌ನ ಎರಡು ಮಾರ್ಗದಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ರಿಂಗ್ ರೋಡ್‌ನಲ್ಲಿ ಧೌಲಾ ಕುವಾನ್ ಫ್ಲೈಓವರ್ ಅಡಿಯಲ್ಲಿನ ರಸ್ತೆ ಜಲಾವೃತವಾಗಿರುವ ಕಾರಣ ನರೈನಾದಿಂದ ಮೋತಿ ಬಾಗ್ ಕಡೆಗೆ ಸಂಚಾರ ನಿಧಾನವಾಗಿದೆ.

ಆಜಾದ್ ಮಾರ್ಕೆಟ್ ಅಂಡರ್‌ಪಾಸ್‌ನಲ್ಲಿ ನೀರು ನಿಂತಿರುವುದರಿಂದ ವೀರ ಬಂದಾ ಬೈರಾಗಿ ಮಾರ್ಗದ ಎರಡೂ ಮಾರ್ಗಗಳಲ್ಲಿ ಸಂಚಾರಕ್ಕೆ ತೊಂದರೆಯಾಗಿದೆ. ಅರಬಿಂದೋ ಮಾರ್ಗದಲ್ಲಿ ಎಐಐಎಮ್‌ಎಸ್‌ ಫ್ಲೈಓವರ್ ಅಡಿಯಲ್ಲಿ ನೀರು ಜಲಾವೃತವಾಗಿರುವ ಕಾರಣ ಐಎನ್‌ಎಯಿಂದ ಎಐಐಎಮ್‌ಎಸ್ ಕಡೆಗೆ ಮತ್ತು ಎರಡೂ ದಿಕ್ಕುಗಳಲ್ಲಿ ಸಂಚಾರ ಸಮಸ್ಯೆಯಾಗಿದೆ.

ವೈ-ಪಾಯಿಂಟ್ ಸಲೀಮ್‌ಗಢ್ ಮತ್ತು ನಿಗಮಬೋಧ್ ಘಾಟ್ ಬಳಿ ನೀರು ಜಲಾವೃತವಾಗಿರುವ ಕಾರಣ ಔಟರ್ ರಿಂಗ್ ರಸ್ತೆಯಲ್ಲಿ ಶಾಂತಿವನದಿಂದ ಐಎಸ್‌ಬಿಟಿ ಕಡೆಗೆ ಎರಡೂ ದಿಕ್ಕುಗಳಲ್ಲಿ ಸಂಚಾರ ನಿಧಾನವಾಗಿದೆ. ತಿಲಕ್ ಬ್ರಿಡ್ಜ್ ಡಬ್ಲ್ಯೂ-ಪಾಯಿಂಟ್ ಕೆಳಗೆ ನೀರು ನಿಂತಿರುವುದರಿಂದ ಎರಡೂ ಮಾರ್ಗಗಳಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ರೋಹ್ಟಕ್ ರಸ್ತೆಯಲ್ಲಿ ರಾಜಧಾನಿ ಪಾರ್ಕ್‌ನಿಂದ ಮುಂಡ್ಕಾ ಕಡೆಗೆ ತೆರಳುವ ಮಾರ್ಗಗಳಲ್ಲಿ ಜಲಾವೃತದಿಂದಾಗಿ ಸಂಚಾರಕ್ಕೆ ತೊಂದರೆಯಾಗಿದೆ.

ಮರವೊಂದು ಉರುಳಿದ ಪರಿಣಾಮ ಆಶ್ರಮದಿಂದ ಬಾದರ್‌ಪುರ ಕಡೆಗೆ ಸಾಗುವ ಮಾರ್ಗದಲ್ಲಿ ಸಂಚಾರಕ್ಕೆ ಅಡ್ಡಿಯಾಗಿದೆ. ಕಾಳಿಂದಿ ಕುಂಜ್‌ನಿಂದ ಕ್ರೌನ್ ಪ್ಲಾಜಾ ಕಡೆಗೆ ಮತ್ತು ಓಖ್ಲಾ ಅಂಡರ್‌ಪಾಸ್‌ನಲ್ಲಿ ಜಲಾವೃತವಾಗಿರುವ ಕಾರಣ ರಸ್ತೆ ಸಂಖ್ಯೆ.13 ರಲ್ಲಿ ಸಂಚಾರಕ್ಕೆ ತೊಂದರೆಯಾಗಿದೆ.

ಮಳೆ ಅಬ್ಬರಕ್ಕೆ ದೆಹಲಿಯ ಐಜಿಐ ವಿಮಾನ ನಿಲ್ದಾಣದ ಟರ್ಮಿನಲ್‌ 1ರಲ್ಲಿ ಮೇಲ್ಚಾವಣಿಯ ಒಂದು ಭಾಗ ಕುಸಿದು ಒಬ್ಬ ಮೃತಪಟ್ಟು, ಆರು ಮಂದಿ ಗಾಯಗೊಂಡಿದ್ದಾರೆ. ಇಡೀರಾತ್ರಿ ಸುರಿದ ಭಾರೀ ಮಳೆಯ ಪರಿಣಾಮ ಮುಂಜಾನೆ 5.30ರ ಸುಮಾರಿಗೆ ಟರ್ಮಿನಲ್‌ 1ರ ಬದಿಯಲ್ಲಿ ನಿಲ್ಲಿಸಲಾದ ಟ್ಯಾಕ್ಸಿಗಳ ಮೇಲೆ ಛಾವಣಿ ಕುಸಿದುಬಿದ್ದಿದೆ. ಕಾರು, ಟ್ಯಾಕ್ಸಿಗಳು ಜಖಂ ಆಗಿವೆ.

ಟರ್ಮಿನಲ್ 1 ನಿರ್ಗಮನದ ಕಡೆಗೆ ಹೋಗುವ ಎಲ್ಲ ಪ್ರಯಾಣಿಕರು ಟರ್ಮಿನಲ್ 1 ರ ಆಗಮನ ವಿಭಾಗವನ್ನು ಬಳಸಲು ಸೂಚಿಸಲಾಗಿದೆ. ಹೆಚ್ಚುವರಿಯಾಗಿ, ಮೆಹ್ರಾಮ್ ನಗರ ಅಂಡರ್‌ಪಾಸ್‌ನಲ್ಲಿ ಟರ್ಮಿನಲ್ 3 ಕಡೆಗೆ ನೀರು ನಿಲ್ಲುತ್ತದೆ.

ಅಕ್ಷರಧಾಮದಿಂದ ಗಾಜಿಯಾಬಾದ್ ಕಡೆಗೆ ಸಾಗುವ ಎರಡೂ ಮಾರ್ಗಗಳಲ್ಲಿ ಮತ್ತು ಪ್ರತಿಕ್ರಮದಲ್ಲಿ ಮುರ್ಗಾ ಮಂಡಿ, ಘಾಜಿಪುರ ಗಡಿಯ ವೃತ್ತದಲ್ಲಿ ಜಲಾವೃತಗೊಂಡಿರುವುದರಿಂದ ಸಂಚಾರಕ್ಕೆ ತೊಂದರೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಮಳೆ ಅಬ್ಬರ | ಹಲವು ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’; ಎರಡೇ ದಿನದಲ್ಲಿ 7 ಸಾವು

ಜ್ವಾಲಾ ಹೆರಿ ಮಾರುಕಟ್ಟೆಯ ಎದುರಿನ ಮರವೊಂದು ಉರುಳಿ ಬಿದ್ದ ಪರಿಣಾಮ ಜ್ವಾಲಾ ಹೆರಿ ಮಾರ್ಕೆಟ್‌ನಿಂದ ಮಾದಿಪುರ ಕಡೆಗೆ ಸಾಗುವ ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಮಿಂಟೋ ರಸ್ತೆಯಲ್ಲಿ ಕಮಲಾ ಮಾರ್ಕೆಟ್‌ನಿಂದ ಕನ್ನಾಟ್ ಪ್ಲೇಸ್ ಕಡೆಗೆ ಮತ್ತು ಮಿಂಟೋ ಸೇತುವೆಯ ಅಂಡರ್‌ಪಾಸ್‌ನಲ್ಲಿ ನೀರು ಜಲಾವೃತವಾಗಿರುವ ಕಾರಣ ಸಂಚಾರ ಸಮಸ್ಯೆಯಾಗಿದೆ.

ಹೊರ ವರ್ತುಲ ರಸ್ತೆಯ ಭೇರಾ ಎನ್‌ಕ್ಲೇವ್ ವೃತ್ತದಿಂದ ಪೀರಗಢಿ ಕಡೆಗೆ ಸಾಗುವ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ತಿಲಕ್ ಬ್ರಿಡ್ಜ್ ಅಂಡರ್‌ಪಾಸ್‌ನಲ್ಲಿ (ಡಬ್ಲ್ಯೂ-ಪಾಯಿಂಟ್) ವಾಹನಗಳು ಸ್ಥಗಿತಗೊಂಡಿರುವುದರಿಂದ ಐಪಿ ಮಾರ್ಗ, ಬಿಎಸ್‌ಜೆಡ್ ಮಾರ್ಗ ಮತ್ತು ವಿಕಾಶ್ ಮಾರ್ಗದಲ್ಲಿ ಸಂಚಾರಕ್ಕೆ ತೊಂದರೆಯಾಗಿದೆ.

ದೆಹಲಿಯಲ್ಲಿ ಜುಲೈ 3ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಜೂನ್ 29ರಂದು ಭಾರೀ ಮಳೆಯಾಗಲಿದ್ದು ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ವಾರಾಂತ್ಯದಲ್ಲಿ ಅಧಿಕ ಮಳೆಯಿಂದಾಗಿ ತಾಪಮಾನ ಇನ್ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...