ಉತ್ತರ ಭಾರತದಲ್ಲಿ ದಟ್ಟವಾದ ಮಂಜು: ದೆಹಲಿಯಲ್ಲಿ 150 ವಿಮಾನಗಳು ವಿಳಂಬ

Date:

ಇಂದು ಬೆಳಗ್ಗೆ ದೆಹಲಿ ಹಾಗೂ ಉತ್ತರ ಭಾರತದಲ್ಲಿ ದಟ್ಟವಾದ ಮಂಜು ಆವರಿಸಿದ ಪರಿಣಾಮ ದೆಹಲಿಯಲ್ಲಿ 150 ಕ್ಕೂ ಹೆಚ್ಚು ವಿಮಾನಗಳು ಮತ್ತು ಸುಮಾರು 26 ರೈಲುಗಳ ಸಂಚಾರದಲ್ಲಿ ವಿಳಂಬವಾಗಿದೆ. ವಿಮಾನದ ವಿಳಂಬಗಳು ಸರಾಸರಿ 41 ನಿಮಿಷಗಳು ತಡವಾಗಿದೆ ಎಂದು ವಿಮಾನಯಾನ ವೆಬ್‌ಸೈಟ್ ಫ್ಲೈಟ್ ರಾಡಾರ್ 24 ಹೇಳಿದೆ.

- Advertisement -

ಭಾರತೀಯ ಹವಾಮಾನ ಇಲಾಖೆಯು ಪಂಜಾಬ್, ಹರಿಯಾಣ ಮತ್ತು ರಾಜಸ್ಥಾನ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ದಟ್ಟವಾದ ಮಂಜು ಉಂಟಾಗಬಹುದು ಎಂಬ ಎಚ್ಚರಿಕೆಯನ್ನು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಉತ್ತರ ಭಾರತದಲ್ಲಿ ಕಳೆದ ಕೆಲವು ವಾರಗಳಲ್ಲಿ ದಟ್ಟ ಮಂಜಿನಿಂದಾಗಿ ನೂರಾರು ವಿಮಾನಗಳು ಮತ್ತು ರೈಲುಗಳು ರದ್ದುಗೊಂಡಿವೆ ಅಥವಾ ವಿಳಂಬವಾಗಿವೆ ಎಂದು ವರದಿಗಳು ತಿಳಿಸಿವೆ.

ದೆಹಲಿಯಲ್ಲಿ ವಾಯು ಗುಣಮಟ್ಟ ಸೂಚ್ಯಂಕವು(ಎಕ್ಯೂಐ) ಬೆಳಿಗ್ಗೆ 6 ಗಂಟೆ ಸುಮಾರಿಗೆ 408 ಕ್ಕೆ ದಾಖಲಾಗಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ವೆಬ್‌ಸೈಟ್‌ನಲ್ಲಿನ ಮಾಹಿತಿಯ ಪ್ರಕಾರ, ‘ಅತ್ಯಂತ ಕಳಪೆ’ ಯಿಂದ ಅತ್ಯಂತ ಹೆಚ್ಚು ಕಳಪೆ ವರ್ಗಕ್ಕೆ ಇಳಿದಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿಕಾರದ ಹಗ್ಗ ಜಗ್ಗಾಟ, ಹಳಿ ತಪ್ಪುತ್ತಿರುವ ಆಡಳಿತ, ಭ್ರಮನಿರಸನಗೊಂಡ ಜನ

ಶೂನ್ಯ ಮತ್ತು 50 ರ ನಡುವಿನ ಎಕ್ಯೂಐ ಅನ್ನು ‘ಉತ್ತಮ’, 51 ರಿಂದ 100 ‘ತೃಪ್ತಿದಾಯಕ’, 101 ರಿಂದ 200 ‘ಮಧ್ಯಮ’, 201 ರಿಂದ 300 ‘ಕಳಪೆ’, 301 ರಿಂದ 400 ‘ಅತ್ಯಂತ ಕಳಪೆ’ ಮತ್ತು 401 ರಿಂದ 500 ಅನ್ನು ‘ತೀವ್ರ ಕಳಪೆ’ ಎಂದು ಪರಿಗಣಿಸಲಾಗುತ್ತದೆ.

ಹವಾಮಾನ ಇಲಾಖೆ ಪ್ರಕಾರ, ದೆಹಲಿಯ ಕನಿಷ್ಠ ತಾಪಮಾನ 9.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಶುಕ್ರವಾರ ರಾಜಧಾನಿಯ ಗರಿಷ್ಠ ಮತ್ತು ಕನಿಷ್ಠ ತಾಪಮಾನವು 6 ರಿಂದ 20 ಡಿಗ್ರಿ ಸೆಲ್ಸಿಯಸ್ ನಡುವೆ ಇರುತ್ತದೆ ಎಂದು ಹವಾಮಾನ ಸಂಸ್ಥೆ ತಿಳಿಸಿದೆ.

ಮುಂದಿನ ಎರಡು ವಾರಗಳಲ್ಲಿ ಭಾರತದಲ್ಲಿ ಹವಾಮಾನವು ಗಮನಾರ್ಹವಾಗಿ ಬದಲಾಗುವ ನಿರೀಕ್ಷೆಯಿರುವುದರಿಂದ ದೆಹಲಿ-ಎನ್‌ಸಿಆರ್ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಮಳೆಯಾಗುವುದಾಗಿ ಐಎಂಡಿ ಮುನ್ಸೂಚನೆ ನೀಡಿದೆ. ಹಲವು ಪ್ರದೇಶಗಳಲ್ಲಿ ಗುಡುಗುಸಹಿತ ಬಿರುಗಾಳಿ ಮತ್ತು ಆಲಿಕಲ್ಲು ಮಳೆಯ ಮುನ್ಸೂಚನೆ ನೀಡಲಾಗಿದೆ.

ರಾತ್ರಿಯ ಉಷ್ಣತೆಯು ಗಣನೀಯವಾಗಿ ಕಡಿಮೆಯಾದ ಕಾರಣ ಉತ್ತರ ಭಾರತದ ಬಹುತೇಕ ಭಾಗಗಳಲ್ಲಿ ಚಳಿಯು ತೀವ್ರಗೊಂಡಿದೆ. ಕಾಶ್ಮೀರದಲ್ಲಿ ತಾಪಮಾನವು ಶೂನ್ಯ ಡಿಗ್ರಿಗಿಂತ ಕಡಿಮೆಯಾಗಿದೆ. ರಾಜಸ್ಥಾನ ಮತ್ತು ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಶೂನ್ಯ ಡಿಗ್ರಿ ದಾಖಲಾಗಿದೆ.

ಹಿಮಾಚಲ ಪ್ರದೇಶ, ಪಂಜಾಬ್, ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಶೀತ ಗಾಳಿ ಬೀಸುವ ಬಗ್ಗೆ ಐಎಂಡಿ ಮುನ್ಸೂಚನೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...