ಡಿಲಿಮಿಟೇಶನ್ | ಜೆಎಂಎಂ ನಿಲುವು ಅಸ್ಪಷ್ಟ; ‘ಇಂಡಿಯಾ’ ಮೈತ್ರಿಕೂಟಕ್ಕೆ ಮತ್ತೊಂದು ಆಘಾತ?

Date:

ಕ್ಷೇತ್ರ ಮರುವಿಂಗಡಣೆ ಮಸೂದೆ ವಿಚಾರದಲ್ಲಿ ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟಕ್ಕೆ ಮತ್ತೊಂದು ಹಿನ್ನಡೆಯಾಗುವ ಸಾಧ್ಯತೆ ಎದುರಾಗಿದೆ. ಡಿಎಂಕೆ ಮತ್ತು ಎನ್‌ಸಿಪಿ ಪಕ್ಷಗಳ ಬೆನ್ನಲ್ಲೇ, ಈಗ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಕೂಡ ಮೈತ್ರಿಕೂಟಕ್ಕಿಂತ ಭಿನ್ನವಾದ ಹಾದಿ ಹಿಡಿಯುವ ಸುಳಿವು ನೀಡಿದೆ. ಮಸೂದೆಯನ್ನು ವಿರೋಧಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಪಕ್ಷವು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಜೆಎಂಎಂ ಸಂಸದ ನಳಿನ್ ಸೊರೆನ್ ತಿಳಿಸಿದ್ದಾರೆ. ತಮ್ಮ ಪಕ್ಷದ ನಾಯಕ, ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಸೂಚನೆಗಾಗಿ ಕಾಯುತ್ತಿದ್ದು, ಮಸೂದೆ ಸದನದಲ್ಲಿ ಮಂಡನೆಯಾದ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಜೆಎಂಎಂ ತಲಾ ಮೂವರು ಸಂಸದರನ್ನು ಹೊಂದಿರುವುದರಿಂದ ಈ ನಡೆ ಮಹತ್ವ ಪಡೆದುಕೊಂಡಿದೆ.

- Advertisement -

ಈಗಾಗಲೇ, ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಬೆಂಬಲ ಘೋಷಿಸಿರುವ ಡಿಎಂಕೆ ಮತ್ತು ಎನ್‌ಸಿಪಿ (ಎಸ್‌ಪಿ) ಮನವೊಲಿಸಲು ಇಂಡಿಯಾ ಮೈತ್ರಿಕೂಟದ ಪ್ರಮುಖ ನಾಯಕರು ಚೆನ್ನೈಗೆ ದೌಡಾಯಿಸಿದ್ದಾರೆ. ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ, ಎಂ.ಎ. ಬೇಬಿ ಸೇರಿದಂತೆ ಹಲವು ನಾಯಕರು ಚೆನ್ನೈನ ಹೋಟೆಲ್‌ವೊಂದರಲ್ಲಿ ತಂಗಿದ್ದು, ಸಂಜೆ 4 ಗಂಟೆಗೆ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿಯಾಗಲಿದ್ದಾರೆ. ಮಸೂದೆಯನ್ನು ಬೆಂಬಲಿಸುವ ನಿರ್ಧಾರದಿಂದ ಹಿಂದೆ ಸರಿದು ಮೈತ್ರಿಕೂಟದೊಂದಿಗೆ ಒಗ್ಗಟ್ಟಾಗಿ ನಿಲ್ಲುವಂತೆ ಸ್ಟಾಲಿನ್ ಅವರಲ್ಲಿ ಮನವಿ ಮಾಡಲಿದ್ದಾರೆ. ಬಳಿಕ, ಮುಂಬೈಗೆ ತೆರಳಲಿದ್ದು, ಶರದ್ ಪವಾರ್ ಅವರನ್ನು ಭೇಟಿಯಾಗಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷೇತ್ರ ಮರುವಿಂಗಡಣೆಯ ಹಿಂದಿರುವ ಬಲಪಂಥೀಯ ರಾಜಕಾರಣದ ಗುಪ್ತ ಕಾರ್ಯಸೂಚಿ

ಕ್ಷೇತ್ರ ಮರುವಿಂಗಡಣೆ ಕೇವಲ ಲೋಕಸಭಾ ಸ್ಥಾನಗಳ ಹೆಚ್ಚಳವಲ್ಲ; ಅದು ದೇಶದ ರಾಜಕೀಯ ಅಧಿಕಾರದ ಹಂಚಿಕೆ, ಒಕ್ಕೂಟ ವ್ಯವಸ್ಥೆ ಮತ್ತು ಸಾಮಾಜಿಕ ನ್ಯಾಯದ ಭವಿಷ್ಯವನ್ನು ನಿರ್ಧರಿಸುವ ಪ್ರಕ್ರಿಯೆ. ಕ್ಷೇತ್ರಗಳ ಗಡಿ ಬದಲಾವಣೆಯಿಂದ ಅಹಿಂದ, ದಲಿತ,...

ಗುಳೇದಗುಡ್ಡ | ತಾಲೂಕಾಗಿ ಹತ್ತು ವರ್ಷ ಕಳೆದರೂ ಭೂ...

ಗುಳೇದಗುಡ್ಡ ತಾಲೂಕು ರಚೆನೆಯಾಗಿ ಹತ್ತು ವರ್ಷ ಕಳೆದಿದೆ. ತಾಲೂಕು ವ್ಯಾಪ್ತಿಯ ಪಟ್ಟಣ ಹಾಗೂ ಗ್ರಾಮಗಳಿಗೆ ಸಂಬಂಧಿಸಿದ ಭೂದಾಖಲೆಗಳು ಬಾದಾಮಿ ತಹಸೀಲ್ದಾರ್ ಕಚೇರಿ ಮತ್ತು ಗದಗ ರಸ್ತೆಯ ಎಪಿಎಂಸಿ ಸಮೀಪದ ಕಚೇರಿಯಲ್ಲಿ ಸಂಗ್ರಹವಾಗಿವೆ....

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

ಇದೆಲ್ಲದರ ನಡುವೆ, ರಾಹುಲ್ ಗಾಂಧಿ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಸ್ಟಾಲಿನ್, ರಾಹುಲ್ ಅವರನ್ನು ‘ಸಹೋದರ’ ಎಂದು ಸಂಬೋಧಿಸಿದ್ದರೂ, ತಮಿಳುನಾಡಿನ ಹಿತಾಸಕ್ತಿಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. ಅಲ್ಲದೆ, ತಾವು ದ್ರೋಹಿಗಳಲ್ಲ ಎಂದೂ ಅವರು ಹೇಳಿಕೊಂಡಿದ್ದಾರೆ.

ಏತನ್ಮಧ್ಯೆ, ಸದನದಲ್ಲಿ ಸಂಸದರ ಪಕ್ಷಾಂತರ ಅಥವಾ ಅಡ್ಡಮತದಾನವನ್ನು ತಡೆಯಲು ಪ್ರಮುಖ ವಿರೋಧ ಪಕ್ಷಗಳು ತಮ್ಮ ಸಂಸದರಿಗೆ ಕಟ್ಟುನಿಟ್ಟಿನ ವಿಪ್ ಜಾರಿಗೊಳಿಸಲು ಆರಂಭಿಸಿವೆ. ನವೆಂಬರ್ 30 ಹಾಗೂ ಡಿಸೆಂಬರ್ 1, 2 ಮತ್ತು 3 ರಂದು ಕಡ್ಡಾಯವಾಗಿ ಸದನದಲ್ಲಿ ಹಾಜರಿದ್ದು ಪಕ್ಷದ ನಿಲುವನ್ನು ಬೆಂಬಲಿಸುವಂತೆ ಕಾಂಗ್ರೆಸ್ ತನ್ನ ಸಂಸದರಿಗೆ ವಿಪ್ ನೀಡಿದೆ ಮತ್ತು ವಿದೇಶದಲ್ಲಿರುವ ಸಂಸದರಿಗೆ ತಕ್ಷಣವೇ ದೇಶಕ್ಕೆ ಮರಳುವಂತೆ ಸೂಚಿಸಿದೆ. ಸಮಾಜವಾದಿ ಪಕ್ಷ, ಶಿವಸೇನೆ (ಯುಟಿಬಿ) ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕೂಡ ತಮ್ಮ ಸಂಸದರಿಗೆ ವಿಪ್ ಜಾರಿ ಮಾಡಿವೆ. ಇದೇ ವೇಳೆ, ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ಲೋಕಸಭಾ ಸ್ಪೀಕರ್‌ಗೆ ಪತ್ರ ಬರೆದಿದ್ದು, ಪಕ್ಷ ತೊರೆದಿರುವ 20 ಸಂಸದರ ಅನರ್ಹತೆ ದೂರು ಇನ್ನೂ ವಿಚಾರಣೆಯ ಹಂತದಲ್ಲಿರುವುದರಿಂದ, ಆ ಬಗ್ಗೆ ನಿರ್ಧಾರವಾಗುವವರೆಗೆ ಅವರಿಗೆ ಸದನದಲ್ಲಿ ಮತದಾನದ ಹಕ್ಕು ನೀಡಬಾರದು ಎಂದು ಒತ್ತಾಯಿಸಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

850 ಸಂಸದರ ಲೋಕಸಭೆ: ಅನೇಕರು ಕೇವಲ ಚಪ್ಪಾಳೆ ತಟ್ಟಲು ಬರುತ್ತಾರಷ್ಟೇ; ಡಿಲಿಮಿಟೇಶನ್ ವಿರುದ್ಧ ಶಶಿ ತರೂರ್ ಕಿಡಿ

ಕೇಂದ್ರ ಸರ್ಕಾರದ ಉದ್ದೇಶಿತ ಕ್ಷೇತ್ರ ಪುನರ್ವಿಂಗಡಣೆ (ಡಿಲಿಮಿಟೇಶನ್) ಮಸೂದೆ ಹಿಂದಿರುವ ಬಿಜೆಪಿಯ...

ಭದ್ರಾವತಿ | ಅಪ್ರಾಪ್ತ ಬಾಲಕನನ್ನು ಬಳಸಿಕೊಂಡು ಚಿನ್ನಾಭರಣ ಕಳವು : ಕಳ್ಳನ ಬಂಧನ

ಅಪ್ರಾಪ್ತ ಬಾಲಕನನ್ನು ಬಳಸಿಕೊಂಡು ಕಳ್ಳತನ ಮಾಡುತ್ತಿದ್ದ 23 ವರ್ಷದ ಯುವಕನನ್ನು...

ಡಿಲಿಮಿಟೇಶನ್ | ‘ಸಹೋದರ’ ಸ್ಟಾಲಿನ್ ಮನವೊಲಿಕೆಗೆ ಮುಂದಾದ ರಾಹುಲ್ ಗಾಂಧಿ; ದೃಢ ನಿರ್ಧಾರ ಪ್ರಕಟಿಸಿದ ಡಿಎಂಕೆ ನಾಯಕ!

ಕೇಂದ್ರ ಸರ್ಕಾರದ ಪರಿಷ್ಕೃತ ಕ್ಷೇತ್ರ ಮರುವಿಂಗಡಣೆ (ಡಿಲಿಮಿಟೇಶನ್) ಮಸೂದೆಯನ್ನು ವಿರೋಧಿಸುವಂತೆ ಡಿಎಂಕೆ...