ದೆಹಲಿ | ʼವಿಂಟರ್ ಆಕ್ಷನ್ ಪ್ಲಾನ್ʼ ಮೊದಲ ದಿನವೇ 68.4 ಲಕ್ಷ ರೂ. ದಂಡ ವಸೂಲು!

Date:

ದೆಹಲಿಯಲ್ಲಿ ವಾಯು ಮಾಲಿನ್ಯ ತಾಂಡವವಾಡುತ್ತಿರುವ ಹಿನ್ನೆಲೆಯಲ್ಲಿ ಜಾರಿಗೆ ತಂದಿರುವ ‘ವಿಂಟರ್ ಆಕ್ಷನ್ ಪ್ಲಾನ್’ ಮೊದಲ ದಿನವೇ ತೀವ್ರ ಸ್ವರೂಪ ಪಡೆದುಕೊಂಡಿದೆ. ನಗರಕ್ಕೆ ಸಾರಿಗೆ ಇಲಾಖೆ ಮತ್ತು ಸಂಚಾರ ಪೊಲೀಸರು ಬಿಗಿ ಭದ್ರತೆಯೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿದ್ದು, ನಿಯಮ ಮೀರಿದ ವಾಹನ ಸವಾರರು ಹಾಗೂ ನಿರ್ಮಾಣ ಸಂಸ್ಥೆಗಳಿಂದ ಒಟ್ಟು 68.4 ಲಕ್ಷ ರೂಪಾಯಿ ದಂಡ ಮತ್ತು ಪರಿಸರ ಪರಿಹಾರ ಶುಲ್ಕ ವಸೂಲಿ ಮಾಡಿದ್ದಾರೆ. ದೆಹಲಿ ಗಡಿಭಾಗಗಳಲ್ಲಿ ಸುಮಾರು 15,000 ವಾಹನಗಳನ್ನು ತಪಾಸಣೆ ನಡೆಸಲಾಗಿದ್ದು, ಬಿಎಸ್-6 (BS-VI) ಮಾನದಂಡ ಪೂರೈಸದ 1,539 ಹೊರರಾಜ್ಯದ ವಾಹನಗಳನ್ನು ಗಡಿಯಿಂದಲೇ ವಾಪಸ್ ಕಳುಹಿಸಲಾಗಿದೆ. ಇದರಲ್ಲಿ ಲಘು ಮೋಟಾರು ವಾಹನಗಳು, ಸರಕು ಸಾಗಣೆ ಲಾರಿಗಳು ಹಾಗೂ ಬಸ್‌ಗಳು ಸೇರಿವೆ.

- Advertisement -

ತಪಾಸಣೆ ವೇಳೆ ಸಿಂಧುತ್ವ ಇಲ್ಲದ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (PUCC) ಇಟ್ಟುಕೊಂಡು ಸಂಚರಿಸುತ್ತಿದ್ದ ವಾಹನ ಸವಾರರಿಗೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ನಿಯಮ ಉಲ್ಲಂಘಿಸಿದ 566 ವಾಹನಗಳಿಗೆ ಒಟ್ಟು 56.6 ಲಕ್ಷ ರೂಪಾಯಿ ದಂಡ ಹಾಕಲಾಗಿದೆ. ಜೊತೆಗೆ ಸೂಕ್ತ ದಾಖಲೆಗಳಿಲ್ಲದ 62 ವಾಹನಗಳನ್ನು ಜಪ್ತಿ ಮಾಡಲಾಗಿದ್ದು, ನಗರ ಪ್ರವೇಶ ನಿಯಮ ಮೀರಿದ ಕಾರಣಕ್ಕೆ 2 ಲಕ್ಷ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಮತ್ತೊಂದೆಡೆ, ಧೂಳಿನ ಮಾಲಿನ್ಯಕ್ಕೆ ಕಡಿವಾಣ ಹಾಕಲು 300 ನಿರ್ಮಾಣ ಹಂತದ  ಪ್ರದೇಶಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಮಾನದಂಡ ಗಾಳಿಗೆ ತೂರಿದ್ದ 32 ಸ್ಥಳಗಳಿಂದ 9.8 ಲಕ್ಷ ರೂಪಾಯಿ ಪರಿಸರ ಪರಿಹಾರ ಶುಲ್ಕ ವಸೂಲಿ ಮಾಡಿದ್ದಾರೆ. ಈ ಪೈಕಿ 17 ಕಾಮಗಾರಿ ಸ್ಥಳಗಳನ್ನು ತಕ್ಷಣವೇ ಮುಚ್ಚುವಂತೆ ಆದೇಶಿಸಿ, 19 ಸಂಸ್ಥೆಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಆದರೆ ಇವಿ, ಸಿಎನ್‌ಜಿ ಹಾಗೂ ತುರ್ತು ಸೇವಾ ವಾಹನಗಳ ಸಂಚಾರಕ್ಕೆ ಯಾವುದೇ ತಡೆ ನೀಡಲಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ಈ ಕಟ್ಟುನಿಟ್ಟಿನ ನಿಯಮಗಳು ಮುಂಬರುವ ಫೆಬ್ರವರಿ 28ರವರೆಗೆ ಜಾರಿಯಲ್ಲಿರಲಿವೆ. ನವೆಂಬರ್ 1 ರಿಂದ ಜನವರಿ 31 ರವರೆಗೆ ನಗರದ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳು ಶೇ. 50ರಷ್ಟು ಸಿಬ್ಬಂದಿಗೆ ಮಾತ್ರ ಕಚೇರಿಯಿಂದ ಕೆಲಸ ಮಾಡಲು ಅನುಮತಿ ನೀಡಿದ್ದು, ಉಳಿದ ಶೇ. 50ರಷ್ಟು ನೌಕರರಿಗೆ ಮನೆಯಿಂದಲೇ ಕೆಲಸ (WFH) ಮಾಡಲು ಸೂಚಿಸಲಾಗಿದೆ. ಡಿಸೆಂಬರ್ 10 ರಿಂದ ಜನವರಿ 20 ರವರೆಗೆ ತುರ್ತು ಸಾರ್ವಜನಿಕ ಕಾಮಗಾರಿಗಳನ್ನು ಹೊರತುಪಡಿಸಿ, ಧೂಳು ಎಬ್ಬಿಸುವ ಎಲ್ಲಾ ರೀತಿಯ ನಿರ್ಮಾಣ ಚಟುವಟಿಕೆಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ಖಾಸಗಿ ವಾಹನಗಳ ಬಳಕೆಗೆ ಬ್ರೇಕ್ ಹಾಕಿ ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸುವ ಉದ್ದೇಶದಿಂದ ನಗರದಾದ್ಯಂತ ಪಾರ್ಕಿಂಗ್ ಶುಲ್ಕವನ್ನು ದುಪ್ಪಟ್ಟು ಮಾಡಲಾಗಿದೆ. ಸಾರ್ವಜನಿಕರು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಾಗಿ ಸಹಕರಿಸಬೇಕು ಎಂದು ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಮನವಿ ಮಾಡಿದ್ದಾರೆ.

ಏನಿದು ವಿಂಟರ್ ಆಕ್ಷನ್ ಪ್ಲಾನ್? 

ಪ್ರತಿ ವರ್ಷ ಚಳಿಗಾಲ ಆರಂಭವಾಗುತ್ತಿದ್ದಂತೆ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿಯುತ್ತದೆ. ಚಳಿಯ ವಾತಾವರಣ, ಹವಾಮಾನ ವೈಪರೀತ್ಯ ಹಾಗೂ ದಟ್ಟವಾದ ಹೊಗೆಯಿಂದಾಗಿ ಸಾರ್ವಜನಿಕ ಆರೋಗ್ಯದ ಮೇಲೆ ಉಂಟಾಗುವ ಗಂಭೀರ ಪರಿಣಾಮಗಳನ್ನು ನಿಯಂತ್ರಿಸಲು ದೆಹಲಿ ಸರ್ಕಾರವು ರೂಪಿಸುವ ವಿಶೇಷ ಬ್ಲೂಪ್ರಿಂಟ್ ಅಥವಾ ಯೋಜನೆಯೇ ‘ವಿಂಟರ್ ಆಕ್ಷನ್ ಪ್ಲಾನ್’. ಚಳಿಗಾಲದ ಅವಧಿಯಲ್ಲಿ ವಾಯು ಮಾಲಿನ್ಯವನ್ನು ತಡೆಗಟ್ಟಲು ಇದು ಹಲವು ಬಿಗಿ ನಿಯಮಗಳು ಮತ್ತು ತುರ್ತು ಕ್ರಮಗಳನ್ನು ಒಳಗೊಂಡಿರುತ್ತದೆ. 

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಂಧ್ರದತ್ತ ಧಾವಿಸುತ್ತಿದೆ ಭೀಕರ ‘ಮುರಸು’ ಚಂಡಮಾರುತ: 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಒಡಿಶಾದಲ್ಲಿ ಕಟ್ಟೆಚ್ಚರ

ನೈರುತ್ಯ ಮತ್ತು ಅದಕ್ಕೆ ಹೊಂದಿಕೊಂಡಿರುವ ಪಶ್ಚಿಮ ಮಧ್ಯ ಬಂಗಾಳಕೊಲ್ಲಿಯ ಭಾಗದಲ್ಲಿ ಉಂಟಾಗಿದ್ದ...

ಬೀದರ್‌ | ತೋಟಗಾರಿಕೆ ಇಲಾಖೆ ಸ್ತಬ್ಧಚಿತ್ರಕ್ಕೆ ಪ್ರಥಮ ಸ್ಥಾನ

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಗರದ ನೆಹರು ಕ್ರೀಡಾಂಗಣದಲ್ಲಿ ಭಾನುವಾರ ನಡೆದ ರಾಜ್ಯೋತ್ಸವ...

ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ: ಹೆಚ್‌ಡಿಕೆ ನಿವಾಸದಲ್ಲಿ ಮೊಬೈಲ್ ಹಸ್ತಾಂತರ, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಕಮಿಷನರ್ ಸೀಮಂತ್ ಸಿಂಗ್

ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ...