ಅಸ್ಸಾಂನ ಅಗರ್ತಲಾದಿಂದ ಮುಂಬೈಗೆ ತೆರಳುತ್ತಿದ್ದ ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್ ರೈಲು ಡಿಬಾಲೊಂಗ್ ನಿಲ್ದಾಣದ ಬಳಿ ಹಳಿ ತಪ್ಪಿದೆ ಎಂದು ರೈಲ್ವೆ ವಕ್ತಾರ ತಿಳಿಸಿದ್ದಾರೆ.
ಗುರುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಲಾಮ್‌ಡಿಂಗ್ ವಿಭಾಗದ ಲಾಮ್‌ಡಿಂಗ್-ಬರ್ದಾರ್ಪುರ್ ಮಾರ್ಗದಲ್ಲಿ ಈ ಅವಘಡ ಸಂಭವಿಸಿದೆ. ಬೆಳಿಗ್ಗೆ ಅಗರ್ತಲಾದಿಂದ ಹೊರಟಿದ್ದ ರೈಲು ಮುಂಬೈಗೆ ತೆರಳುತ್ತಿತ್ತು. ರೈಲಿನ ಎಂಜಿನ್ ಸೇರಿದಂತೆ ಎಂಟು ಬೋಗಿಗಳು ಹಳಿತಪ್ಪಿವೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಗೊಂಡಿರುವ ಬಗ್ಗೆ ವರದಿಯಾಗಿಲ್ಲ
ಸಿನಿಮಾ ಲಾಮ್‌ಡಿಂಗ್-ಬರ್ದಾರ್ಪುರ್ ಮಾರ್ಗದ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ವೈದ್ಯಕೀಯ ನೆರವಿಗಾಗಿ ಸ್ಥಳಕ್ಕೆ ರೈಲು ರವಾನಿಸಲಾಗಿದೆ ಎಂದು ಅಧಿಕಾರಿಗಳು ಮಾಧ್ಯಮಗಳಿಗೆ ಹೇಳಿದ್ದಾರೆ.