ದೆಹಲಿ ಸತ್ಯನಿಕೇತನ ಕಟ್ಟಡ ಕುಸಿತ: ಬಿಜೆಪಿ ಶಾಸಕರ ನಂಟಿರುವ ದಾಖಲೆ ಬಿಡುಗಡೆ ಮಾಡಿದ ಎಎಪಿ

Date:

ದೆಹಲಿಯ ಸತ್ಯ ನಿಕೇತನದಲ್ಲಿ ಸಂಭವಿಸಿದ ಪಿಜಿ (ಪೇಯಿಂಗ್ ಗೆಸ್ಟ್) ಕಟ್ಟಡ ದುರಂತಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಾರ್ಟಿ (ಎಎಪಿ) ಬಿಜೆಪಿ ವಿರುದ್ಧ ತನ್ನ ದಾಳಿಯನ್ನು ತೀವ್ರಗೊಳಿಸಿದೆ. ಸ್ಥಳೀಯ ಬಿಜೆಪಿ ಶಾಸಕ ಅನಿಲ್ ಶರ್ಮಾ ಹಾಗೂ ಅವರ ಕುಟುಂಬಕ್ಕೆ ಅಕ್ರಮ ಪಿಜಿ ನಂಟಿದೆ ಎಂದು ಪ್ರತಿಪಾದಿಸಿ ಹೊಸ ದಾಖಲೆಗಳನ್ನು ಬಿಡುಗಡೆ ಮಾಡಿದೆ.

- Advertisement -

ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ (MCA) ವೆಬ್‌ಸೈಟ್‌ನಿಂದ ಪಡೆಯಲಾದ ದಾಖಲೆಗಳನ್ನು ಮಾಧ್ಯಮಗಳ ಮುಂದೆ ಪ್ರದರ್ಶಿಸಿದ ಎಎಪಿ ದೆಹಲಿ ಅಧ್ಯಕ್ಷ ಸೌರಭ್ ಭಾರದ್ವಾಜ್ ಮತ್ತು ರಾಜ್ಯಸಭಾ ಸಂಸದ ಸಂಜಯ್ ಸಿಂಗ್, ಸತ್ಯ ನಿಕೇತನ್‌ನಲ್ಲಿ ಪಿಜಿ ನಡೆಸುತ್ತಿದ್ದ ‘ಕೇಷ್ಟೋ ಗ್ಯಾದರ್ ಹೋಮ್ಸ್ ಪ್ರೈವೇಟ್ ಲಿಮಿಟೆಡ್’ ಎಂಬ ಕಂಪನಿಯಲ್ಲಿ ಆರ್‌ಕೆ ಪುರಂ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಶರ್ಮಾ ಅವರ ಮಗ, ಸೋದರಳಿಯ ಹಾಗೂ ಬಿಜೆಪಿ ನಾಯಕ ರಾಜೀವ್ ಬಬ್ಬರ್ ಅವರ ಮಗ ಪಾಲುದಾರರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಇದನ್ನೂ ಓದಿ: ಬೆಳಕಿಲ್ಲ, ಗಾಳಿಯಿಲ್ಲ, ಸುರಕ್ಷತೆಯೂ ಇಲ್ಲ: ‘ಕೋಚಿಂಗ್ ಹಬ್’ಗಳ ಅಸಲಿ ಮುಖವಾಡ ಕಳಚಿದ ಸತ್ಯನಿಕೇತನ ದುರಂತ!

600 ಚದರ ಗಜ ವಿಸ್ತೀರ್ಣದಲ್ಲಿ ನಡೆಯುತ್ತಿರುವ ಪಿಜಿಯನ್ನು ಶಾಸಕರ ತಂದೆಯವರ ಆಸ್ತಿಯಲ್ಲಿ ಅವರ ಮಗ ಹಾಗೂ ಸಂಬಂಧಿಕರು ನಡೆಸುತ್ತಿದ್ದಾರೆ ಎಂದು ಎಎಪಿ ಪ್ರತಿಪಾದಿಸಿದೆ. ಎಂಸಿಡಿ ದಾಖಲೆಗಳ ಪ್ರಕಾರ ಕೇವಲ 230 ಚದರ ಗಜ ಜಾಗಕ್ಕೆ ಮಾತ್ರ ಅನುಮತಿ ಇದ್ದರೂ, 600 ಚದರ ಗಜಗಳಷ್ಟು ದೊಡ್ಡ ಮಟ್ಟದಲ್ಲಿ ಅಕ್ರಮವಾಗಿ ಪಿಜಿ ನಿರ್ಮಿಸಿ ನಡೆಸಲಾಗುತ್ತಿದೆ. ಈ ಹಿಂದಿನಿಂದಲೂ ಶಾಸಕರು ತಮಗೆ ಇದರೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸುಳ್ಳು ಹೇಳಿಕೊಂಡು ಬಂದಿದ್ದಾರೆ ಎಂದು ಎಎಪಿ ನಾಯಕರು ಕಿಡಿಕಾರಿದ್ದಾರೆ.

ಬಿಜೆಪಿ ನಾಯಕರ ಈ ಅಕ್ರಮ ಮತ್ತು ಅಲಕ್ಷ್ಯದಿಂದಾಗಿಯೇ ಅಮಾಯಕ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಳ್ಳುವಂತಾಗಿದೆ. ಈ ಕುರಿತು ಬಿಜೆಪಿ ದೆಹಲಿಯ ಜನತೆ ಹಾಗೂ ವಿದ್ಯಾರ್ಥಿಗಳ ಬಳಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಸಂಜಯ್ ಸಿಂಗ್ ಆಗ್ರಹಿಸಿದ್ದಾರೆ.

ಈ ಹಿಂದೆ ತಮ್ಮ ವಿರುದ್ಧದ ಆರೋಪಗಳಿಗೆ ಪ್ರತಿಕ್ರಿಯಿಸಿದ್ದ ಬಿಜೆಪಿ ಶಾಸಕ ಅನಿಲ್ ಶರ್ಮಾ, “ಆ ಆಸ್ತಿಯು ನಮ್ಮ ಪಾರಂಪರಿಕ ಜಾಗವಾಗಿದ್ದು, ನಿಯಮಾನುಸಾರವೇ ಇದೆ. ನಮ್ಮದು ದೊಡ್ಡ ಕುಟುಂಬವಾಗಿದ್ದು, ರಾಜಕೀಯ ಲಾಭಕ್ಕಾಗಿ ಎಎಪಿ ಸುಳ್ಳು ಆರೋಪಗಳನ್ನು ಮಾಡುತ್ತಿದೆ” ಎಂದು ಹೇಳಿದ್ದರು ಹಾಗೂ ಆರೋಪ ಮಾಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಚ್ಚರಿಸಿದ್ದರು.

ಸೆಪ್ಟೆಂಬರ್ 6ರಂದು ನವದೆಹಲಿಯ ಸತ್ಯನಿಕೇತನ ಪ್ರದೇಶದಲ್ಲಿ ಐದು ಅಂತಸ್ತಿನ ಪಿಜಿ ವಸತಿ ಕಟ್ಟಡವೊಂದು ಹಠಾತ್ ಕುಸಿದು ಬಿದ್ದಿದೆ. ಈ ಭೀಕರ ದುರಂತದಲ್ಲಿ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ. ನಿಯಮಗಳನ್ನು ಗಾಳಿಗೆ ತೂರಿ ಹೆಚ್ಚುವರಿ ಅಂತಸ್ತುಗಳನ್ನು ನಿರ್ಮಿಸಲಾಗಿತ್ತು ಹಾಗೂ ಒಳಚರಂಡಿ ವ್ಯವಸ್ಥೆ ಸಮರ್ಪಕವಾಗಿರಲಿಲ್ಲ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಇದೀಗ ಎಎಪಿ ಈ ಕಟ್ಟಡ ಬಿಜೆಪಿ ಶಾಸಕರಿಗೆ ನಂಟಿರುವುದು ಎಂದು ಆರೋಪಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ SIR:​’ಹಳೆಯ’ ಮತದಾರರಿಗೆ ‘ಹೊಸ’ ಫಾರ್ಮ್ ಏಕೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ತರಾಟೆ

ದೆಹಲಿಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಹಿಂದಿನ ಮತದಾರರ...

ಡಯಾಜಿಯೊ ಇಂಡಿಯಾದ ನೂತನ ಜನರಲ್ ಕೌನ್ಸೆಲ್ ಆಗಿ ಸಮೀರ್ ಚುಘ್ ನೇಮಕ

ಪ್ರಮುಖ ಮದ್ಯ ಉತ್ಪಾದನಾ ಕಂಪನಿಯಾದ ಡಯಾಜಿಯೊ ಇಂಡಿಯಾ (Diageo India) ಸಂಸ್ಥೆಯ...

ಬೀದರ್‌ | ಶೈಕ್ಷಣಿಕ ಜ್ಞಾನದೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ : ಜ್ಯೋತಿರ್ಮಯಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ಶಿಸ್ತು, ಸಂಯಮ, ಪರಿಶ್ರಮ ಹಾಗೂ ಉತ್ತಮ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ...

ಈ ದಿನ ಸಂಪಾದಕೀಯ | ಎಸ್‌ಐಆರ್‌ ಮುಗೀತು; ಉತ್ತರ ಸಿಗದ ಪ್ರಶ್ನೆಗಳಿನ್ನೂ ಬಾಕಿ ಇವೆ!

ಎಸ್‌ಐಆರ್‌ ಮುಗಿದಿದೆ, ಅಂತಿಮ ಮತದಾರರ ಪಟ್ಟಿಯೂ ಪ್ರಕಟವಾಗಿದೆ. ಆದರೆ ಉತ್ತರ...