ಉತ್ತರ ಪ್ರದೇಶದಲ್ಲಿ ಜಲಪ್ರಳಯ: ಪ್ರವಾಹಕ್ಕೆ 56 ಮಂದಿ ಬಲಿ, ಸಾವಿರಕ್ಕೂ ಹೆಚ್ಚು ಮನೆಗಳು ಧ್ವಂಸ

Date:

ಉತ್ತರ ಪ್ರದೇಶದಲ್ಲಿ ಕಳೆದ 60 ಗಂಟೆಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಪ್ರವಾಹ ಉಂಟಾಗಿದೆ. ಕನಿಷ್ಠ 56 ಜನರು ಮೃತಪಟ್ಟಿದ್ದು, 46 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ನಿರಂತರವಾಗಿ ಆರ್ಭಟಿಸುತ್ತಿರುವ ಮಳೆ ಮತ್ತು ಪ್ರವಾಹಕ್ಕೆ ಪ್ರಾಣಿ-ಪಕ್ಷಿಗಳು ಮತ್ತು ಬೆಳೆಗಳು ಬಲಿಯಾಗಿದ್ದು, ಲಕ್ಷಾಂತರ ಜನರ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.

- Advertisement -

ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ದತ್ತಾಂಶದ ಪ್ರಕಾರ, ಮಳೆ ಸಂಬಂಧಿತ ಅವಘಡಗಳಲ್ಲಿ 107 ಜಾನುವಾರುಗಳು ಮೃತಪಟ್ಟಿದ್ದು, 1,021 ಮನೆಗಳು ಭಾಗಶಃ ಅಥವಾ ಸಂಪೂರ್ಣವಾಗಿ ಹಾನಿಗೊಳಗಾಗಿವೆ. ಸೀತಾಪುರ ಜಿಲ್ಲೆಯಲ್ಲಿ ಗರಿಷ್ಠ 7 ಜನರು ಪ್ರಾಣ ಕಳೆದುಕೊಂಡಿದ್ದರೆ, ಲಖಿಂಪುರ ಖೇರಿ, ಬಹ್ರೈಚ್ ಮತ್ತು ಬಲರಾಮಪುರ ಜಿಲ್ಲೆಗಳಲ್ಲಿ ತಲಾ 5 ಜನರು ಹಾಗೂ ಅಯೋಧ್ಯೆ ಮತ್ತು ಗೋರಖ್‌ಪುರದಲ್ಲಿ ತಲಾ 4 ಜನರು ಮೃತಪಟ್ಟಿದ್ದಾರೆ. ಹರ್ದೋಯ್, ಮೈನ್‌ಪುರಿ, ಶ್ರಾವಸ್ತಿ ಮತ್ತು ಬಾರಾಬಂಕಿ ಜಿಲ್ಲೆಗಳಲ್ಲಿ ಅನೇಕ ಜನರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಲಖನೌ ನಗರ ಒಂದರಲ್ಲೇ ಕೇವಲ 21 ಗಂಟೆಗಳಲ್ಲಿ 125.8 ಮಿ.ಮೀ ಮಳೆಯಾಗಿದೆ. ಫರೂಖಾಬಾದ್ ಜಿಲ್ಲೆಯಲ್ಲಿ ಸಾಧಾರಣ ಮಳೆಗಿಂತ 200 ಪಟ್ಟು ಹೆಚ್ಚು ಮಳೆಯಾಗಿದ್ದರೆ, ಕಾನ್ಪುರ ನಗರದಲ್ಲಿ 160 ಪಟ್ಟು ಹಾಗೂ ಕನ್ನೌಜ್, ಹರ್ದೋಯ್ ಮತ್ತು ಕಾನ್ಪುರ ದೇಹತ್ ಭಾಗಗಳಲ್ಲಿ 130 ಪಟ್ಟು ಅಧಿಕ ಮಳೆ ದಾಖಲಾಗಿದೆ. ಬಾಂದಾ, ಫತೇಗಢ್, ಬಹ್ರೈಚ್‌ನ ನಾನ್‌ಪಾರಾ ಮತ್ತು ಹರ್ದೋಯ್‌ಗಳಲ್ಲಿ ಸತತವಾಗಿ 200 ಮಿಮೀಗಿಂತಲೂ ಹೆಚ್ಚು ಮಳೆಯಾಗಿದ್ದು, ರಾಜ್ಯದ 63 ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ.

ಈ ಪ್ರಕೃತಿ ವಿಕೋಪಕ್ಕೆ ಕಾರಣ ಈಶಾನ್ಯ ಮಧ್ಯಪ್ರದೇಶ ಮತ್ತು ಉತ್ತರ ಛತ್ತೀಸ್‌ಗಢ ಪ್ರದೇಶದಲ್ಲಿ ಉಂಟಾದ ವಾಯುಭಾರ ಕುಸಿತ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಭೀಕರ ಪ್ರವಾಹವು ರಾಜ್ಯದಲ್ಲಿ ತೀವ್ರ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿದೆ. ಗಂಗಾ ಎಕ್ಸ್‌ಪ್ರೆಸ್‌ವೇ ನೀರಿನಲ್ಲಿ ಮುಳುಗಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಹಂಚಿಕೊಂಡಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ನದಿಗಳು ಎಕ್ಸ್‌ಪ್ರೆಸ್‌ವೇ ಮೇಲೆಯೇ ಹರಿಯುತ್ತಿವೆ, ಹೆಸರು ಬದಲಾಯಿಸುವ ಅಭ್ಯಾಸವಿರುವ ಸರ್ಕಾರ ಇದಕ್ಕೆ ‘ಗಂಗಾ ಎಕ್ಸ್‌ಪ್ರೆಸ್ ವಾಟರ್‌ವೇ’ ಎಂದು ಮರುನಾಮಕರಣ ಮಾಡಲಿ” ಎಂದು ವ್ಯಂಗ್ಯವಾಡಿದ್ದಾರೆ.

ಮತ್ತೊಂದೆಡೆ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರು, ಮಳೆ ಹಾಗೂ ನೈಸರ್ಗಿಕ ವಿಕೋಪದಿಂದ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ರಾಜ್ಯ ಸರ್ಕಾರ ತಕ್ಷಣವೇ ಎಲ್ಲ ರೀತಿಯ ಪರಿಹಾರ ಮತ್ತು ನೆರವು ಒದಗಿಸಬೇಕೆಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ...