ದೆಹಲಿ | ಸ್ಪೈಡರ್‌ಮ್ಯಾನ್‌ಗೆ ದಂಡ ವಿಧಿಸಿದ ಪೊಲೀಸರು

Date:

ದೆಹಲಿಯ ದ್ವಾರಕಾ ರಸ್ತೆಗಳಲ್ಲಿ ವ್ಯಕ್ತಿಯೊಬ್ಬ ಸ್ಪೈಡರ್‌ಮ್ಯಾನ್‌ನಂತೆ ಡ್ರೆಸ್‌ ಹಾಕಿಕೊಂಡು ಕಾರಿನ ಬಾನೆಟ್‌ ಮೇಲೆ ಕುಳಿತು ಓಡಾಡುತ್ತಿದ್ದದ್ದು ಕಂಡುಬಂದಿದೆ. ದೆಹಲಿ ಸಂಚಾರ ಪೊಲೀಸರು ಆತನಿಗೆ ದಂಡ ವಿಧಿಸಿದ್ದಾರೆ.

- Advertisement -

ಸ್ಪೈಡರ್‌ಮ್ಯಾನ್‌ನಂತೆ ಬಟ್ಟೆ ಧರಿಸಿ, ಕಾರಿನ ಮೇಲೆ ಕುಳಿತು ಓಡಾಡುತ್ತಿರುವ ವ್ಯಕ್ತಿಯ ವಿರುದ್ಧ ಸಾರ್ವಜನಿಕರು ಸಾಮಾಜಿಕ ಮಾಧ್ಯಮದಲ್ಲಿ ದೆಹಲಿ ಪೊಲೀಸರಿಗೆ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ದೂರು ಸ್ವೀಕರಿಸಿರುವ ಪೊಲೀಸರು ಸ್ಪೈಡರ್‌ಮ್ಯಾನ್‌ ವೇಷದಲ್ಲಿದ್ದ ಆದಿತ್ಯ (20) ಮತ್ತು ಆತನ ಕಾರು ಚಾಲಕ ಗೌರವ್‌ ಸಿಂಗ್‌ ಎಂಬಾತನಿಗೆ ದಂಡ ವಿಧಿಸಿದ್ದಾರೆ.

ಅಪಾಯಕಾರಿ ವಾಹನ ಚಾಲನೆ, ಮಾಲಿನ್ಯ ಪ್ರಮಾಣ ಪತ್ರ ಇಲ್ಲದೇ ವಾಹನ ಬಳಕೆ, ಚಾಲನೆ ವೇಳೆ ಸೀಟ್ ಬೆಲ್ಟ್ ಧರಿಸದೇ ಇರುವ ಆರೋಪಗಳ ವಿರುದ್ಧ ಕಾರಿನ ಮಾಲೀಕ ಮತ್ತು ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳ ವಿರುದ್ಧ 26,000 ರೂ. ದಂಡ ಆಥವಾ ಸೆರೆವಾಸ ಅಥವಾ ಎರಡನ್ನೂ ವಿಧಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಸಿಪಿಐಎಂ, ಎಸ್‌ಎಫ್‌ಐ ನಾಯಕರು ಮತ್ತು ವಕೀಲರ ಬಂಧನ

ಸಿಜೆಪಿ ಕರೆಕೊಟ್ಟಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲು ದೆಹಲಿಯ ಜಂತರ್‌ ಮಂತರ್‌ಗೆ ತೆರಳುತ್ತಿದ್ದ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ಬಂಧನ

ದೆಹಲಿಯ ಜಂತರ್ ಮಂತರ್ ರಸ್ತೆಯಲ್ಲಿರುವ ಕೇರಳ ಭವನದ ಸಮೀಪ ಕೇರಳದ ಮಾಜಿ...