ದೆಹಲಿ | ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವಾಗ ವಿಷಾನಿಲ ಸೇವಿಸಿ ಮೂವರು ಕಾರ್ಮಿಕರು ಸಾವು

Date:

ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸಲು ಇಳಿದಿದ್ದ ಮೂವರು ಕಾರ್ಮಿಕರು ವಿಷಾನಿಲ ಸೇವಿಸಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದೆಹಲಿಯ ಮುಂಡ್ಕಾ ಕೈಗಾರಿಕಾ ಪ್ರದೇಶದ ಜ್ವಾಲಾ ಪುರಿ ಎಂಬಲ್ಲಿನ ಕಾರ್ಖಾನೆಯೊಂದರಲ್ಲಿ ಶುಕ್ರವಾರ ನಡೆದಿದೆ.

- Advertisement -

ನಿನ್ನೆ (ಜೂ.26) ಮಧ್ಯಾಹ್ನ ಸುಮಾರು 12:03ರ ಸುಮಾರಿಗೆ ಕಾರ್ಖಾನೆಯ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಕೆಲವರು ಸಿಲುಕಿಕೊಂಡಿದ್ದಾರೆ ಎಂಬ ಮಾಹಿತಿ ಅಗ್ನಿಶಾಮಕ ದಳಕ್ಕೆ ಲಭ್ಯವಾಗಿದೆ. ಕೂಡಲೇ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಪ್ರಾಥಮಿಕ ತನಿಖೆಯ ಪ್ರಕಾರ, ಸುಲ್ತಾನ್‌ಪುರಿಯ ಇಂದ್ರಾ ಜೀಲ್ ನಿವಾಸಿಗಳಾದ ಅರುಣ್ (38), ಸಂದೀಪ್ (32) ಮತ್ತು ಚಾಂದ್ (42) ಎಂಬ ಮೂವರು ಕಾರ್ಮಿಕರು ಒಬ್ಬರಾದ ನಂತರ ಒಬ್ಬರಂತೆ ಸೆಪ್ಟಿಕ್ ಟ್ಯಾಂಕ್‌ಗೆ ಇಳಿದಿದ್ದಾರೆ. ಆದರೆ, ಒಳಗೆ ಇದ್ದ ವಿಷಾನಿಲವನ್ನು ಸೇವಿಸಿದ ತಕ್ಷಣ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಅವರನ್ನು ಹೊರತೆಗೆದರಾದರೂ, ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು.

ಘಟನೆಗೆ ಸಂಬಂಧಿಸಿದಂತೆ ಮುಂಡ್ಕಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ. ಸುರಕ್ಷತಾ ನಿಯಮಗಳನ್ನು ಪಾಲಿಸದೆ ನಿರ್ಲಕ್ಷ್ಯ ವಹಿಸಿದ ಆರೋಪದಡಿ ಕಾರ್ಖಾನೆಯ ಮಾಲೀಕ ಸೂರಜ್‌ ವರ್ಮಾ (50), ಜಯಂತ್ (61), ಗುತ್ತಿಗೆದಾರ ಮತ್ತು ಕಾರ್ಮಿಕರನ್ನು ಕರೆತಂದ ವಾಹನದ ಮಾಲೀಕ ನೀರಜ್ (35) ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ತನ್ನದೇ ಸಚಿವಾಲಯದಿಂದ ಸೌತೆಕಾಯಿ ಬೆಳೆಗೆ 99 ಲಕ್ಷ ರೂ. ಸಬ್ಸಿಡಿ ಪಡೆದ ಕೇಂದ್ರ ಬಿಜೆಪಿ ಸಚಿವ ಭಗೀರಥ್ ಚೌಧರಿ

ಸುರಕ್ಷತಾ ಕ್ರಮಗಳಿಲ್ಲದೆ ಕಾರ್ಮಿಕರನ್ನು ಅಪಾಯಕಾರಿ ಕೆಲಸಕ್ಕೆ ನಿಯೋಜಿಸಿದ್ದು ಈ ದುರಂತಕ್ಕೆ ಕಾರಣವಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.29ರಂದು ನೀರು, ಬರ, ಪರಿಸರ ಕುರಿತು ವಿಚಾರ ಸಂಕಿರಣ

ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ, ಸಿದ್ದಾರ್ಥ ಪದವಿ ಪೂರ್ವ ಕಾಲೇಜು, ಟೀಮ್...

ಬೀದರ್‌ | ಶಿಕ್ಷಕರು ಸಮಾಜದ ಭವಿಷ್ಯ ನಿರ್ಮಿಸುವ ಶಿಲ್ಪಿಗಳು: ಪುಣ್ಯವತಿ ವಿಸಾಜಿ

ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವ ಜೊತೆಗೆ ಸಮಾಜದ...

ಬೀದರ್‌ | ಅಂಬೇಡ್ಕರ್ ಚಿಂತನೆ ವಿದ್ಯಾರ್ಥಿಗಳ ಬದುಕಿಗೆ ಮಾರ್ಗದರ್ಶನವಾಗಲಿ: ಸಿದ್ರಾಮ ಸಿಂಧೆ

ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು, ಸಾಧನೆ ಹಾಗೂ ಬರಹಗಳನ್ನು ವಿದ್ಯಾರ್ಥಿಗಳು ಆಳವಾಗಿ ಅಧ್ಯಯನ...

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...