ಡಿಲಿಮಿಟೇಷನ್ | ಸ್ಟಾಲಿನ್ ಮನವೊಲಿಸುವಲ್ಲಿ ‘ಇಂಡಿಯಾ’ ನಿಯೋಗ ವಿಫಲ

Date:

ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷ ನೀಡಿರುವ ಬೆಂಬಲವನ್ನು ಹಿಂಪಡೆಯುವಂತೆ ಮನವೊಲಿಸುವಲ್ಲಿ ‘ಇಂಡಿಯಾ’ ಮೈತ್ರಿಕೂಟ ವಿಫಲಾವಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ, ಅಖಿಲೇಶ್ ಯಾದವ್, ಡಿ.ಕೆ ಶಿವಕುಮಾರ್ ನೇತೃತ್ವದ ಹಿರಿಯ ವಿಪಕ್ಷದ ನಾಯಕರ ನಿಯೋಗದ‌ ಪ್ರಯತ್ನ ವಿಫಲವಾಗಿದ್ದು, ನಿಯೋಗವು ಈಗ ಶರದ್ ಪವಾರ್ ಭೇಟಿಗಾಗಿ ಮುಂಬೈಗೆ ಪ್ರಯಾಣ ಆರಂಭಿಸಲಿದೆ.

- Advertisement -

ದೆಹಲಿಯಿಂದ ಚೆನ್ನೈಗೆ ತೆರಳಿದ್ದ ನಿಯೋಗವು ಸ್ಟಾಲಿನ್ ಅವರನ್ನು ಭೇಟಿಯಾಗಿದೆ. ಮಸೂದೆಯು ಅಂಗೀಕಾರಗೊಂಡರೆ, ಸಂಸದೀಯ ಪ್ರಾತಿನಿಧ್ಯ ಹಾಗೂ ಉತ್ತರ ಮತ್ತು ದಕ್ಷಿಣ ರಾಜ್ಯಗಳ ನಡುವಿನ ರಾಜಕೀಯ ಶಕ್ತಿಯ ಸಮತೋಲನದ ಮೇಲೆ ದೂರಗಾಮಿ ಪರಿಣಾಮಗಳನ್ನು ಬೀರಬಹುದು ಎಂದು ನಿಯೋಗವು ಸ್ಟಾಲಿನ್ ಅವರಿಗೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದೆ. ಆದರೆ, ಸ್ಟಾಲಿನ್ ತಮ್ಮ ನಿರ್ಧಾರದಿಂದ ಹಿಂದೆ ಸರಿಯದ ಕಾರಣ ವಿರೋಧ ಪಕ್ಷಗಳ ಈ ಪ್ರಯತ್ನ ವಿಫಲವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷೇತ್ರ ಮರುವಿಂಗಡಣೆಯ ಹಿಂದಿರುವ ಬಲಪಂಥೀಯ ರಾಜಕಾರಣದ ಗುಪ್ತ ಕಾರ್ಯಸೂಚಿ

ಕ್ಷೇತ್ರ ಮರುವಿಂಗಡಣೆ ಕೇವಲ ಲೋಕಸಭಾ ಸ್ಥಾನಗಳ ಹೆಚ್ಚಳವಲ್ಲ; ಅದು ದೇಶದ ರಾಜಕೀಯ ಅಧಿಕಾರದ ಹಂಚಿಕೆ, ಒಕ್ಕೂಟ ವ್ಯವಸ್ಥೆ ಮತ್ತು ಸಾಮಾಜಿಕ ನ್ಯಾಯದ ಭವಿಷ್ಯವನ್ನು ನಿರ್ಧರಿಸುವ ಪ್ರಕ್ರಿಯೆ. ಕ್ಷೇತ್ರಗಳ ಗಡಿ ಬದಲಾವಣೆಯಿಂದ ದಲಿತ, ಆದಿವಾಸಿ,...

ಗುಳೇದಗುಡ್ಡ | ತಾಲೂಕಾಗಿ ಹತ್ತು ವರ್ಷ ಕಳೆದರೂ ಭೂ...

ಗುಳೇದಗುಡ್ಡ ತಾಲೂಕು ರಚೆನೆಯಾಗಿ ಹತ್ತು ವರ್ಷ ಕಳೆದಿದೆ. ತಾಲೂಕು ವ್ಯಾಪ್ತಿಯ ಪಟ್ಟಣ ಹಾಗೂ ಗ್ರಾಮಗಳಿಗೆ ಸಂಬಂಧಿಸಿದ ಭೂದಾಖಲೆಗಳು ಬಾದಾಮಿ ತಹಸೀಲ್ದಾರ್ ಕಚೇರಿ ಮತ್ತು ಗದಗ ರಸ್ತೆಯ ಎಪಿಎಂಸಿ ಸಮೀಪದ ಕಚೇರಿಯಲ್ಲಿ ಸಂಗ್ರಹವಾಗಿವೆ....

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

ವಿಪಕ್ಷಗಳ ನಿಯೋಗ ಮತ್ತು ಡಿಎಂಕೆ ಸಭೆಯಲ್ಲಿ ಡಿಎಂಕೆ ಪರವಾಗಿ ಪಕ್ಷದ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್, ಸಂಸದರಾದ ಕನಿಮೊಳಿ, ದಯಾನಿಧಿ ಮಾರನ್ ಮತ್ತು ಹಲವು ಸಂಸದರು ಉಪಸ್ಥಿತರಿದ್ದರು. ಲೋಕಸಭಾ ಕ್ಷೇತ್ರಗಳ ಗಡಿಗಳನ್ನು ಬಿಜೆಪಿ ಮತ್ತು ಆರ್‌ಎಸ್‌ಎಸ್ ತಮಗೆ ಅನುಕೂಲವಾಗುವಂತೆ ಮರುರೂಪಿಸಲು ಈ ಬದಲಾವಣೆಗಳನ್ನು ಬಳಸಿಕೊಳ್ಳುತ್ತಿವೆ ಎಂಬುದರ ಬಗ್ಗೆ ಚರ್ಚೆಗಳು ನಡೆದವು. ಆದರೆ, ಸಭೆಯ ನಂತರವೂ ಡಿಎಂಕೆ ಐಟಿ ವಿಭಾಗವು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ, “ನ್ಯಾಯಯುತ ಕ್ಷೇತ್ರ ಪುನರ್ವಿಂಗಡಣೆ ಕುರಿತ ತನ್ನ ನಿಲುವಿನಲ್ಲಿ ಡಿಎಂಕೆ ದೃಢವಾಗಿದೆ” ಎಂದು ಪೋಸ್ಟ್ ಮಾಡುವ ಮೂಲಕ ತನ್ನ ನಿರ್ಧಾರವನ್ನು ಸ್ಪಷ್ಟಪಡಿಸಿದೆ.

ಕಾಂಗ್ರೆಸ್ ನಿಯೋಗದ ಭೇಟಿಗೂ ಕೆಲವು ಗಂಟೆಗಳ ಮುನ್ನವೇ ಸ್ಟಾಲಿನ್ ಅವರು ತಮಿಳುನಾಡಿನ ಹಿತಾಸಕ್ತಿಯ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿದ್ದರು. ರಾಹುಲ್ ಗಾಂಧಿ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ್ದ ಅವರು, “ನಾವು ತಮಿಳುನಾಡಿದ ಹಿತಾಸಕ್ತಿ‌ ವಿಚಾತದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ, ಇತಿಹಾಸವು ನಮ್ಮನ್ನು ಎಟ್ಟಪ್ಪನ್‌ಗಳಾಗಿ ಅಲ್ಲ, ಕಟ್ಟಬೊಮ್ಮನ್‌ಗಳಾಗಿ ನೆನಪಿಸಿಕೊಳ್ಳುತ್ತದೆ ಎಂಬ ವಿಶ್ವಾಸ ನನಗಿದೆ” ಎಂದು ಹೇಳಿದ್ದರು.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನನುಡಿ 2026 | ಬಂಡವಾಳಶಾಹಿ ಮತ್ತು ರಾಜಕೀಯದ ಅಪವಿತ್ರ ಮೈತ್ರಿಯ ಕರಾಳ ಮುಖವೇ ಕೋಮುವಾದ: ಎ ನಾರಾಯಣ್‌

ಬಂಡವಾಳಶಾಹಿಗಳು ಮತ್ತು ರಾಜಕೀಯ ಅಧಿಕಾರದ ಮೈತ್ರಿಗಳು ಕೋಮುವಾದಿ ಶಕ್ತಿಗಳ ಜೊತೆ ಮಾಡಿಕೊಂಡಿರುವ...

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ವಿರೋಧ: ವಿಜಯೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ

ಬಸವಕಲ್ಯಾಣದಲ್ಲಿ ಶನಿವಾರ ನಡೆದ 47ನೇ ಶರಣ ಕಮ್ಮಟ ಮತ್ತು ಅನುಭವ ಮಂಟಪ...

ಜೀವಂತವಾಗಿರುವಾತನನ್ನು ಮೃತನೆಂದು ಘೋಷಿಸಿದ ಆಸ್ಪತ್ರೆ: ‘ಬದುಕಿದ್ದೇನೆ’ ಎಂದು ಸಾಬೀತುಪಡಿಸಲು ಜೈಪುರ ಯುವಕನ ಪರದಾಟ!

ಸರ್ಕಾರಿ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ಬದುಕಿರುವ ಯುವಕನೊಬ್ಬ ಕಳೆದ 25 ದಿನಗಳಿಂದ...

ಕ್ಷೇತ್ರ ಮರುವಿಂಗಡಣೆಯ ಹಿಂದಿರುವ ಬಲಪಂಥೀಯ ರಾಜಕಾರಣದ ಗುಪ್ತ ಕಾರ್ಯಸೂಚಿ

ಕ್ಷೇತ್ರ ಮರುವಿಂಗಡಣೆ ಕೇವಲ ಲೋಕಸಭಾ ಸ್ಥಾನಗಳ ಹೆಚ್ಚಳವಲ್ಲ; ಅದು ದೇಶದ ರಾಜಕೀಯ...