ದೆಹಲಿ ಜಲ ವಿವಾದ | ನಮ್ಮಲ್ಲಿ ಸಾಕಷ್ಟು ನೀರಿಲ್ಲ; ಸುಪ್ರೀಂಗೆ ಹಿಮಾಚಲ ಸರ್ಕಾರ ಮಾಹಿತಿ

Date:

ದೆಹಲಿಯಲ್ಲಿ ಪ್ರಸ್ತುತ ನಡೆಯುತ್ತಿರುವ ನೀರಿನ ಸಂಕಷ್ಟದ ನಡುವೆ ಹಿಮಾಚಲ ಪ್ರದೇಶ ಸರ್ಕಾರ ತಾನು ಹಿಂದೆ ನೀಡಿದ ಹೇಳಿಕೆಯನ್ನು ಹಿಂಪಡೆದಿದ್ದು, ದೆಹಲಿಗೆ ಬಿಡಬೇಕಾದ 136 ಕ್ಯೂಸೆಕ್ಸ್ ಹೆಚ್ಚುವರಿ ನೀರು ನಮ್ಮ ಬಳಿ ಇಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ.

- Advertisement -

ಈ ಹಿನ್ನೆಲೆಯಲ್ಲಿ ನೀರು ಸರಬರಾಜಿಗಾಗಿ ಯಮುನಾ ನದಿ ಉನ್ನತ ಮಂಡಳಿ(ಯುವೈಆರ್‌ಬಿ)ಗೆ ಮನವಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ದೆಹಲಿ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ರಾಷ್ಟ್ರ ರಾಜಧಾನಿಯಲ್ಲಿ ನೀರಿನ ಸಮಸ್ಯೆ ಉದ್ಭವಿಸಿರುವ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶದಿಂದ ಬಿಡಲಾಗುವ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡುವಂತೆ ಹರಿಯಾಣ ಸರ್ಕಾರಕ್ಕೆ ನಿರ್ದೇಶಿಸುವಂತೆ ದೆಹಲಿ ಸರ್ಕಾರ ಮನವಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಈ ಬೆಳವಣಿಗೆ ನಡೆದಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಡುವ ಸ್ಥಾನದಲ್ಲಿರುವವರು ಒಳ್ಳೆಯದನ್ನೇ ಕೊಡಬೇಕು ಎಂದು ರಾಜ್ ಹೇಳಿದ್ದು ಯಾರಿಗೆ?

ರಜಾ ಕಾಲ ಪೀಠದ ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಹಾಗೂ ಪ್ರಸನ್ನ ಬಿ ವರಾಳೆ ಅವರು ರಾಷ್ಟ್ರೀಯ ರಾಜಧಾನಿಗೆ ಮಾನವೀಯ ಆಧಾರದ ಮೇಲೆ ನೀರು ಬಿಡುಗಡೆ ಮಾಡುವಂತೆ ವೈಯುಆರ್‌ಬಿಗೆ ಇಂದು ಸಂಜೆ 5 ಗಂಟೆಯೊಳಗೆ ಮನವಿ ಸಲ್ಲಿಸುವಂತೆ ದೆಹಲಿ ಸರ್ಕಾರಕ್ಕೆ ಸೂಚಿಸಿದರು.

ಉಭಯ ರಾಜ್ಯಗಳ ನಡುವಿನ ಯಮುನಾ ನದಿಯ ನೀರಿನ ಹಂಚಿಕೆ ಸಂಕೀರ್ಣ ಹಾಗೂ ಸೂಕ್ಷ್ಮ ವಿಷಯವಾಗಿದೆ. ಮಧ್ಯಂತರ ಆಧಾರದ ಮೇಲೆ ನಿರ್ಧರಿಸಲು ನ್ಯಾಯಾಲಯವು ಯಾವುದೇ ತಾಂತ್ರಿಕ ಪರಿಣಿತಿಯನ್ನು ಹೊಂದಿಲ್ಲ ಎಂದು ಪೀಠ ತಿಳಿಸಿದೆ.

“1994ರಲ್ಲಿ ಎರಡೂ ರಾಜ್ಯಗಳ ನಡುವೆ ಆಗಿರುವ ಒಪ್ಪಂದದಂತೆ ನಿರ್ಮಾಣವಾಗಿರುವ ಸಂಸ್ಥೆಯ ಮೂಲಕ ಈ ಸಮಸ್ಯೆಯನ್ನು ಇತ್ಯರ್ಥಗೊಳಿಸಿಕೊಳ್ಳಬೇಕು” ಎಂದು ನ್ಯಾಯಮೂರ್ತಿಗಳು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...

ಬಂಗಾಳ SIR | ನೋಟಿಸ್ ನೀಡಲು, ಹೆಸರು ಮರು ಸೇರಿಸಲು ಸಾಧ್ಯವಿಲ್ಲ: EC ಪೋರ್ಟಲ್ ವಿರುದ್ಧ ನ್ಯಾಯಾಧೀಶರ ದೂರು

ಪಶ್ಚಿಮ ಬಂಗಾಳದಲ್ಲಿ SIR ವೇಳೆ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಮೇಲ್ಮನವಿಗಳ ವಿಚಾರಣೆ...