ಉಕ್ರೇನ್ ಮೇಲೆ ರಷ್ಯಾ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ: 9 ಸಾವು, 28 ಮಂದಿಗೆ ಗಾಯ

Date:

ಉಕ್ರೇನ್ ರಾಜಧಾನಿ ಕೀವ್ ನಗರದ ಮೇಲೆ ರಷ್ಯಾ ಶನಿವಾರ ಅತ್ಯಂತ ಭೀಕರವಾದ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ ನಡೆಸಿದೆ. ಈ ಭೀಕರ ದಾಳಿಯಲ್ಲಿ ಕನಿಷ್ಠ 9 ಮಂದಿ ಮೃತಪಟ್ಟಿದ್ದು, ನಾಲ್ವರು ಮಕ್ಕಳು ಸೇರಿದಂತೆ 28ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಕೀವ್ ನಗರದಾದ್ಯಂತ ಹನ್ನೆರಡಕ್ಕೂ ಹೆಚ್ಚು ಭಾರಿ ಸ್ಫೋಟಗಳ ಸದ್ದು ಕೇಳಿಬಂದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

- Advertisement -

ದಾಳಿಯಿಂದಾಗಿ ನಗರದ ಒಟ್ಟು 7 ಜಿಲ್ಲೆಗಳಲ್ಲಿ ಅಪಾರ ಹಾನಿ ಸಂಭವಿಸಿದೆ. ಡ್ನಿಪ್ರೊ ನದಿಯ ಎಡದಂಡೆಯಲ್ಲಿರುವ ಡರ್ನಿಟ್ಸ್ಕಿ ಜಿಲ್ಲೆಯಲ್ಲಿ 7 ಜನರು ಮತ್ತು ಬಲದಂಡೆಯಲ್ಲಿರುವ ಸೊಲೊಮಿಯನ್ಸ್ಕಿ ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ದಾಳಿಯಿಂದಾಗಿ ವಸತಿ ಕಟ್ಟಡಗಳು, ಕಾರುಗಳು ಬೆಂಕಿಗಾಹುತಿಯಾಗಿದ್ದು, ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಗಾಯಗೊಂಡ 28 ಜನರಲ್ಲಿ ನಾಲ್ವರು ಮಕ್ಕಳಿಗೆ ತೀವ್ರ ಗಾಯಗಳಾಗಿವೆ ಎಂದು ಪ್ರಾಸಿಕ್ಯೂಟರ್ ಜನರಲ್ ಕಚೇರಿ ಮಾಹಿತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಘಟನಾ ಸ್ಥಳದಲ್ಲಿ ಅಗ್ನಿಶಾಮಕ ದಳ ಮತ್ತು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದು, ಸುಟ್ಟು ಕರಕಲಾದ ಕಾರುಗಳ ನಡುವೆ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಮೃತದೇಹಗಳನ್ನು ಕಪ್ಪು ಚೀಲದಲ್ಲಿ ತುಂಬಿ ಸಾಗಿಸುತ್ತಿರುವ ದೃಶ್ಯಗಳು ಮನಕಲುಕುವಂತಿದ್ದವು. “ಮಧ್ಯರಾತ್ರಿ 1:30ರ ಸುಮಾರಿಗೆ ಸೈರನ್ ಮೊಳಗಿದ ತಕ್ಷಣವೇ ಎಚ್ಚರವಾಯಿತು. ಸತತ ಸ್ಫೋಟಗಳಿಂದ ಕಟ್ಟಡದ ಛಾವಣಿ ಕುಸಿದು ಬಿತ್ತು,” ಎಂದು 68 ವರ್ಷದ ವೃದ್ಧೆ ನಾದಿಯಾ ಕೊಮರೊವಾ ಆತಂಕ ಹಂಚಿಕೊಂಡಿದ್ದಾರೆ.

ದಾಳಿಯ ಕುರಿತು ಕಳವಳ ವ್ಯಕ್ತಪಡಿಸಿರುವ ಉಕ್ರೇನ್ ವಿದೇಶಾಂಗ ಸಚಿವ ಆಂಡ್ರಿ ಸಿಬಿಹಾ, “ಕೀವ್ ಪಾಲಿಗೆ ಇದೊಂದು ನರಕಸದೃಶ ರಾತ್ರಿ. ಯುದ್ಧಭೂಮಿಯಲ್ಲಿ ಗುರಿ ಸಾಧಿಸುವಲ್ಲಿ ವಿಫಲವಾಗಿರುವ ರಷ್ಯಾ, ಹತಾಶೆಯಿಂದ ನಾಗರಿಕರ ಮೇಲೆ ದಾಳಿ ತೀವ್ರಗೊಳಿಸಿದೆ. ನಮಗೆ ತುರ್ತಾಗಿ ಹೆಚ್ಚುವರಿ ವಾಯು ರಕ್ಷಣಾ ವ್ಯವಸ್ಥೆಗಳ ಅಗತ್ಯವಿದೆ,” ಎಂದಿದ್ದಾರೆ. ಆದರೆ 2022ರಲ್ಲಿ ಪ್ರಾರಂಭವಾದ ಈ ಯುದ್ಧದಲ್ಲಿ ನಾಗರಿಕರನ್ನು ಗುರಿಯಾಗಿಸಿ ದಾಳಿ ನಡೆಸುತ್ತಿಲ್ಲ ಎಂದು ರಷ್ಯಾ ಎಂದಿನಂತೆ ನಿರಾಕರಿಸಿದೆ.

ರಷ್ಯಾ–ಉಕ್ರೇನ್ ಯುದ್ಧವು ಐದನೇ ವರ್ಷಕ್ಕೆ ಕಾಲಿಟ್ಟಿದ್ದು, ಸೇನಾ ಮುನ್ನಡೆ ನಿಧಾನಗೊಂಡಿರುವ ಹಿನ್ನೆಲೆಯಲ್ಲಿ ರಷ್ಯಾ ಕೀವ್ ಮೇಲೆ ದಾಳಿ ಹೆಚ್ಚಿಸಿದೆ. ಈ ವಾರ ಕೀವ್ ಮೇಲೆ ನಡೆದ ಎರಡನೇ ಅತಿ ದೊಡ್ಡ ದಾಳಿ ಇದಾಗಿದ್ದು, ಗುರುವಾರ ಕ್ರಿವಿ ರಿಹ್ ಬಳಿ ನಡೆದ ದಾಳಿಯಲ್ಲೂ 9 ಮಂದಿ ಮೃತಪಟ್ಟಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಂದೇ ಮಾತರಂ ಚರಣಗಳ ಮೊಟಕು: ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ

ವಂದೇ ಮಾತರಂ ಗೀತೆಯ ಕೆಲವು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ...

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...