ಕ್ಷೇತ್ರ ಮರುವಿಂಗಡಣೆ ಬಿಜೆಪಿಗೆ ತನಗೆ ಬೇಕಾದಂತೆ ನಕ್ಷೆ ಬದಲಿಸಿಕೊಳ್ಳಲು ನೀಡುವ ‘ಬ್ಲ್ಯಾಂಕ್ ಚೆಕ್’: ರಾಹುಲ್ ಗಾಂಧಿ ವಾಗ್ದಾಳಿ

Date:

ಉದ್ದೇಶಿತ ಕ್ಷೇತ್ರ ಮರುವಿಂಗಡಣೆ (Delimitation) ಮಸೂದೆಯು ಬಿಜೆಪಿಗೆ ತನ್ನ ರಾಜಕೀಯ ಲಾಭಕ್ಕೆ ತಕ್ಕಂತೆ ಚುನಾವಣಾ ಕ್ಷೇತ್ರಗಳ ಗಡಿಗಳನ್ನು ಮರುನಿರ್ಧರಿಸಲು ನೀಡುವ ‘ಬ್ಲ್ಯಾಂಕ್ ಚೆಕ್’ (ಖಾಲಿ ಚೆಕ್) ಆಗಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

- Advertisement -

ಶನಿವಾರ (ನವೆಂಬರ್ 28) ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಲೋಕಸಭೆಯ ಸದಸ್ಯ ಬಲವನ್ನು ಪ್ರಸ್ತುತ ಇರುವ 543 ರಿಂದ 850ಕ್ಕೆ ಹೆಚ್ಚಿಸುವ ಕೇಂದ್ರ ಸರ್ಕಾರದ ಪ್ರಸ್ತಾಪವು ಒಂದೇ ಒಂದು ಮತ ಚಲಾವಣೆಯಾಗುವ ಮೊದಲೇ ಬಿಜೆಪಿಗೆ ಭಾರಿ ಅನುಕೂಲ ಮಾಡಿಕೊಡುವ ತಂತ್ರವಾಗಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಇದನ್ನೂ ಓದಿ: ಕ್ಷೇತ್ರ ಮರುವಿಂಗಡಣೆ ಬೆಂಬಲಿಸುವುದು ಜನಾದೇಶಕ್ಕೆ ಬಗೆಯುವ ಘೋರ ದ್ರೋಹ; ‘ಜೆರೀ ಮ್ಯಾಂಡರಿಂಗ್’ ಲಾಭ ಬಿಜೆಪಿಗೆ: ಸಿಜೆಪಿ

ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೊಳಿಸುವ ನೆಪವೊಡ್ಡಿ ಕೇಂದ್ರ ಸರ್ಕಾರವು ಲೋಕಸಭಾ ಸ್ಥಾನಗಳನ್ನು ಹೆಚ್ಚಿಸಲು ಹೊರಟಿದೆ ಎಂದು ರಾಹುಲ್ ಗಾಂಧಿ ಕಿಡಿಕಾರಿದರು. “ಮಹಿಳಾ ಮೀಸಲಾತಿ ಮಸೂದೆ ಈಗಾಗಲೇ ಸಂಸತ್ತಿನಲ್ಲಿ ಅಂಗೀಕಾರವಾಗಿದೆ. ಪ್ರಸ್ತುತ ಇರುವ 543 ಸ್ಥಾನಗಳಲ್ಲೇ ನಾಳೆಯಿಂದಲೇ ಶೇ. 33ರಷ್ಟು ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸಬಹುದು, ಅದಕ್ಕಾಗಿ ಕ್ಷೇತ್ರ ಮರುವಿಂಗಡಣೆ ಮಾಡಿ ಸ್ಥಾನಗಳನ್ನು 850ಕ್ಕೆ ಏರಿಸುವ ಅಗತ್ಯವೇನಿದೆ” ಎಂದು ಅವರು ಪ್ರಶ್ನಿಸಿದರು.

ಕ್ಷೇತ್ರ ಮರುವಿಂಗಡಣಾ ಆಯೋಗದಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಸರ್ಕಾರ ನೇಮಿಸುವ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರು ಮತ್ತು ಆಯುಕ್ತರು ಆಯ್ಕೆ ಮಾಡುವ ಮತ್ತೊಬ್ಬ ಸದಸ್ಯರು ಇರುವುದರಿಂದ ಇಡೀ ಆಯೋಗವು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರ ಸಂಪೂರ್ಣ ನಿಯಂತ್ರಣದಲ್ಲಿರುತ್ತದೆ ಹಾಗೂ ಆಯೋಗದ ನಿರ್ಧಾರಗಳನ್ನು ನ್ಯಾಯಾಲಯದಲ್ಲೂ ಪ್ರಶ್ನಿಸಲು ಸಾಧ್ಯವಿಲ್ಲ ಎಂದು ದೂರಿದರು.

2027ರ ಜನಗಣತಿ ಮತ್ತು ಜಾತಿ ಗಣತಿಯ ಫಲಿತಾಂಶಗಳನ್ನು ಕಡೆಗಣಿಸಿ, 2011ರ ಹಳೆಯ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಮರುವಿಂಗಡಣೆ ಮಾಡುವ ಮೂಲಕ ಬಿಜೆಪಿಯು ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡ (ಎಸ್‌ಟಿ) ಮತ್ತು ಇತರ ಹಿಂದುಳಿದ ವರ್ಗಗಳ (ಒಬಿಸಿ) ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದರು.

ಇದರಿಂದ ಮುಂದಿನ 40 ವರ್ಷಗಳ ಕಾಲ ಸಾಮಾಜಿಕ ನ್ಯಾಯವನ್ನು ಮರೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದರು. ಈ ಮಸೂದೆಯು ದೇಶದ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದ್ದು, ಇಂಡಿಯಾ ಒಕ್ಕೂಟದ ಮಿತ್ರಪಕ್ಷಗಳು ಮಾತ್ರವಲ್ಲದೆ ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷದಂತಹ (ಟಿಡಿಪಿ) ಎನ್‌ಡಿಎ ಮಿತ್ರಪಕ್ಷಗಳೂ ಸಹ ಇದರ ಅಪಾಯವನ್ನು ಅರಿತು ಮಸೂದೆಯನ್ನು ವಿರೋಧಿಸಬೇಕು ಎಂದು ಮನವಿ ಮಾಡಿದರು.

ಮತ್ತೊಂದೆಡೆ, ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಸೋಮವಾರ ಕೇಂದ್ರ ಸರ್ಕಾರ ಮಂಡಿಸಲಿರುವ ಈ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಒಗ್ಗಟ್ಟಿನಿಂದ ವಿರೋಧಿಸಲು ಇಂಡಿಯಾ ಒಕ್ಕೂಟದ ನಾಯಕರು ನಿರ್ಧರಿಸಿದ್ದಾರೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳ ಸ್ಥಾನಗಳನ್ನು ಶೇ. 50ರಷ್ಟು ಹೆಚ್ಚಿಸುವ ಹಾಗೂ 2051ರವರೆಗೆ ಕ್ಷೇತ್ರಗಳ ಗಡಿಗಳನ್ನು ಸ್ಥಿರವಾಗಿರಿಸುವ ಪ್ರಸ್ತಾವನೆಯನ್ನು ಸರ್ಕಾರ ಹೊಂದಿದ್ದು, ಪ್ರಜಾಪ್ರಭುತ್ವವನ್ನು ಉಳಿಸಲು ಮತ್ತು ಸಂವಿಧಾನದ ಆಶಯಗಳನ್ನು ರಕ್ಷಿಸಲು ಯುವಜನತೆ ಎಚ್ಚೆತ್ತುಕೊಳ್ಳಬೇಕು ಎಂದು ರಾಹುಲ್ ಗಾಂಧಿ ಕರೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ |ಮಂಗನ ಕಾಯಿಲೆ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಹರ್ಷಲ್ ಬೊಯರ್

ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು,...

ಸಮಾನತೆ, ಕಾಯಕ-ದಾಸೋಹದ ತತ್ವಗಳಿಗೆ ಸಾಕ್ಷಿಯಾದ ನೆಲ ಬಸವಕಲ್ಯಾಣ

ಬಸವಕಲ್ಯಾಣ ಸಮಾನತೆ, ಕಾಯಕ ಮತ್ತು ದಾಸೋಹದ ತತ್ವಗಳನ್ನು ಸಾರುವ ಪವಿತ್ರ ಭೂಮಿಯಾಗಿದ್ದು,...

ಕಾರವಾರ |ಅರಣ್ಯದಲ್ಲಿ ಅಕ್ರಮ ಮದ್ಯ ಸಾಗಾಟ : 64 ಸಾವಿರ ಮೌಲ್ಯದ ಮದ್ಯ ಜಪ್ತಿ

ಮೈಂಗಿಣಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಗೋವಾ ರಾಜ್ಯದ ಮದ್ಯ ಸಾಗಾಟ ಮಾಡುತ್ತಿದ್ದ...

ಅಜಿತ್ ಪವಾರ್ ವಿಮಾನ ದುರಂತಕ್ಕೆ 10 ತಿಂಗಳು: ಇನ್ನೂ ಎಫ್‌ಐಆರ್ ಇಲ್ಲ, ತನಿಖೆಯೂ ಇಲ್ಲ: ರೋಹಿತ್ ಪವಾರ್ ಆಕ್ರೋಶ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ವಿಮಾನ ದುರಂತದಲ್ಲಿ ನಿಧನರಾಗಿ...