ಮಧ್ಯ ಪ್ರದೇಶ: ಕಾಶ್ಮೀರದಿಂದ ಕರ್ನಾಟಕಕ್ಕೆ ಬರುತ್ತಿದ್ದ ಸೇನೆಯ ವಿಶೇಷ ರೈಲು ಸ್ಫೋಟಕ್ಕೆ ಯತ್ನ

Date:

ಮಧ್ಯಪ್ರದೇಶದ ಬುರ್ಹಾನ್‍ಪುರ ಜಿಲ್ಲೆಯಲ್ಲಿ ಸೇನಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಶೇಷ ರೈಲನ್ನು ಸ್ಫೋಟಿಸಲು ಯತ್ನಿಸಿರುವ ಘಟನೆ ನಡೆದಿದೆ. ಸೇನೆಯ ವಿಶೇಷ ರೈಲು ಜಮ್ಮು- ಕಾಶ್ಮೀರದಿಂದ ಕರ್ನಾಟಕಕ್ಕೆ ತೆರಳುತ್ತಿದ್ದಾಗ ಸಗ್ಫಾಟ ರೈಲು ನಿಲ್ದಾಣದ ಬಳಿ ಸ್ಫೋಟಕ್ಕೆ ಯತ್ನ ನಡೆದಿದೆ.

- Advertisement -

ಮಧ್ಯಪ್ರದೇಶದ ರೈಲ್ವೆ ಹಳಿಯಲ್ಲಿ ಕನಿಷ್ಠ 10 ಡಿಟೋನೇಟರ್‌ಗಳು ಹಾಗೂ ಗ್ಯಾಸ್ ಸಿಲಿಂಡರ್ ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕಾರಿಪುರ | ಬೀಗರೂಟ ಹಾಕಿದ್ರೆ 1 ಲಕ್ಷ, ಉಂಡ್ರೆ...

ಮದುವೆ ಅಂದರೆ ಕೇವಲ ಎರಡು ಮನಸುಗಳ ಮಿಲನ ಮಾತ್ರವಲ್ಲ, ಬಂಧು-ಬಳಗದ ಸಂಭ್ರಮ. ಆದರೆ ಇತ್ತೀಚಿನ ದಿನಗಳಲ್ಲಿ ಮದುವೆ ಮತ್ತು ಆದಾದ ಬಳಿಕ ಅದ್ದೂರಿಯಾಗಿ ಹಮ್ಮಿಕೊಳ್ಳುವ 'ಬೀಗರ ಊಟ' (ಬಾಡೂಟ) ಕೇವಲ ಸಂಪ್ರದಾಯವಾಗಿ ಉಳಿಯದೆ,...

ನಾಳೆ ಜಿಎಸ್‌ಟಿ ಮಂಡಳಿ ಸಭೆ: ಅಧಿಕಾರ ಹಂಚಿಕೆಯ ಅಸಮತೋಲನ;...

ಜಿಎಸ್‌ಟಿ ಮಂಡಳಿಯು ದೇಶದ 'ಸಹಕಾರ ಒಕ್ಕೂಟ ವ್ಯವಸ್ಥೆ'ಗೆ ಒಂದು ಉದಾಹರಣೆಯಾಗಿದ್ದರೂ, ಮತದಾನದ ಪ್ರಕ್ರಿಯೆಯಲ್ಲಿ ಕೇಂದ್ರಕ್ಕಿರುವ ಮೇಲುಗೈ ರಾಜ್ಯಗಳ ಸ್ವಾಯತ್ತತೆಗೆ ಧಕ್ಕೆ ತರುತ್ತಿದೆ ಎಂಬುದು ಸ್ಪಷ್ಟ. ಜಿಎಸ್‌ಟಿ ಜಾರಿಗೆ ಬಂದ ನಂತರ ರಾಜ್ಯಗಳು ತಮ್ಮ...

ತನ್ನ ಕಾದಂಬರಿಗಳ ಪಾತ್ರಗಳಂತೆಯೇ ಜೀವಿಸಿದ್ದ ಜನಪ್ರಿಯ ಕಾದಂಬರಿಕಾರ ಜೆಫ್ರಿ...

ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್, ತಮ್ಮ 86ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸೇನೆ, ಪೊಲೀಸ್, ದೈಹಿಕ ಶಿಕ್ಷಣ ಶಿಕ್ಷಕ, ರಾಜಕಾರಣಿ, ಕಾದಂಬರಿಕಾರ... ಅವರ ಬದುಕೇ ಕಾದಂಬರಿಯ ಕಥಾವಸ್ತುವಾಗಿತ್ತು. ತಮ್ಮ ಬದುಕಿನ ಕೊನೆಯ ದಿನವೂ ಅವರು...

ರೈಲು ಡಿಟೋನೇಟರ್‍ರ್‌ಗಳ ಮೇಲೆ ಹಾದು ಹೋಗುತ್ತಿದ್ದಂತೆ ಸ್ಫೋಟದಿಂದ ಲೋಕೋ ಪೈಲಟ್ ರೈಲನ್ನು ತಕ್ಷಣವೇ ನಿಲ್ಲಿಸಿದ್ದಾರೆ. ನಂತರ ಠಾಣಾಧಿಕಾರಿಗೆ ಮಾಹಿತಿ ನೀಡಿದರು. ಘಟನೆಯಲ್ಲಿ ಯಾರಿಗೂ ಹಾನಿಯಾಗಿಲ್ಲ.

ಭಯೋತ್ಪಾದನಾ ನಿಗ್ರಹ ದಳ, ರಾಷ್ಟ್ರೀಯ ತನಿಖಾ ಸಂಸ್ಥೆ, ರೈಲ್ವೆ ಮತ್ತು ಸ್ಥಳೀಯ ಪೊಲೀಸರು ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಡಿನೋಟಿಫಿಕೇಷನ್ ಹಗರಣ: ಲೋಕಾಯುಕ್ತ ತನಿಖೆ ತೆವಳುತ್ತಿರುವುದೇಕೆ?

ಅದೇ ರೀತಿ, ಉತ್ತರ ಪ್ರದೇಶದ ಕಾನ್ಪುರದ ಪ್ರೇಂಪುರ್ ರೈಲು ನಿಲ್ದಾಣದ ಬಳಿ ಹಳಿಗಳ ಮೇಲೆ ಭಾನುವಾರ ಖಾಲಿ ಗ್ಯಾಸ್ ಸಿಲಿಂಡರ್‌ಗಳು ಪತ್ತೆಯಾಗಿವೆ. ಗೂಡ್ಸ್ ರೈಲು ಲೋಕೋ ಪೈಲಟ್ ರೈಲು ನಿಲ್ಲಿಸಲು ತುರ್ತು ಬ್ರೇಕ್ ಹಾಕಿ ನಿಲ್ಲಿಸಿದ್ದಾರೆ.

ರೈಲು ಕಾನ್ಪುರದಿಂದ ಪ್ರಯಾಗ್‍ರಾಜ್‍ಗೆ ತೆರಳುತ್ತಿದ್ದಾಗ ಬೆಳಗ್ಗೆ 8.10ಕ್ಕೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ತಿಂಗಳಲ್ಲಿ ಉತ್ತರ ಪ್ರದೇಶದಲ್ಲಿ ನಡೆದ ಎರಡನೇ ಪ್ರಕರಣ ಇದಾಗಿದೆ. ಸೆಪ್ಟೆಂಬರ್ 8 ರಂದು, ಪ್ರಯಾಗರಾಜ್‍ನಿಂದ ಭಿವಾನಿ ಕಡೆಗೆ ಹೋಗುತ್ತಿದ್ದ ಕಾಳಿಂದಿ ಎಕ್ಸ್‍ಪ್ರೆಸ್‍ನ್ನು ಹಳಿಗಳ ಮೇಲೆ ಎಲ್‍ಪಿಜಿ ಸಿಲಿಂಡರ್ ಇರಿಸುವ ಮೂಲಕ ಹಳಿತಪ್ಪಿಸಲು ಪ್ರಯತ್ನಿಸಲಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೈಲಿನಲ್ಲಿರುವ ಪುನೀತ್ ಕೆರೆಹಳ್ಳಿ ವಿರುದ್ಧ ‘ಬಾಡಿ ವಾರೆಂಟ್’ ಜಾರಿ: ಕೋರ್ಟ್ ಈ ಆದೇಶ ನೀಡಿದ್ದೇಕೆ?

ಹಿಂದುತ್ವ ಕೋಮುವಾದಿ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ...

ದೆಹಲಿ ಪ್ರತಿಭಟನೆ ವೇಳೆ ಪತ್ರಕರ್ತೆಗೆ ಕಿರುಕುಳ ಆರೋಪ; ಎಸಿಪಿ ಭಗತ್ ಬಡ್ತಿಗೆ ಬ್ರೇಕ್‌

CEC ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆ ವೇಳೆ ಮಹಿಳಾ ಪತ್ರಕರ್ತರಿಗೆ ಲೈಂಗಿಕ...

ಚುನಾವಣಾ ಆಯೋಗವು ತಾನೇ ಹಾಕಿಕೊಂಡ ಗಂಟುಗಳನ್ನು ಬಿಡಿಸಿಕೊಳ್ಳಬಲ್ಲದೇ? ಇದೇ ಈಗಿನ ಪ್ರಶ್ನೆ

SIR ನಡೆಸುವ ನಿರ್ಧಾರ ಸರ್ವಾನುಮತದಿಂದ ಕೂಡಿತ್ತು ಎಂದು ಜನ ನಂಬಬೇಕಾದರೆ, ಆಯೋಗವು...

ಆಕಾಶವಾಣಿ ಭವನಕ್ಕೆ ಬಲವಂತದ ಪ್ರವೇಶ ಆರೋಪ: ರಾಹುಲ್, ಪ್ರಿಯಾಂಕಾ ವಿರುದ್ಧ FIR

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಪಕ್ಷಗಳ ಪ್ರತಿಭಟನೆ ವೇಳೆ...