ದೆಹಲಿ | ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ಮೂವರ ಬಂಧನ

Date:

ಪೂರ್ವ ದೆಹಲಿಯ ಪ್ರೀತ್ ವಿಹಾರ್ ಪ್ರದೇಶದ ಕೆಫೆಯೊಂದರಲ್ಲಿ ಮಂಗಳವಾರ ನಸುಕಿನ ವೇಳೆ 22 ವರ್ಷದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಕೆಫೆ ಬಾಗಿಲು ಮುಚ್ಚಿದ ಬಳಿಕ ಈ ಅಮಾನವೀಯ ಕೃತ್ಯ ನಡೆದಿದ್ದು, ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

ಪೊಲೀಸ್ ಮೂಲಗಳ ಪ್ರಕಾರ, ಸಂತ್ರಸ್ತ ಯುವತಿ, ಆಕೆಯ ಸ್ನೇಹಿತರು ಹಾಗೂ ಆರೋಪಿಗಳು ಎರಡು ಪ್ರತ್ಯೇಕ ಕೆಫೆಗಳಲ್ಲಿ ಕೆಲಸ ಮಾಡುತ್ತಿದ್ದರು. ರಾತ್ರಿ ಕೆಫೆ ಬಂದ್ ಆದ ಬಳಿಕ ಅಲ್ಲಿಯೇ ಪಾರ್ಟಿ ಮಾಡಲು ಇವರೆಲ್ಲರೂ ಯೋಜನೆ ರೂಪಿಸಿದ್ದರು. ರಾತ್ರಿ 11.30ಕ್ಕೆ ಕೆಫೆ ಮುಚ್ಚಲಾಗಿತ್ತು. ಆದರೆ, ಗುಂಪಿನಲ್ಲಿದ್ದ ಒಬ್ಬನ ಬಳಿ ಕೆಫೆಯ ಕೀಲಿ ಕೈ ಇದ್ದ ಕಾರಣ ಒಳಪ್ರವೇಶಿಸಲು ಸಾಧ್ಯವಾಗಿತ್ತು.

ಮೂವರು ಮಹಿಳೆಯರು ಮತ್ತು ನಾಲ್ವರು ಪುರುಷರನ್ನೊಳಗೊಂಡ ಈ ಏಳು ಜನರ ತಂಡ ಮೊದಲು ಒಂದು ಕೆಫೆಯಲ್ಲಿ ಸೇರಿತ್ತು. ನಂತರ ಮಂಡಾವಳಿಗೆ ತೆರಳಿದ್ದ ತಂಡ, ನಸುಕಿನ ಸುಮಾರು 3 ಗಂಟೆಯ ವೇಳೆಗೆ ಆರೋಪಿಗಳಲ್ಲೊಬ್ಬ ಕೆಲಸ ಮಾಡುತ್ತಿದ್ದ ಪ್ರೀತ್ ವಿಹಾರ್‌ನ ಮತ್ತೊಂದು ಕೆಫೆಗೆ ಬಂದಿತ್ತು.

ತನಿಖೆಯ ನೇತೃತ್ವ ವಹಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, “ಕೆಫೆಯಲ್ಲಿ ಏಳು ಮಂದಿಯೂ ಮದ್ಯ ಸೇವಿಸಿದ್ದರು ಎಂದು ತಿಳಿದುಬಂದಿದೆ. ಸುಮಾರು 3.30ರ ವೇಳೆಗೆ ಇಬ್ಬರು ಪುರುಷರು ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಮತ್ತು ಗುಂಪಿನಲ್ಲಿದ್ದ ಉಳಿದ ಸದಸ್ಯರು ಈ ಕೃತ್ಯಕ್ಕೆ ಸಹಕರಿಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ,” ಎಂದು ತಿಳಿಸಿದ್ದಾರೆ. ಪಾರ್ಟಿ ನಡೆಯುತ್ತಿದ್ದ ವೇಳೆ ಸಂತ್ರಸ್ತೆ ತನ್ನ ತಾಯಿಗೆ ಕರೆ ಮಾಡಿ, ಮನೆಗೆ ಬರುವುದು ತಡವಾಗುತ್ತದೆ ಎಂದು ತಿಳಿಸಿದ್ದಳು ಎನ್ನಲಾಗಿದೆ.

ಘಟನೆಯ ಬಳಿಕ ಗುಂಪಿನಲ್ಲಿದ್ದವರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ತೆರಳಿದ್ದರು. ಬಳಿಕ ನಸುಕಿನ 5.30ರ ಸುಮಾರಿಗೆ ಸಂತ್ರಸ್ತ ಯುವತಿ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾಳೆ. ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆಯ (BNS) ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದ ಕಠಿಣ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಪೂರ್ವ ದೆಹಲಿಯ ಉಪ ಪೊಲೀಸ್ ಆಯುಕ್ತ (DCP) ರಾಜೀವ್ ಕುಮಾರ್, “ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಮಹಿಳೆಯರು ಮತ್ತು ಓರ್ವ ಪುರುಷನನ್ನು ಬಂಧಿಸಲಾಗಿದೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ,” ಎಂದು ತಿಳಿಸಿದ್ದಾರೆ.

ಪೊಲೀಸರು ಈಗಾಗಲೇ ಘಟನಾ ಸ್ಥಳವಾದ ಕೆಫೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿಧಿವಿಜ್ಞಾನ ಪ್ರಯೋಗಾಲಯದ (FSL) ತಂಡ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಅಲ್ಲದೆ, ಕೆಫೆ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಕ್ಕೆ ಪಡೆದು ಪರಿಶೀಲಿಸುತ್ತಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಉಳಿದ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕನ್ನಡ ಭಾಷೆಯ ಬೆಳವಣಿಗೆ ಎಲ್ಲರ ಹೊಣೆ : ಸಿದ್ರಾಮಪ್ಪ ಮಾಸಿಮಾಡೆ

ಕನ್ನಡ ಭಾಷೆ ಪ್ರಾಚೀನ ಹಾಗೂ ಶ್ರೀಮಂತ ಭಾಷೆಯಾಗಿದ್ದು, ಅದರ ಉಳಿವು, ಬಳಕೆ...

ಬೀದರ್ | ಕಾಂಗ್ರೆಸ್ ಆಡಳಿತದಿಂದ ಬಡಜನರ ಬದುಕು ದುರ್ಬಲ: ಭಗವಂತ ಖೂಬಾ

ಕಾಂಗ್ರೆಸ್ ಸರ್ಕಾರದ ಜನವಿರೋಧಿ ಹಾಗೂ ರೈತ ವಿರೋಧಿ ನೀತಿಗಳಿಂದ ಬಡಜನರ ಬದುಕು...

ಮಂಡ್ಯ । ರಾಷ್ಟ್ರೀಯ ಹೆದ್ದಾರಿ ಕಳಪೆ ಕಾಮಗಾರಿ : ಶಾಸಕ ರವಿಕುಮಾರ್ ಗೌಡರಿಂದ NHAI ಅಧಿಕಾರಿಗೆ ತರಾಟೆ

ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಕಾಮಗಾರಿಯ ಗುಣಮಟ್ಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ...

ʻಮೆಟಾ, ಬಿಜೆಪಿ ಕಾ ಬೇಟಾʼ : ಯುವ ಕಾಂಗ್ರೆಸ್‌ನಿಂದ ವಿನೂತನ ಅಭಿಯಾನ

ಸಾಮಾಜಿಕ ಜಾಲತಾಣ ಸಂಸ್ಥೆಯಾದ ʼಮೆಟಾʼ, ಬಿಜೆಪಿಗೆ ಅನುಕೂಲಕರವಾಗಿ ನಡೆದುಕೊಳ್ಳುತ್ತಿದೆ ಎಂದು ಆಪಾದಿಸಿ...