ಝುಬಿನ್ ಗರ್ಗ್‌ಗೆ ನ್ಯಾಯಕ್ಕಾಗಿ ಆಗ್ರಹ: ನೂರಕ್ಕೂ ಹೆಚ್ಚು ಪ್ರತಿಭಟನಾಕಾರರು ಅಸ್ಸಾಂ ಪೊಲೀಸ್ ವಶಕ್ಕೆ

Date:

ಅಸ್ಸಾಂನ ಪ್ರಸಿದ್ಧ ಸಾಂಸ್ಕೃತಿಕ ಪ್ರತಿಭೆ, ಗಾಯಕ ಝುಬಿನ್ ಗರ್ಗ್ ಅವರ ಸಾವಿಗೆ ಸಂಬಂಧಿಸಿದಂತೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ರಾಜ್ಯ ರಾಜಧಾನಿ ಗುವಾಹಟಿಯ ಡಿಸ್ಪುರ್ ಪ್ರದೇಶದಲ್ಲಿ ಭುಗಿಲೆದ್ದ ಪ್ರತಿಭಟನೆಯ ವೇಳೆ ಅಸ್ಸಾಂ ಪೊಲೀಸರು ನೂರಕ್ಕೂ ಹೆಚ್ಚು (ಸುಮಾರು 150) ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.

- Advertisement -

ಜುಬಿನ್ ಗರ್ಗ್ ಅಸ್ಸಾಂನ ಅತ್ಯಂತ ಜನಪ್ರಿಯ ಗಾಯಕ, ಸಂಗೀತ ನಿರ್ದೇಶಕ, ನಟ ಮತ್ತು ಸಾಂಸ್ಕೃತಿಕ ಐಕಾನ್ ಆಗಿದ್ದರು. ಬಾಲಿವುಡ್‌ನ ಚಲನಚಿತ್ರಗಳಲ್ಲೂ ತಮ್ಮ ಮಧುರ ಧ್ವನಿಯಿಂದ ದೇಶಾದ್ಯಂತ ಖ್ಯಾತಿ ಗಳಿಸಿದ್ದ ಅವರು, ಅಸ್ಸಾಂ ಜನತೆಯ ಪಾಲಿಗೆ ಸಾಂಸ್ಕೃತಿಕ ಹೆಮ್ಮೆಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಉತ್ತರ ಕನ್ನಡ: ಹಾಲಕ್ಕಿಗಳ ಹಾಡು-ಪಾಡು ಮತ್ತು ಮರೀಚಿಕೆಯಾದ ಮೀಸಲಾತಿ

ಹಾಲಕ್ಕಿಗಳಿಗೆ ಪರಿಶಿಷ್ಟ ಪಂಗಡ ಮೀಸಲಾತಿ ಮರೀಚಿಕೆ ಆಗುತ್ತಿದೆ. ಮೀಲಾತಿ ಕೊಡಿಸುವ ಬಣ್ಣ-ಬಣ್ಣದ ಮಾತುಗಳಿಂದ ಹಾಲಕ್ಕಿಗಳ ಮತ ದೋಚಿ ಗೆದ್ದವರು ಕೃತಘ್ನರಾಗಿದ್ದಾರೆ. ಎಸ್ಟಿ ಮೀಸಲಾತಿ ಸೌಲಭ್ಯ ಅಷ್ಟು ಸುಲಭಕ್ಕೆ ಹಾಕ್ಕಿಗಳಿಗೆ ದಕ್ಕಲು ಪ್ರಬಲ ಮೇಲ್ವರ್ಗದ...

ಇದನ್ನೂ ಓದಿ: ಅಸ್ಸಾಂ | ಝುಬಿನ್ ಗರ್ಗ್‌ರಂತೆ ಕಾಂಗ್ರೆಸ್ ಜನರನ್ನು ಒಗ್ಗೂಡಿಸಲು ಕೆಲಸ ಮಾಡುತ್ತದೆ: ರಾಹುಲ್ ಗಾಂಧಿ

ಝುಬಿನ್ ಗರ್ಗ್ ಅವರು ಸಿಂಗಾಪುರದಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ತೆರಳಿದ್ದಾಗ, ಅಲ್ಲಿ ಸಮುದ್ರದಲ್ಲಿ ಈಜುವಾಗ ನಿಗೂಢವಾಗಿ ಮೃತಪಟ್ಟಿದ್ದರು. ಸಿಂಗಾಪುರ ಪೊಲೀಸರು ಇದು ಸಹಜ ಸಾವು ಎಂದು ಪ್ರಾಥಮಿಕ ವರದಿಯಲ್ಲಿ ತಿಳಿಸಿದ್ದರೂ, ಅಸ್ಸಾಂನಲ್ಲಿರುವ ಅವರ ಅಭಿಮಾನಿಗಳು ಮತ್ತು ಸಾರ್ವಜನಿಕರು ಇದು ಕೇವಲ ಸಾವಲ್ಲ, ಇದರ ಹಿಂದೆ ದೊಡ್ಡ ಷಡ್ಯಂತ್ರವಿದೆ ಎಂದು ಆರೋಪಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಸಂದೀಪನ್ ಗರ್ಗ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಮತ್ತು ಪ್ರಕರಣದ ತನಿಖೆ ತೀವ್ರಗೊಳಿಸಬೇಕೆಂದು ಒತ್ತಾಯಿಸಿ ಅಸ್ಸಾಂನ ವಿವಿಧ ಸಂಘಟನೆಗಳು ಹಾಗೂ ಅಭಿಮಾನಿಗಳು ಡಿಸ್ಪುರ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ ಉಗ್ರ ಪ್ರತಿಭಟನೆ ನಡೆಸಿದರು. ಅಸ್ಸಾಂ ಪೊಲೀಸರು ಸ್ಥಳದಲ್ಲೇ ನೂರಾರು ಪ್ರತಿಭಟನಾಕಾರರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಚನ ಕಲ್ಯಾಣ | ಕೂಡಲಸಂಗಮದೇವಾ, ಮರಣವೆ ಮಹಾನವಮಿ!

ಜೋಳವಾಳಿಯಾನಲ್ಲ, ವೇಳೆವಾಳಿಯವ ನಾನಯ್ಯಾ. ಹಾಳುಗೆಟ್ಟೋಡುವ ಆಳು ನಾನಲ್ಲವಯ್ಯಾ. ಕೇಳು, ಕೂಡಲಸಂಗಮದೇವಾ, ಮರಣವೆ...

ಉತ್ತರ ಕನ್ನಡ: ಹಾಲಕ್ಕಿಗಳ ಹಾಡು-ಪಾಡು ಮತ್ತು ಮರೀಚಿಕೆಯಾದ ಮೀಸಲಾತಿ

ಹಾಲಕ್ಕಿಗಳಿಗೆ ಪರಿಶಿಷ್ಟ ಪಂಗಡ ಮೀಸಲಾತಿ ಮರೀಚಿಕೆ ಆಗುತ್ತಿದೆ. ಮೀಲಾತಿ ಕೊಡಿಸುವ ಬಣ್ಣ-ಬಣ್ಣದ...

ರಸ್ತೆ ತಡೆದು ಪೂಜಾ ಪೆಂಡಾಲ್ ಹಾಕುವಂತಿಲ್ಲ: ಒಡಿಶಾ ಹೈಕೋರ್ಟ್ ಆದೇಶ

ಸಾರ್ವಜನಿಕ ರಸ್ತೆಗಳಲ್ಲಿ ಹಬ್ಬದ ಪೂಜಾ ಪೆಂಡಾಲ್‌ಗಳ ನಿರ್ಮಾಣ ಮತ್ತು ರಸ್ತೆ ಬಂದ್...

ತಮಿಳುನಾಡು | 150 ದಿನ ಉದ್ಯೋಗ ಖಾತರಿ; ಬಡ ಕುಟುಂಬಗಳಿಗೆ ಹೆಚ್ಚುವರಿ ಉದ್ಯೋಗ ಭಾಗ್ಯ

ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಉದ್ಯೋಗ ಖಾತರಿ ಅವಧಿಯನ್ನು 150 ದಿನಗಳಿಗೆ...