ಒಡಿಶಾ ವಿಧಾನಸಭೆ ಚುನಾವಣೆ | ಬಿಜೆಪಿ ಮುನ್ನಡೆ; ಆಡಳಿತಾರೂಢ ಬಿಜೆಡಿಗೆ ಭಾರೀ ಹಿನ್ನಡೆ

Date:

ಒಡಿಶಾದಲ್ಲಿ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳು ಏಕಕಾಲದಲ್ಲೇ ನಡೆದಿದ್ದು, ಇಂದು ಎರಡು ಚುನಾವಣೆಗಳ ಮತ ಎಣಿಕೆ ನಡೆಯುತ್ತಿದೆ. ರಾಜ್ಯದ 147 ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ 21 ಲೋಕಸಭಾ ಸ್ಥಾನಗಳಿಗೆ ಚುನಾವಣೆ ನಡೆದಿದೆ. ಸದ್ಯ, ವಿಧಾನಸಭೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಆಡಳಿತಾರೂಢ ಬಿಜೆಡಿ ಹಿನ್ನಡೆ ಅನುಭವಿಸುತ್ತಿದೆ.

- Advertisement -

ಒಡಿಶಾದಲ್ಲಿ ಆಡಳಿತಾರೂಢ ಬಿಜೆಡಿಗೆ ಭಾರೀ ಹಿನ್ನಡೆಯಾಗಿದೆ. 147 ಸದಸ್ಯ ಬಲದ ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 34ರಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಆಡಳಿತಾರೂಢ ಬಿಜೆಡಿ 20 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿರುವ ಮೂಲಕ ಸೋಲಿನ ಭೀತಿ ಎದುರಿಸುತ್ತಿದೆ. ಕಾಂಗ್ರೆಸ್‌‍ 5 ಸ್ಥಾನಗಳಲ್ಲಿ ಗೆಲುವಿನ ಹಾದಿಯಲ್ಲಿದೆ. ಸಿಪಿಎಂ ಪಕ್ಷ ಒಂದು ಸ್ಥಾನದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಭಾರತೀಯ ಚುನಾವಣಾ ಆಯೋಗದ ಪ್ರಕಾರ, ಘಾಸಿಪುರದಲ್ಲಿ ಸ್ವತಂತ್ರ ಅಭ್ಯರ್ಥಿ ಸೌಮ್ಯ ರಂಜನ್ ಪಟ್ನಾಯಕ್ ಕೂಡ ಮುಂದಿದ್ದಾರೆ. ಬಿಜೆಪಿ-ಟಿಡಿಪಿ ಮೈತ್ರಿಯು ಅಂಚೆ ಮತಪತ್ರ ಮತಗಳಲ್ಲಿ ಮುನ್ನಡೆ ಸಾಧಿಸಿದೆ.

ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಬಿಜೆಡಿಯ ಭದ್ರಕೋಟೆಯಾಗಿದ್ದು, ಬಿಜೆಪಿಯು ವಿಧಾನಸಭೆ ಚುನಾವಣೆಗಳಲ್ಲಿ ಗಮನಾರ್ಹ ಲಾಭವನ್ನು ಗಳಿಸಲು ಪ್ರಯತ್ನಿಸುತ್ತಿರುವುದರಿಂದ ತೀವ್ರ ಸ್ಪರ್ಧೆಯನ್ನು ಎದುರಿಸುತ್ತಿದೆ. ಈ ಬಾರಿ ಒಡಿಶಾದಲ್ಲಿ ನವೀನ್‌ ಪಟ್ನಾಯಕ್‌ ಅಧಿಕಾರ ಕಳೆದುಕೊಳ್ಳುವ ಸಾಧ್ಯತೆ ಇದ್ದಿರುವುದಾಗಿ ಸಮೀಕ್ಷೆಗಳು ಹೇಳಿವೆ.

ಇಂಡಿಯಾ ಟುಡೇ ಮತ್ತು ಆಕ್ಸಿಸ್‌ ಮೈ ಇಂಡಿಯಾ ಸಮೀಕ್ಷೆ ಪ್ರಕಾರ, ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 62 ರಿಂದ 80 ಸ್ಥಾನ ಪಡೆಯುವ ಸಾಧ್ಯತೆ ಇದೆ. ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ನೇತೃತ್ವದ ಬಿಜೆಡಿ 50ರಿಂದ 60 ಸ್ಥಾನ ಪಡೆಯಲಿದೆ ಎಂದು ಸಮೀಕ್ಷೆ ಭವಿಷ್ಯ ನುಡಿದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಜೆಪಿ ಭದ್ರಕೋಟೆಗಳನ್ನು ಭೇದಿಸುವುದೇ ಕಾಂಗ್ರೆಸ್‌?

ಕಾಂಗ್ರೆಸ್‌ ಪಕ್ಷ 5ರಿಂದ 8 ಸ್ಥಾನ ಪಡೆಯುವ ಸಾಧ್ಯತೆ ಇದೆ ಎಂದು ಸಮೀಕ್ಷೆ ಉಲ್ಲೇಖಿಸಿದೆ. ಬಿಜೆಪಿಯ ಮತ ಪ್ರಮಾಣ ಶೇ.42ರಷ್ಟು ಹೆಚ್ಚಳವಾಗಲಿದ್ದು, ಬಿಜೆಡಿ ಮತ ಪ್ರಮಾಣ ಶೇ.42ರಷ್ಟು ಕುಸಿಯಲಿದ್ದು, ಕಾಂಗ್ರೆಸ್‌ ಕೇವಲ ಶೇ.12ರಷ್ಟು ಮತ ಪಡೆಯಲಿದೆ ಎಂದು ಸಮೀಕ್ಷೆ ತಿಳಿಸಿದೆ.

2019ರ ಒಡಿಶಾ ವಿಧಾನಸಭಾ ಚುನಾವಣೆ

2019ರಲ್ಲಿ ನಡೆದ ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಬಿಜು ಜನತಾ ದಳ 147 ಸದಸ್ಯಬಲದಲ್ಲಿ 112 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಬಿಜೆಪಿ 23 ಕ್ಷೇತ್ರಗಳಲ್ಲಿ, ಕಾಂಗ್ರೆಸ್‌ 9 ಸ್ಥಾನಗಳಲ್ಲಿ ಜಯ ಸಾಧಿಸಿತ್ತು. 2024ರ ಲೋಕಸಭೆ ಚುನಾವಣೆ ಹಾಗೂ ಒಡಿಶಾ ವಿಧಾನಸಭೆ ಚುನಾವಣಾ ಫಲಿತಾಂಶ ಜೂನ್‌ 4ರಂದು ಬಹಿರಂಗವಾಗಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಎಐ ಸೃಷ್ಟಿಸುವ ಕೃತಕ ಪ್ರೋಟೀನ್‌ಗಳಿಗೆ ಗೂಗಲ್‌ನಿಂದ ‘ಡಿಜಿಟಲ್ ಮುದ್ರೆ’: ಜೈವಿಕ ಅಪಾಯ ತಡೆಯಲು ಹೊಸ ಅಸ್ತ್ರ

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಲ್ಯಾಬ್‌‌ಗಳಲ್ಲಿ ಹೊಸ ಬಗೆಯ ಪ್ರೋಟೀನ್‌ಗಳನ್ನು...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...