‘ಸಮಾನ ಕೆಲಸಕ್ಕೆ ಸಮಾನ ವೇತನ’ಕ್ಕೆ ಆಗ್ರಹ; 11ನೇ ದಿನಕ್ಕೆ ಶಿಕ್ಷಕರ ಪ್ರತಿಭಟನೆ

Date:

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಿಗೆ ನೀಡಲಾಗುತ್ತಿರುವ ವೇತನದಲ್ಲಿನ ತಾರತಮ್ಯದ ವಿರುದ್ಧ ತಮಿಳುನಾಡಿನ ಶಾಲಾ ಶಿಕ್ಷಕರು ಬೀದಿಗಿಳಿದಿದ್ದಾರೆ. ‘ಸಮಾನ ಕೆಲಸಕ್ಕೆ ಸಮಾನ ವೇತನ’ ನೀಡಬೇಕೆಂದು ಅಗ್ರಹಿಸಿ ನಡೆಯುತ್ತಿರುವ ಶಿಕ್ಷಕರ ಹೋರಾಟವು 11ನೇ ದಿನಕ್ಕೆ ಕಾಲಿಟ್ಟಿದೆ.

- Advertisement -

ಈ ನಡುವೆ, ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಪ್ರತಿಭಟನಾನಿರತ ‘ಮಾಧ್ಯಮಿಕ ದರ್ಜೆಯ ಹಿರಿಯ ಶ್ರೇಣಿ ಶಿಕ್ಷಕರ ಸಂಘ’ದ (ಎಸ್‌ಎಸ್‌ಟಿಎ) ಮುಖಂಡರೊಂದಿಗೆ ಸಭೆ ನಡೆಸಿದ್ದಾರೆ. ಸಮಸ್ಯೆಯನ್ನು ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ. ಆದಾಗ್ಯೂ, ಪ್ರತಿಭಟನೆಯನ್ನು ಮುಂದುವರೆಸಿರುವ ಶಿಕ್ಷಕರು, “ಎರಡು ದಿನಗಳಲ್ಲಿ ಬೇಡಿಕೆಗಳನ್ನು ಈಡೇರಿಸಬೇಕು. ಮುಖ್ಯವಾಗಿ ‘ಸಮಾನ ಕೆಲಸಕ್ಕೆ ಸಮಾನ ವೇತನ’ದ ಬೇಡಿಕೆಯನ್ನು ಅನುಷ್ಠಾನಕ್ಕೆ ತರಬೇಕು. ಅಲ್ಲಿಯವರೆಗೂ ಪ್ರತಿಭಟನೆ ಮುಂದುವರೆಯುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಅರ್ಧವಾರ್ಷಿಕ ರಜೆಗಳು ಮುಗಿದಿದ್ದು, ಶಾಲೆಗಳು ತೆರೆದಿವೆ. ಶಿಕ್ಷಕರು ಪ್ರತಿಭಟನೆಯಲ್ಲಿದ್ದಾರೆ. 10,000 ಕ್ಕೂ ಹೆಚ್ಚು ಶಿಕ್ಷಕರು ಶಾಲೆಗಳಿಗೆ ಹಾಜರಾಗಲಿಲ್ಲ. ಸರ್ಕಾರವು ನಮ್ಮ ಬೇಡಿಕೆಯನ್ನು ತ್ವರಿತವಾಗಿ ಪೂರೈಸಬೇಕು. ಇಲ್ಲವಾದಲ್ಲಿ, ಶಾಲೆಗಳ ಕಾರ್ಯಾಚರಣೆಗೆ ತೊಡಲಾಗಲಿದೆ ಎಂದು ಶಿಕ್ಷಕರ ಸಂಘವು ಹೇಳಿದೆ.

ಶಿಕ್ಷಕರು ಹೇಳುವಂತೆ; 2009ರ ಜೂನ್‌ 1ಕ್ಕೂ ಮೊದಲ ನೇಮಕಕೊಂಡ ಮಾಧ್ಯಮಿಕ ಶ್ರೇಣಿಯ ಶಿಕ್ಷಕರಿಗೆ 8,370 ರೂ. ಮೂಲ ವೇತನವನ್ನು ನೀಡಲಾಗಿದೆ. ಆದರೆ, ಆ ಕಟ್‌-ಆಫ್‌ ದಿನ (2009ರ ಜೂನ್‌) ನಂತರ ನೇಮಕಗೊಂಡ ಶಿಕ್ಷಕರು ಎಲ್ಲ ಅರ್ಹತೆಗಳನ್ನು ಹೊಂದಿದ್ದರೂ, ಅವರಿಗೆ ಕೇವಲ 5,200 ರೂ. ಮಾತ್ರವೇ ನೀಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಮಾಧ್ಯಮಿಕ ಶ್ರೇಣಿಯ ಶಿಕ್ಷಕರಿಗೆ ಅತ್ಯಂತ ಕಡಿಮೆ ವೇತನ ನೀಡುವ ರಾಜ್ಯಗಳಲ್ಲಿ ತಮಿಳುನಾಡು ಕೂಡ ಒಂದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೀಪ್ಕೆ ಬಂಧನ ಬಳಿಕ, ಹೋರಾಟಕ್ಕೆ ಅಜಿಂಕ್ಯ ಶಿಂಧೆ ಉಸ್ತುವಾರಿ; ಯಾರು ಈ ಹೊಸ ನಾಯಕ?

ಗ್ಯಾನೇಶ್‌ ಕುಮಾರ್ ವಿರುದ್ಧದ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಿಜೆಪಿ ಸಂಸ್ಥಾಪಕ ಅಭಿಜಿತ್...