ಊಟ ನೀಡಿಲ್ಲವೆಂದು ಹೋಟೆಲ್‌ಗೆ ಟ್ರಕ್ ನುಗ್ಗಿಸಿದ ಪಾನಮತ್ತ ಚಾಲಕ: ವಿಡಿಯೋ ವೈರಲ್

Date:

ವ್ಯಕ್ತಿಯೋರ್ವನಿಗೆ ಪುಣೆಯ ಹೋಟೆಲ್‌ವೊಂದರಲ್ಲಿ ಊಟ ನೀಡಲು ನಿರಾಕರಿಸಲಾಗಿದ್ದು ಅದರಿಂದ ಪಾನಮತ್ತ ಚಾಲಕ ಹೋಟೆಲ್‌ಗೆ ಟ್ರಕ್ ನುಗ್ಗಿಸಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.

- Advertisement -

ಹಿಂಗಂಗಾವ್‌ನ ಹೋಟೆಲ್ ಗೋಕುಲ್ ಬಳಿ ನಿಂತಿದ್ದ ಕೆಲವು ಜನರು ಈ ಘಟನೆಯ ವಿಡಿಯೋವನ್ನು ಮಾಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಹಿಂಗಂಗಾವ್‌ನ ಹೋಟೆಲ್ ಗೋಕುಲ್ ಬಳಿ ನಿಂತಿದ್ದ ಕೆಲವು ಜನರು ಈ ಘಟನೆಯ ವಿಡಿಯೋವನ್ನು ಮಾಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಪಾನಮತ್ತ ಚಾಲಕ ಪದೇ ಪದೇ ತನ್ನ ಟ್ರಕ್‌ ಅನ್ನು ಹೊಟೇಲ್‌ ಕಟ್ಟಡಕ್ಕೆ ನುಗ್ಗಿಸುತ್ತಿರುವುದು ಕಾಣಬಹುದು. ಹೋಟೆಲ್‌ಗೆ ಹಾನಿ ಮಾಡಿರುವುದು ಮಾತ್ರವಲ್ಲದೇ ಈ ಟ್ರಕ್ ಚಾಲಕ ಹೋಟೆಲ್ ಹೊರಗೆ ನಿಲ್ಲಸಿದ್ದ ಕಾರಿಗೂ ಡಿಕ್ಕಿ ಹೊಡೆದಿದ್ದಾರೆ.

ವರದಿಗಳ ಪ್ರಕಾರ, ಚಾಲಕ ಸೊಲ್ಲಾಪುರದಿಂದ ಪುಣೆಗೆ ಪ್ರಯಾಣಿಸುತ್ತಿದ್ದು ಹೋಟೆಲ್ ಗೋಕುಲ್‌ನಲ್ಲಿ ನಿಲ್ಲಿಸಿ ಹೋಟೆಲ್ ಒಳಗೆ ಹೋಗಿ ಆಹಾರವನ್ನು ಕೇಳಿದ್ದ.

ಇದನ್ನು ಓದಿದ್ದೀರಾ? ಬೆಂಗಳೂರು | ಮಹಿಳೆ ಮೇಲೆ ಆಟೋ ಚಾಲಕನಿಂದ ಹಲ್ಲೆ; ವಿಡಿಯೋ ವೈರಲ್

ಆದರೆ ಹೋಟೆಲ್ ಮಾಲೀಕರು ಊಟ ಕೊಡಲು ನಿರಾಕರಿಸಿದ್ದರಿಂದ ಆಕ್ರೋಶಗೊಂಡ ಚಾಲಕ ತನ್ನ ಲಾರಿಯಲ್ಲಿ ಕುಳಿತು ಹೋಟೆಲ್ ಕಟ್ಟಡಕ್ಕೆ ಹಾನಿ ಮಾಡಿದ್ದಾನೆ.

ಚಾಲಕನನ್ನು ತಡೆಯಲು ಕೆಲವರು ಟ್ರಕ್‌ಗೆ ಕಲ್ಲು ತೂರಾಟ ಮಾಡುತ್ತಿರುವುದು ಕೂಡಾ ವಿಡಿಯೋದಲ್ಲಿ ನೋಡಬಹುದು. ಟ್ರಕ್‌ನ ಚಕ್ರವು ಸಿಲುಕಿ ಟ್ರಕ್ ಅಲ್ಲಾಡದಿದ್ದಾಗ ಕೊನೆಗೆ ಚಾಲಕ ಹೋಟೆಲ್‌ಗೆ ಹಾನಿ ಮಾಡುವುದನ್ನು ನಿಲ್ಲಿಸಿದ್ದಾನೆ.

ಪೊಲೀಸರು ಆತನನ್ನು ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಚಾಲಕ ಪಾನಮತ್ತನಾಗಿದ್ದ ಕಾರಣ ಹೋಟೆಲ್‌ನಲ್ಲಿ ಊಟ ನೀಡಲು ನಿರಾಕರಿಸಲಾಗಿದೆಯೇ ಅಥವಾ ಬೇರೆ ಯಾವುದಾದರೂ ಕಾರಣವಿದೆಯೇ ಎಂಬುದು ತಿಳಿದುಬಂದಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...