ನೇಪಾಳದಲ್ಲಿ ಜಲಪ್ರಳಯ: 77 ಈಶಾ ಫೌಂಡೇಶನ್‌ ಯಾತ್ರಿಗಳು ನಾಪತ್ತೆ; ತಂಡದಲ್ಲಿದ್ದ ಧಾರವಾಡ ಮೂಲದ ಯುವಕ

Date:

ಚೀನಾ-ನೇಪಾಳ ಗಡಿಯ ಗೈರಾಂಗ್‌ ಬಳಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಸಿಲುಕಿ, ಕೈಲಾಸ ಮಾನಸಸರೋವರ ಯಾತ್ರೆ ಮುಗಿಸಿ ಮರಳುತ್ತಿದ್ದ ಈಶಾ ಫೌಂಡೇಶನ್‌ನ 77 ಯಾತ್ರಿಗಳು ನಾಪತ್ತೆಯಾಗಿದ್ದಾರೆ. ಬುಧವಾರ ಗಡಿಯ ವಲಸೆ ಕಚೇರಿಯಲ್ಲಿದ್ದಾಗ ಏಕಾಏಕಿ ಅಪ್ಪಳಿಸಿದ ಪ್ರವಾಹದಿಂದಾಗಿ ಕಚೇರಿ ಕಟ್ಟಡ ಕೊಚ್ಚಿಹೋಗಿದ್ದು, ಯಾತ್ರಿಗಳ ಹಾಗೂ ಅಲ್ಲಿನ ಸಿಬ್ಬಂದಿಯ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ.

- Advertisement -

​ನಾಪತ್ತೆಯಾದವರಲ್ಲಿ ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ಧಾರವಾಡ ಮೂಲದ 39 ವರ್ಷದ ಶಿವಪ್ರಸಾದ್ ರಾಕೇಶ್ ನಾಯಕ ಕೂಡ ಸೇರಿದ್ದಾರೆ. ಈಶಾ ಫೌಂಡೇಶನ್‌ನ ‘ಎಸ್-3’ ತಂಡದಲ್ಲಿದ್ದ ಇವರು, ಬುಧವಾರ ಮುಂಜಾನೆ 3.30ರ ಸುಮಾರಿಗೆ ಕುಟುಂಬಸ್ಥರಿಗೆ ಕರೆ ಮಾಡಿ ತಾವು ಹಿಂದಿರುಗುತ್ತಿರುವುದಾಗಿ ತಿಳಿಸಿದ್ದರು. ಆ ಬಳಿಕ ಪ್ರವಾಹಕ್ಕೆ ಸಿಲುಕಿ ಸಂಪರ್ಕ ಕಳೆದುಕೊಂಡಿದ್ದು, ಆಸ್ಟ್ರೇಲಿಯಾದಲ್ಲಿರುವ ಪತ್ನಿ ಹಾಗೂ ಧಾರವಾಡದಲ್ಲಿರುವ ಅವರ ಕುಟುಂಬಸ್ಥರು ಪತ್ತೆಗಾಗಿ ಸರ್ಕಾರದ ನೆರವು ಕೋರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

​ಇದೇ ವೇಳೆ, ಪ್ರತ್ಯೇಕವಾಗಿ ಯಾತ್ರೆ ಕೈಗೊಂಡಿದ್ದ ಹಾವೇರಿ ಜಿಲ್ಲೆ ರಟ್ಟಿಹಳ್ಳಿಯ 6 ಕುಟುಂಬಗಳ 12 ಮಂದಿ ನೇಪಾಳದ ಪೋಖರಾದಲ್ಲಿ ಸುರಕ್ಷಿತವಾಗಿದ್ದಾರೆ. ಪೋಖರಾದಿಂದ ಕಾಠ್ಮಂಡುವಿಗೆ ತೆರಳುವಾಗ ಪ್ರವಾಹದ ಬಗ್ಗೆ ಸ್ಥಳೀಯರಿಂದ ಮುನ್ನೆಚ್ಚರಿಕೆ ಪಡೆದು ಮತ್ತೆ ಪೋಖರಾಕ್ಕೆ ಮರಳಿದ್ದಾಗಿ ಅವರು ವಿಡಿಯೊ ಸಂದೇಶದ ಮೂಲಕ ಸ್ಪಷ್ಟಪಡಿಸಿದ್ದಾರೆ. ಹೆದ್ದಾರಿ ಸಂಪರ್ಕ ಕಡಿತಗೊಂಡಿರುವುದರಿಂದ ಅವರು ಸದ್ಯ ಸುರಕ್ಷಿತವಾಗಿ ಅಲ್ಲೇ ಉಳಿದುಕೊಂಡಿದ್ದಾರೆ.

​ಈಶಾ ಫೌಂಡೇಶನ್‌ನಿಂದ ಈ ಬಾರಿ ಒಟ್ಟು 21 ತಂಡಗಳು ಕೈಲಾಸ ಯಾತ್ರೆ ಕೈಗೊಂಡಿದ್ದವು. ನಾಪತ್ತೆಯಾಗಿರುವ 77 ಮಂದಿಯ ತಂಡದಲ್ಲಿ ಅಮೆರಿಕ, ಕೆನಡಾ, ಆಸ್ಟ್ರೇಲಿಯಾ, ಬ್ರಿಟನ್ ಸೇರಿದಂತೆ ಹಲವು ದೇಶಗಳ ನಾಗರಿಕರಿದ್ದಾರೆ. ಈವರೆಗೆ 495 ಮಂದಿ ಸುರಕ್ಷಿತವಾಗಿ ಮರಳಿದ್ದು, 743 ಯಾತ್ರಿಗಳು ಟಿಬೆಟ್ ಹಾಗೂ 148 ಮಂದಿ ನೇಪಾಳದಲ್ಲಿ ಸುರಕ್ಷಿತವಾಗಿದ್ದಾರೆ ಎಂದು ಫೌಂಡೇಶನ್‌ ಸ್ಪಷ್ಟಪಡಿಸಿದೆ.

​ಪ್ರವಾಹದ ಭೀಕರತೆಗೆ ರಸ್ತೆ, ಸೇತುವೆ ಮತ್ತು ಸಂಪರ್ಕ ಜಾಲಗಳು ಸಂಪೂರ್ಣ ನಾಶವಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ತೀವ್ರ ಹಿನ್ನಡೆಯಾಗಿದೆ. ಈಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರು ಖುದ್ದಾಗಿ ಆ ಪ್ರದೇಶದಲ್ಲಿ ಬೀಡುಬಿಟ್ಟಿದ್ದು, ಅಧಿಕಾರಿಗಳು ಹಾಗೂ ತಮ್ಮ ಸ್ವಯಂಸೇವಕರ ತಂಡದೊಂದಿಗೆ ರಕ್ಷಣಾ ಕಾರ್ಯಾಚರಣೆಯ ಪ್ರಯತ್ನದಲ್ಲಿ ನಿರತರಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...