ಕೆನಡಾದಿಂದ 4,526 ಭಾರತೀಯರ ಗಡೀಪಾರು: ವರ್ಷವೊಂದರಲ್ಲಿ ಸಾರ್ವಕಾಲಿಕ ದಾಖಲೆ ಎಂದ CBSA

Date:

ಕೆನಡಾ ಸರ್ಕಾರವು ತನ್ನ ವಲಸೆ ನಿಯಮಗಳನ್ನು ಬಿಗಿಗೊಳಿಸುತ್ತಿದ್ದು, ದೇಶದಲ್ಲಿ ಕಾನೂನುಬಾಹಿರವಾಗಿ ನೆಲೆಸಿದ್ದವರ ವಿರುದ್ಧ ಕಠಿಣ ಕ್ರಮ ಮುಂದುವರಿಸಿದೆ. 2026ರ ಜನವರಿಯಿಂದ ಸೆಪ್ಟೆಂಬರ್ 30ರವರೆಗಿನ ಅವಧಿಯಲ್ಲಿ ಒಟ್ಟು 4,526 ಭಾರತೀಯ ಪ್ರಜೆಗಳನ್ನು ಕೆನಡಾದಿಂದ ನಿರ್ಗಮಿಸುವಂತೆ (ಉಚ್ಚಾಟನೆ/ಗಡೀಪಾರು) ಮಾಡಲಾಗಿದೆ ಎಂದು ಕೆನಡಾದ ಗಡಿ ಸೇವೆಗಳ ಸಂಸ್ಥೆ (CBSA) ಬಹಿರಂಗಪಡಿಸಿದೆ. ವರ್ಷವೊಂದರಲ್ಲಿ ಕೆನಡಾದಿಂದ ನಿರ್ಗಮಿಸಿದ ಭಾರತೀಯ ಪ್ರಜೆಗಳ ಸಂಖ್ಯೆಯಲ್ಲಿ ಇದು ಸಾರ್ವಕಾಲಿಕ ಗರಿಷ್ಠ ದಾಖಲೆಯಾಗಿದೆ.

- Advertisement -

ಈ ವರ್ಷ ಕೆನಡಾ ಜಾರಿಗೊಳಿಸಿದ ಒಟ್ಟು 16,426 ಉಚ್ಚಾಟನೆಗಳಲ್ಲಿ ಭಾರತೀಯರ ಪಾಲು ಶೇ. 27ಕ್ಕಿಂತ ಹೆಚ್ಚಿದೆ. 2020ರ ನಂತರ ಗಡೀಪಾರಾದವರ ಪಟ್ಟಿಯಲ್ಲಿ ಭಾರತೀಯ ಪ್ರಜೆಗಳು ಅಗ್ರಸ್ಥಾನಕ್ಕೇರಿರುವುದು ಇದೇ ಮೊದಲ ಬಾರಿಯಾಗಿದೆ. 2021ರಿಂದ 2025ರವರೆಗೆ ಮೆಕ್ಸಿಕೊ ದೇಶದ ನಾಗರಿಕರು ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರು. 2025ರಲ್ಲಿ 3,779 ಭಾರತೀಯರನ್ನು ಕೆನಡಾದಿಂದ ಹೊರಕಳುಹಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿ ಹತ್ಯೆಯನ್ನು ಸಮರ್ಥಿಸುವ ದುರುಳರಿಗೆ ಸರ್ದಾರ್ ಪಟೇಲರ ಪತ್ರಗಳೇ...

ಗಾಂಧಿ ಹತ್ಯೆಯ ಕುರಿತು ಅಡ್ಡಂಡ ಕಾರ್ಯಪ್ಪ ರಚಿಸಿರುವ ನಾಟಕ ಬೆಂಗಳೂರಿನಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ನಾಟಕದಲ್ಲಿ ಗಾಂಧೀಜಿಯನ್ನು ದೇಶವಿರೋಧಿಯಂತೆ ಬಿಂಬಿಸಿ, ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಸಮರ್ಥಿಸುವ ಪ್ರಯತ್ನ ನಡೆದಿದೆ. ಗಾಂಧಿ ಹತ್ಯೆಯ...

ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು...

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ ರಾಷ್ಟ್ರ ರಾಜಕಾರಣವನ್ನೇ ವ್ಯಾಪಿಸಿತು. ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ವಿದ್ಯಾರ್ಥಿ ಶಕ್ತಿಯ ಸಾಮರ್ಥ್ಯ ಮತ್ತು ಜನಾಂದೋಲನಗಳ ಸಂಕೀರ್ಣತೆಯನ್ನು ನೆನಪಿಸುವ ಬೆಳಕಿನ ಅಧ್ಯಾಯ ದೆಹಲಿಯಲ್ಲಿ...

ಮೋದಿಗೆ ರಾಹುಲ್‌ ಬಹಿರಂಗ ಸವಾಲು; ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಟ...

ಭಾರತೀಯ ರಾಜಕಾರಣದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ಚರ್ಚೆಯಾಗುತ್ತಿರುವ ಪ್ರಮುಖ ಕೇಂದ್ರಬಿಂದು ರಾಹುಲ್ ಗಾಂಧಿ. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಪ್ರತಿಪಕ್ಷಗಳನ್ನು ದಮನ ಮಾಡಲು, ಹತ್ತಿಕ್ಕಲು ಮತ್ತು ನಾಯಕರ ವ್ಯಕ್ತಿತ್ವವನ್ನು ಹನನ...

ಇದನ್ನೂ ಓದಿ: ಈ ದಿನ ಸಂಪಾದಕೀಯ | ದುರಹಂಕಾರಿ ದೊಡ್ಡಣ್ಣನ ಎದುರು ಮಂಡಿಯೂರಿದ ಮೋದಿ

CBSA ನೀಡಿದ ಮಾಹಿತಿಯ ಪ್ರಕಾರ, ಪ್ರಸ್ತುತ ಉಚ್ಚಾಟನೆ ಪ್ರಕ್ರಿಯೆಯ ಹಂತದಲ್ಲಿರುವ ಒಟ್ಟು 52,457 ಪ್ರಕರಣಗಳ ಪೈಕಿ 11,393ಕ್ಕೂ ಹೆಚ್ಚು ಪ್ರಕರಣಗಳು ಭಾರತೀಯ ನಾಗರಿಕರಿಗೆ ಸಂಬಂಧಿಸಿವೆ.

ವಲಸೆ ನಿಯಮಗಳ ಉಲ್ಲಂಘನೆ, ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ಉಳಿದುಕೊಂಡಿರುವುದು, ನಿರಾಶ್ರಿತರ ಅರ್ಜಿ ತಿರಸ್ಕೃತಗೊಂಡಿರುವುದು, ತಪ್ಪು ಮಾಹಿತಿ ಅಥವಾ ನಕಲಿ ದಾಖಲೆ ಸಲ್ಲಿಕೆ ಮತ್ತು ಕ್ರಿಮಿನಲ್ ಹಿನ್ನೆಲೆಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

“ಕೆನಡಾಕ್ಕೆ ಪ್ರವೇಶಿಸಲು ಅಥವಾ ಇಲ್ಲಿ ನೆಲೆಸಲು ಕಾನೂನುಬದ್ಧ ಹಕ್ಕಿಲ್ಲದ ವ್ಯಕ್ತಿಗಳನ್ನು ತೆರವುಗೊಳಿಸುವುದು ನಮ್ಮ ವಲಸೆ ವ್ಯವಸ್ಥೆಯ ಪ್ರಾಮಾಣಿಕತೆ ಮತ್ತು ನಿಷ್ಠೆಯನ್ನು ಎತ್ತಿಹಿಡಿಯಲು ಹಾಗೂ ಕಾನೂನುಬದ್ಧವಾಗಿ ಬರುವವರಿಗೆ ನ್ಯಾಯ ಒದಗಿಸಲು ಅತ್ಯಗತ್ಯವಾಗಿದೆ” ಎಂದು ಕೆನಡಾ ಗಡಿ ಸೇವೆಗಳ ಸಂಸ್ಥೆ (CBSA) ತನ್ನ ಹೇಳಿಕೆಯಲ್ಲಿ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ನ.12ರಂದು ಜಿಲ್ಲಾಮಟ್ಟದ ಯುವಜನೋತ್ಸವ

ಯುವಜನರಲ್ಲಿ ಅಡಗಿರುವ ಸೃಜನಶೀಲ ಪ್ರತಿಭೆ ಹಾಗೂ ಕಲಾತ್ಮಕ ಅಭಿವ್ಯಕ್ತಿಯನ್ನು ಗುರುತಿಸಿ ಪ್ರೋತ್ಸಾಹಿಸುವ...

ವಿಜಯಪುರ | ಜನಗಣತಿ-2027 ನಿಖರವಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ

ಮುಂದಿನ ಹತ್ತು ವರ್ಷಗಳ ಅಭಿವೃದ್ಧಿ ಯೋಜನೆ, ಬಜೆಟ್ ಹಂಚಿಕೆ, ಎಸ್‌ಸಿಪಿ-ಟಿಎಸ್‌ಪಿ ಅನುದಾನ...

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಸತತ 2ನೇ ದಿನ ಕಾಂಗ್ಪೋಕ್ಪಿ ಬಂದ್, ಜನಜೀವನ ಸ್ತಬ್ಧ

ಕಣ್ಮರೆಯಾಗಿದ್ದ ಕುಕಿ ಸಮುದಾಯದ ಇಬ್ಬರು ಯುವಕರ ಮೃತದೇಹಗಳು ಭೀಕರವಾಗಿ ಹತ್ಯೆಯಾದ ಸ್ಥಿತಿಯಲ್ಲಿ...

ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು ನಡುಗಿಸಿದ್ದ ವಿದ್ಯಾರ್ಥಿ-ಯುವಜನ ಆಕ್ರೋಶ, ಮೋಶಾ ಜೋಡಿಯ ಕಿತ್ತೆಸೆಯಬಲ್ಲದೇ?

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ...