‘ಸೀಸೆಯಿಂದ ಹೊರಬಂದ ಭೂತ’: ಕೋರ್ಟ್ ಕಲಾಪಗಳ ವಿಡಿಯೊ ಹಂಚಿಕೆಗೆ ಸುಪ್ರೀಂ ತಡೆ

Date:

ನ್ಯಾಯಾಲಯದ ಕಲಾಪಗಳ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅನಿಯಂತ್ರಿತವಾಗಿ ಹಂಚಿಕೊಳ್ಳುವುದನ್ನು ‘ಸೀಸೆಯಿಂದ ಹೊರಬಂದ ಭೂತ’ ಎಂದು ಬಣ್ಣಿಸಿರುವ ಸುಪ್ರೀಂ ಕೋರ್ಟ್, ಪೂರ್ವಾನುಮತಿ ಇಲ್ಲದೆ ಇಂತಹ ವಿಡಿಯೊ ಹಾಗೂ ಆಡಿಯೊಗಳನ್ನು ಪೋಸ್ಟ್ ಮಾಡುವುದಕ್ಕೆ ತಡೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಯಮಾಲ್ಯ ಬಾಗ್ಚಿ ಹಾಗೂ ವಿ. ಮೋಹನ್ ಅವರಿದ್ದ ಪೀಠವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿ ಈ ಮಧ್ಯಂತರ ಆದೇಶ ಹೊರಡಿಸಿದೆ.

- Advertisement -

ಸಂಬಂಧಪಟ್ಟ ಹೈಕೋರ್ಟ್‌ಗಳ ರಿಜಿಸ್ಟ್ರಾರ್ ಜನರಲ್ ಅಥವಾ ಸುಪ್ರೀಂ ಕೋರ್ಟ್‌ನ ಕಾರ್ಯದರ್ಶಿ ಜನರಲ್ ಅವರ ಅನುಮತಿ ಇಲ್ಲದೆ ಕಲಾಪದ ವಿಡಿಯೊಗಳನ್ನು ಮಾರ್ಪಡಿಸುವುದು, ಹಂಚಿಕೊಳ್ಳುವುದು, ಅಪ್‌ಲೋಡ್ ಮಾಡುವುದು ಅಥವಾ ಅದರಿಂದ ಹಣ ಗಳಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆದರೆ, ಈ ಆದೇಶವು ಮಾಧ್ಯಮಗಳ ನಿಯಮಿತ ಸುದ್ದಿ ವರದಿಗೆ ಅನ್ವಯಿಸುವುದಿಲ್ಲ ಮತ್ತು ಇದು ಮಾಧ್ಯಮಗಳ ಮೇಲಿನ ನಿರ್ಬಂಧವಲ್ಲ ಎಂದೂ ಪೀಠ ಸ್ಪಷ್ಟಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ನ್ಯಾಯಾಲಯಗಳು ’24/7 ಮನರಂಜನಾ ಚಾನೆಲ್’ ಆಗಲು ಸಾಧ್ಯವಿಲ್ಲ ಎಂದು ಆತಂಕ ವ್ಯಕ್ತಪಡಿಸಿದ ಪೀಠ, ಕಲಾಪದ ತುಣುಕುಗಳನ್ನು ಸಂದರ್ಭಕ್ಕೆ ಹೊರತಾಗಿ ಹಂಚಿಕೊಳ್ಳುವುದರಿಂದ ನ್ಯಾಯಾಂಗದ ಘನತೆಗೆ ಧಕ್ಕೆಯಾಗುತ್ತಿದೆ ಎಂದಿದೆ. ವರ್ಚುವಲ್ ವಿಚಾರಣೆಯ ಲಿಂಕ್‌ಗಳನ್ನು ಇಷ್ಟಬಂದಂತೆ ಹಂಚಿಕೊಳ್ಳುವುದಕ್ಕೂ ನಿಯಂತ್ರಣದ ಅಗತ್ಯವಿದೆ ಎಂದು ನ್ಯಾಯಮೂರ್ತಿ ಬಾಗ್ಚಿ ಹೇಳಿದರು. ಇಷ್ಟೇ ಅಲ್ಲದೆ, ವಿಡಿಯೊ ಹಂಚಿಕೆ ಕುರಿತು ಮೆಟಾ ಹಾಗೂ ‘ಎಕ್ಸ್’ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ.

ವಿಚಾರಣೆ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿ, ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ನ್ಯಾಯಾಧೀಶರು ಹಾಗೂ ವಕೀಲರ ಮಾತುಗಳನ್ನು ತಿಚಿ ಹಂಚಿಕೊಳ್ಳುವ ಅಪಾಯವಿದೆ ಎಂದರು. ಅರ್ಜಿದಾರರ ಪರ ವಾದಿಸಿದ ವಕೀಲ ವಿಕಾಸ್ ಸಿಂಗ್, ಇತ್ತೀಚೆಗೆ ಕೋರ್ಟ್‌ನಲ್ಲಿ ನಡೆದ ಅಸಭ್ಯ ವರ್ತನೆಯ ವಿಡಿಯೊ ವೈರಲ್ ಆಗಿರುವುದನ್ನು ಉಲ್ಲೇಖಿಸಿ, ನ್ಯಾಯಾಲಯದ ಸಭಾಂಗಣದಲ್ಲಿ ನಡೆಯುವ ಘಟನೆಗಳನ್ನು ಲಘುವಾಗಿ ಬಿಂಬಿಸಲಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ತಮ್ಮ ಮಾತುಗಳನ್ನು ಮಾಧ್ಯಮಗಳು ತಪ್ಪಾಗಿ ನಿರೂಪಿಸುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಿಜೆಐ ಸೂರ್ಯ ಕಾಂತ್, ಜುಲೈ 20ರ ಪೋಲಿಸ್ ಕಾರ್ಯಾಚರಣೆ ವಿರುದ್ಧದ ಅರ್ಜಿಯ ತುರ್ತು ವಿಚಾರಣೆಯನ್ನು ನಿರಾಕರಿಸಲಾಗಿದೆ ಎಂಬ ವರದಿಗಳು ಸಂಪೂರ್ಣ ಸುಳ್ಳು ಎಂದರು. ನ್ಯಾಯಾಲಯಕ್ಕೆ ಯಾವುದೇ ಅಧಿಕೃತ ಅರ್ಜಿ ಸಲ್ಲಿಕೆಯಾಗದಿದ್ದರೂ, ಕೇವಲ ಪತ್ರ ಅಥವಾ ಮನವಿಯನ್ನು ಇಟ್ಟುಕೊಂಡು ಮಾಧ್ಯಮಗಳು ಬೇಜವಾಬ್ದಾರಿಯಿಂದ ಸುಳ್ಳು ಸುದ್ದಿ ಪ್ರಸಾರ ಮಾಡಿವೆ ಎಂದು ಅವರು ಖಂಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...