ತಾಂತ್ರಿಕ ಸಮಸ್ಯೆ: ಲೇಹ್‌ಗೆ ಹಾರಿದ್ದ ಇಂಡಿಗೋ ವಿಮಾನ ದೆಹಲಿಗೆ ವಾಪಸ್

Date:

ದೆಹಲಿಯಿಂದ ಲೇಹ್‌ಗೆ ಹಾರಿದ್ದ ಇಂಡಿಗೋ ವಿಮಾನ ತಾಂತ್ರಿಕ ಸಮಸ್ಯೆಯಿಂದಾಗಿ ದೆಹಲಿಗೆ ವಾಪಸ್ ಬಂದಿದೆ. ವಿಮಾನವು ಗುರುವಾರ ಬೆಳಿಗ್ಗೆ ಎರಡು ಗಂಟೆಗಳಿಗೂ ಹೆಚ್ಚು ಕಾಲ ಹಾರಾಟ ನಡೆಸಿದ್ದು, ತಾಂತ್ರಿಕ ಸಮಸ್ಯೆಯಿಂದಾಗಿ ರಾಷ್ಟ್ರ ರಾಜಧಾನಿಗೆ ಮರಳಿದೆ.

- Advertisement -

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ವಿಮಾನಯಾನ ವಕ್ತಾರರು, “2025ರ ಜೂನ್ 19ರಂದು ದೆಹಲಿಯಿಂದ ಲೇಹ್‌ಗೆ ಹಾರಾಟ ನಡೆಸುತ್ತಿದ್ದ ಇಂಡಿಗೋ ವಿಮಾನ 6E 2006, ತಾಂತ್ರಿಕ ಸಮಸ್ಯೆಯಿಂದಾಗಿ ಲೇಹ್‌ನಲ್ಲಿ ಇಳಿಯಲು ಸಾಧ್ಯವಾಗದೆ ದೆಹಲಿಗೆ ವಾಪಸ್ ಮರಳಿದೆ. ಕಾರ್ಯವಿಧಾನಗಳ ಪ್ರಕಾರ, ಪೈಲಟ್ ವಿಮಾನವನ್ನು ದೆಹಲಿಯಲ್ಲಿ ಲ್ಯಾಂಡ್ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಗುಜರಾತ್ ವಿಮಾನ ದುರಂತ | ವೈದ್ಯರು ಸೇರಿ ಒಂಬತ್ತು ಮಂದಿ ಸಾವು; ಹಾಸ್ಟೆಲ್ ತೆರವು

ವಿಮಾನವು ಕಾರ್ಯಾಚರಣೆಯನ್ನು ಪುನರಾರಂಭಿಸುವ ಮೊದಲು ಅಗತ್ಯ ನಿರ್ವಹಣೆಗೆ ಒಳಗಾಗುತ್ತಿದೆ ಎಂದೂ ವಕ್ತಾರರು ಹೇಳಿದ್ದಾರೆ. “ಪ್ರಯಾಣಿಕರನ್ನು ಲೇಹ್‌ಗೆ ಕರೆದೊಯ್ಯಲು ಪರ್ಯಾಯ ವಿಮಾನವನ್ನು ವ್ಯವಸ್ಥೆ ಮಾಡಲಾಗಿದೆ. ಪ್ರಯಾಣಿಕರಿಗಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸುತ್ತೇವೆ” ಎಂದಿದ್ದಾರೆ. ವಿಮಾನದಲ್ಲಿ ಎಷ್ಟು ಪ್ರಯಾಣಿಕರಿದ್ದಾರೆ ಎಂಬ ವಿವರ ಮಾತ್ರ ತಿಳಿಸಿಲ್ಲ.

ಇತ್ತೀಚೆಗೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್‌ ಇಂಡಿಯಾ AI171 ಬೋಯಿಂಗ್ 787-8 ಡ್ರೀಮ್‌ಲೈನರ್‌ ಅಪಘಾತಕ್ಕೀಡಾಗಿದ್ದು, ಈ ದುರಂತದಲ್ಲಿ ವಿಮಾನದಲ್ಲಿದ್ದ ಓರ್ವ ಪ್ರಯಾಣಿಕ ಬಿಟ್ಟು ಉಳಿದೆಲ್ಲರೂ ಮೃತಪಟ್ಟಿದ್ದಾರೆ. ವಿಮಾನ ಅಪ್ಪಳಿಸಿದ ಹಾಸ್ಟೆಲ್ ಕಟ್ಟಡದಲ್ಲಿದ್ದ ಹಲವು ಮಂದಿ ಸಾವನ್ನಪ್ಪಿದ್ದಾರೆ. ಆದರೆ ಈವರೆಗೂ ಖಚಿತವಾಗಿ ಮೃತರ ಸಂಖ್ಯೆ ತಿಳಿಸಲಾಗಿಲ್ಲ. ವೈದ್ಯರುಗಳು 270 ಮೃತದೇಹ ಸಿಕ್ಕಿದೆ ಎಂದಿದ್ದಾರೆ. ಸದ್ಯ ಡಿಎನ್‌ಎ ಪರೀಕ್ಷೆ ಮೂಲಕ ಮೃತದೇಹದ ಗುರುತು ಪತ್ತೆ ಹಚ್ಚಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತಿದೆ. ಈ ಘಟನೆ ಬಳಿಕ ವಿಮಾನಯಾನ ಸಂಸ್ಥೆಗಳು ತಾಂತ್ರಿಕ ಸಮಸ್ಯೆಗಳ ಬಗ್ಗೆ ಹೆಚ್ಚು ಎಚ್ಚರಿಕೆ ವಹಿಸುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...