ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ದೆಹಲಿಯಲ್ಲಿ ಬ್ಯಾರಿಕೇಡ್ ಮುರಿದು ಎಎಪಿ ಪ್ರತಿಭಟನೆ, ನೂರಾರು ಕಾರ್ಯಕರ್ತರ ಬಂಧನ

Date:

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಆಮ್ ಆದ್ಮಿ ಪಾರ್ಟಿ (ಎಎಪಿ) ಹಾಗೂ ವಿವಿಧ ವಿಪಕ್ಷಗಳು ಮತ್ತು ವಿದ್ಯಾರ್ಥಿ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ನವದೆಹಲಿಯಲ್ಲಿ ತೀವ್ರ ಉದ್ವಿಗ್ನತೆಗೆ ಕಾರಣವಾಗಿದೆ.

- Advertisement -

ನವದೆಹಲಿಯ ಜಂತರ್ ಮಂತರ್ ಬಳಿ ಪ್ರತಿಭಟನೆ ನಡೆಸಲು ಪೋಲಿಸರು ಅನುಮತಿ ನೀಡಿರಲಿಲ್ಲ. ಆದರೆ ಇದು ಪ್ರತಿಭಟನೆಯ ಹಕ್ಕನ್ನು ಕಿತ್ತುಕೊಳ್ಳುವ ಯತ್ನ ಎಂದು ಹೇಳಿ ನೂರಾರು ಎಎಪಿ ಕಾರ್ಯಕರ್ತರು ಹಾಗೂ ನಾಯಕರು ಸ್ಥಳದಲ್ಲಿ ಜಮಾಯಿಸಿ ಧರಣಿ ನಡೆಸಿದರು. ಪ್ರತಿಭಟನಾಕಾರರು ಜಂತರ್ ಮಂತರ್ ಕಡೆಗೆ ತೆರಳದಂತೆ ದೆಹಲಿ ಪೊಲೀಸರು ಹಾಕಿದ್ದ ಬ್ಯಾರಿಕೇಡ್‌ಗಳನ್ನು ಮುರಿದು ಮುನ್ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ತೀವ್ರ ಸಂಘರ್ಷ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನೂ ಓದಿ: SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಪ್ರತಿಭಟನೆಯನ್ನು ನಿಯಂತ್ರಿಸಲು ದೆಹಲಿ ಪೊಲೀಸರು ಎಎಪಿ ನಾಯಕರಾದ ಅತಿಶಿ, ಸೌರಭ್ ಭಾರದ್ವಾಜ್, ಸಂಜೀವ್ ಝಾ ಸೇರಿದಂತೆ ಸುಮಾರು 700ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ವಶಕ್ಕೆ ಪಡೆದ ನಾಯಕರನ್ನು ಕರೆದೊಯ್ಯುತ್ತಿದ್ದ ಪೊಲೀಸ್ ಬಸ್‌ಗಳಿಗೆ ಅಡ್ಡಲಾಗಿ ಮಹಿಳಾ ಪ್ರತಿಭಟನಾಕಾರರು ಹಾಗೂ ಕಾರ್ಯಕರ್ತರು ಕುಳಿತು ಬಸ್‌ ಚಲಿಸದಂತೆ ತಡೆದರು. ಸೌರಭ್ ಭಾರದ್ವಾಜ್ ಅವರು ರಸ್ತೆಯಲ್ಲೇ ಮಲಗಿ ಪೊಲೀಸರ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು.

“ಮತದಾನದ ಹಕ್ಕನ್ನು ರಕ್ಷಿಸಲು ಮತ್ತು ವೋಟ್ ಚೋರಿ (ಮತ ಕಳವು) ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ. ಗ್ಯಾನೇಶ್ ಕುಮಾರ್ ಅವರು ತಕ್ಷಣವೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು” ಎಂದು ವಶಕ್ಕೆ ಒಳಗಾದ ಬಳಿಕ ಎಎಪಿ ನಾಯಕಿ ಅತಿಶಿ ಆಗ್ರಹಿಸಿದರು.

ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಜೀವ್ ಚೌಕ್, ಸೆಂಟ್ರಲ್ ಸೆಕ್ರೆಟರಿಯೇಟ್ ಮತ್ತು ಜನಪಥ್ ಸೇರಿದಂತೆ ಸುಮಾರು 12 ಪ್ರಮುಖ ದೆಹಲಿ ಮೆಟ್ರೋ ನಿಲ್ದಾಣಗಳ ಪ್ರವೇಶ ಹಾಗೂ ನಿರ್ಗಮನ ದ್ವಾರಗಳನ್ನು ಮುಚ್ಚಲಾಗಿತ್ತು. ಜೊತೆಗೆ ಸೆಂಟ್ರಲ್ ದೆಹಲಿ ವ್ಯಾಪ್ತಿಯಲ್ಲಿ ಇಂಟರ್ನೆಟ್ ಸೇವೆಗಳನ್ನು ಕಡಿತಗೊಳಿಸಲಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಶರತ್ತುಗಳು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ತೆರೆಯುವುದಿಲ್ಲ: ಇರಾನ್ ಸ್ಪಷ್ಟನೆ

ತನ್ನ ಎಲ್ಲ ಶರತ್ತುಗಳು ಸಂಪೂರ್ಣವಾಗಿ ಈಡೇರುವವರೆಗೆ ಜಾಗತಿಕ ತೈಲ ಮತ್ತು ಅನಿಲ...

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...